ನಾಪೋಕ್ಲು, ಮೇ ೧೩ : ಇಲ್ಲಿಗೆ ಸಮೀಪದ ಎಮ್ಮೆ ಮಾಡಿನಲ್ಲಿ ಕಾಂಗ್ರೆಸ್ ಪಕ್ಷದ ವಿಜಯೋತ್ಸವ ಸಂಭ್ರಮಾಚರಣೆ ಸಂದರ್ಭ ಬಿಜೆಪಿ ಕಾರ್ಯಕರ್ತರ ಮನೆಗೆ ಕಾಂಗ್ರೆಸಿಗರ ಗುಂಪು ಮಾರಕಾಯುಧಗಳೊಂದಿಗೆ ನುಗ್ಗಿ ದಾಂಧಲೆ ಮಾಡಿದ ಘಟನೆ ನಡೆದಿದೆ. ಪರಸ್ಪರ ತಳ್ಳಾಟ, ನೂಕಾಟ, ಮಾತಿನ ಚಕಮಕಿ ಏರ್ಪಟ್ಟಿದೆ. ಈ ಸಂಬAಧ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಕಾಂಗ್ರೆಸಿಗರ ಈ ರೀತಿಯ ನಡವಳಿಕೆ ಬಗ್ಗೆ ಅಸಮಾಧಾನ ವ್ಯಕ್ತವಾಗುತ್ತಿದೆ.