ಚೆಯ್ಯಂಡಾಣೆ, ಮೇ ೧೬: ಎಡಪಾಲ ಕಡಂಗ ಮಾರ್ಗದ ಮುಖ್ಯ ರಸ್ತೆಯ ಬದಿಯಲ್ಲಿ ಜಲಜೀವನ್ ಮಿಷನ್ ಯೋಜನೆಯ ನೀರಿನ ಪೈಪ್ ಅಳವಡಿಸಲು ೩,೪ ತಿಂಗಳ ಮುಂಚೆ ಗುಂಡಿ ತೋಡಿ ಅದರ ಮಣ್ಣನ್ನು ರಸ್ತೆಯ ಬದಿಯಲ್ಲಿ ಹಾಕಿ, ಗುಂಡಿ ಮುಚ್ಚದ ಕಾರಣ ನಿರಂತರ ಅಪಘಾತಗಳು ಸಂಭವಿಸುತ್ತಿದ್ದು ಇದರ ಬಗ್ಗೆ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೂಡಲೇ ಸಂಬAಧಪಟ್ಟ ಗ್ರಾಮ ಪಂಚಾಯಿತಿ ರಸ್ತೆಯ ಬದಿಗಳಲ್ಲಿ ಹಾಕಿರುವ ಮಣ್ಣುಗಳನ್ನು ತೆರವುಗೊಳಿಸಿ ರಸ್ತೆ ಅಪಘಾತವನ್ನು ತಪ್ಪಿಸಬೇಕೆಂದು ಸ್ಥಳೀಯ ಎಸ್‌ಕೆಎಸ್‌ಎಸ್‌ಎಫ್ ಸಂಘಟನೆ ಆಗ್ರಹಿಸಿದೆ. ತಪ್ಪಿದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.