ಮಡಿಕೇರಿ, ಮೇ ೧೬: ಪೊನ್ನಂಪೇಟೆ ೬೬/೧೧ ಕೆ.ವಿ. ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಎಫ್ ೧೦ ಹೈಸೊಡ್ಲೂರು ಫೀಢರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ತಾ. ೧೭ ರಂದು (ಇಂದು) ಬೆಳಿಗ್ಗೆ ೯.೩೦ ರಿಂದ ಸಂಜೆ ೫ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಹುದಿಕೇರಿ, ಹೈಸೊಡ್ಲೂರು ಬೆಳ್ಳೂರು, ಕೋಣಗೇರಿ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಕೋರಿದ್ದಾರೆ.