ಮಡಿಕೇರಿ, ಮೇ ೧೪: ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತನ್ನನ್ನು ರಂಗಾಯಣ ನಿರ್ದೇಶಕನನ್ನಾಗಿ ನೇಮಿಸಿದ್ದ ಸರಕಾರ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಉಲ್ಲೇಖಿಸಿ ಕಾರ್ಯಪ್ಪ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಗಳಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.