ವೀರಾಜಪೇಟೆ, ಮೇ ೧೩: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿAದ ಪ್ರತಿಭಾ ಪುರಸ್ಕಾರವನ್ನು ನೀಡಿ ಗೌರವಿಸಲಾಗುತ್ತದೆ. ಅದರಂತೆ ಈ ಬಾರಿಯು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ವೀರಾಜಪೇಟೆ ತಾಲೂಕು ಅಧ್ಯಕ್ಷ ಬಿ.ಎಸ್. ಗುರುರಾಜ್ ತಿಳಿಸಿದರು.
ವೀರಾಜಪೇಟೆ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ೨೦೨೩ನೇ ಸಾಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಹಾಗೂ ಪಿ.ಯು.ಸಿ.ಯಲ್ಲಿ ಶೇ. ೯೦ಕ್ಕಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳು ಆನ್‌ಲೈನ್ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಪೋಷಕರು ರಾಜ್ಯ ಸರ್ಕಾರಿ ನೌಕರರಾಗಿರಬೇಕು. ನೌಕರರ ಸಂಘದ ಸದಸ್ಯರಾಗಿರಬೇಕು. ಸಂಘದಿAದ ನಿಗದಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ/ತಾಲೂಕು ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ದೃಢೀಕರಿಸಿ ಸಲ್ಲಿಸುವುದು. ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಮತ್ತು ಅನುದಾನಿತ ವಿದ್ಯಾಸಂಸ್ಥೆಯ ನೌಕರರಾಗಿದ್ದಲ್ಲಿ ಅರ್ಜಿ ಸಲ್ಲಿಸುವಂತಿಲ್ಲ. ನಮೂನೆ ಹಾಗೂ ಅಗತ್ಯ ದಾಖಲೆಗಳಿಲ್ಲದಿದ್ದಲ್ಲಿ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ತಾ. ೩೧ ಆಗಿರುತ್ತದೆ. ಹೆಚ್ಚಿನ ಮಾಹಿತಿಗಳಿಗೆ ೦೮೦ ೨೨೩೫೪೭೮೩/೮೪, ೯೯೦೨೧೩೫೮೧೩ ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಹೇಳಿದರು.
ಗೋಷ್ಠಿಯಲ್ಲಿ ಕಾರ್ಯದರ್ಶಿ ಬಿ.ಎ. ದೇವರಾಜ್, ಖಜಾಂಚಿ ಎ.ಬಿ. ಲಲಿತಾ, ರಾಜ್ಯ ಪರಿಷತ್ ಸದಸ್ಯ ಈ ಸುರೇಂದ್ರ ಉಪಸ್ಥಿತರಿದ್ದರು.