ಸಿದ್ದರಾಮಯ್ಯ-ಡಿ.ಕೆ.ಶಿಯೊಂದಿಗೆ ಪ್ರತ್ಯೇಕ ಸಭೆ

ನವದೆಹಲಿ, ಮೇ ೧೬: ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ನಂತರ ಮುಖ್ಯಮಂತ್ರಿ ಪಟ್ಟಕ್ಕಾಗಿ ತೀವ್ರ ಪೈಪೋಟಿ ನಡೆಯುತ್ತಿದ್ದು, ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜೊತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಪ್ರತ್ಯೇಕ ಸಭೆ ನಡೆಸಿ, ಇಬ್ಬರ ಮಾತನ್ನು ಆಲಿಸಿದ್ದಾರೆ. ಖರ್ಗೆ ಭೇಟಿ ವೇಳೆ ಡಿ.ಕೆ. ಶಿವಕುಮಾರ್ ಅವರು ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದು, ಕೊಟ್ಟರೆ ಸಿಎಂ ಹುದ್ದೆ ಕೊಡಿ. ಇಲ್ಲದಿದ್ದರೆ ನನಗೆ ಯಾವುದೇ ಹುದ್ದೆ ಬೇಡ ಒಬ್ಬ ಶಾಸಕನಾಗಿ ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ. ಖರ್ಗೆ ಅವರೊಂದಿಗೆ ಸಭೆ ಮುಗಿಸಿ ಹೊರಬಂದ ಡಿಕೆ ಶಿವಕುಮಾರ್ ಅವರು ಮಾಧ್ಯಮಕ್ಕೆ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ. ನಾನು ಮೂಲ ಕಾಂಗ್ರೆಸ್ಸಿಗ. ಪಕ್ಷವನ್ನು ತಳಮಟ್ಟದಿಂದ ಕಟ್ಟಿದ್ದೇನೆ. ಸೋತು ಸುಣ್ಣವಾಗಿದ್ದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ. ಮಾತು ಕೊಟ್ಟಂತೆ ನಡೆದಿದ್ದೇನೆ. ಹೊರಗಿನಿಂದ ಬಂದವರು ಅಧಿಕಾರ ಅನುಭವಿಸಿದ್ದಾರೆ. ಮೂಲ ಕಾಂಗ್ರೆಸ್ಸಿಗನಾಗಿರುವ ನನಗೆ ಸಿಎಂ ಸ್ಥಾನ ನೀಡಲೇಬೇಕು ಎಂದು ಡಿಕೆ ಶಿವಕುಮಾರ್ ಹೈಕಮಾಂಡ್ ಮುಂದೆ ಪಟ್ಟು ಹಿಡಿದ್ದಾರೆ ಎನ್ನಲಾಗಿದೆ. ಇನ್ನು ಡಿ.ಕೆ. ಶಿವಕುಮಾರ್ ಜೊತೆ ಚರ್ಚೆ ನಡೆಸಿದ ಬಳಿಕ ಖರ್ಗೆ ಅವರು ಸಿದ್ದರಾಮಯ್ಯ ಅವರೊಂದಿಗೆ ಪ್ರತ್ಯೇಕ ಚರ್ಚೆ ನಡೆಸಿದ್ದು, ಅವರು ಕೂಡ ಪಟ್ಟಕ್ಕಾಗಿ ಪಟ್ಟು ಹಿಡಿದಿದ್ದಾರೆ.

ಕಾಂಗ್ರೆಸ್ ಗ್ಯಾರೆಂಟಿ ಫಲಾನುಭವಿಗಳಿಗೆ ಷರತ್ತು

ಬೆಂಗಳೂರು, ಮೇ ೧೬: ಚುನಾವಣೆಯಲ್ಲಿ ಗೆಲ್ಲುವ ಮುನ್ನ ೫ ಉಚಿತ ಗ್ಯಾರೆಂಟಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್, ಅಧಿಕಾರಕ್ಕೆ ಬರುತ್ತಿದ್ದಂತೆ ತನ್ನ ವರಸೆ ಬದಲಾಯಿಸಿದೆ. ಕಾಂಗ್ರೆಸ್ ಗ್ಯಾರೆಂಟಿಗಳಿಗೆ ಷರತ್ತು ವಿಧಿಸುವುದಾಗಿ ಜಿ. ಪರಮೇಶ್ವರ್ ಹೇಳಿದ್ದಾರೆ. ಈ ಹಿಂದೆ ಷರತ್ತಿನ ಬಗ್ಗೆ ತಿಳಿಸದೇ ಎಲ್ಲರಿಗೂ ಉಚಿತ ಎಂದು ಕಾಂಗ್ರೆಸ್ ಹೇಳಿತ್ತು. ಸುದ್ದಿಗಾರರೊಂದಿಗೆ ಮಾತನಾಡಿದ ಜಿ. ಪರಮೇಶ್ವರ್, ಕಾಂಗ್ರೆಸ್ ಗ್ಯಾರಂಟಿಗಳಿಗೆ ಕಂಡಿಷನ್ಸ್ ಇರುತ್ತದೆ. ಮೊದಲ ಕ್ಯಾಬಿನೆಟ್‌ನಲ್ಲೇ ೫ ಗ್ಯಾರಂಟಿ ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ಧರಾಗಿ ಇರುತ್ತೇವೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಷರತ್ತುಗಳು ಇರಲಿವೆ ಎಂದು ಹಿರಿಯ ನಾಯಕ ಪರಮೇಶ್ವರ್ ಹೇಳಿದ್ದಾರೆ. ಗ್ರಾಮೀಣ ಭಾಗದ ಜನರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾವು ವಿದ್ಯುತ್ ಶುಲ್ಕ ಪಾವತಿಸುತ್ತಿಲ್ಲ ಎಂದು ಹೇಳುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೊದಲ ಕ್ಯಾಬಿನೆಟ್‌ನಲ್ಲಿ ೫ ಗ್ಯಾರಂಟಿ ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ದರಾಗಿ ಇದ್ದು ಮೊದಲ ಕ್ಯಾಬಿನೆಟ್‌ನಲ್ಲಿ ಜಾರಿ ಮಾಡುತ್ತೇವೆ ಎಂದು ತಿಳಿಸಿದರು. ಆಯಾ ಇಲಾಖೆಯ ಸಚಿವರು ಕೂತು ಗ್ಯಾರಂಟಿ ಜಾರಿ ಮಾಡುವ ಬಗ್ಗೆ ಕೆಲಸ ಮಾಡುತ್ತೇವೆ. ಹಾಗೆಯೇ ನೀಡಿದರೆ ಸುಮ್ಮನೆ ಎಲ್ಲರೂ ತೆಗೆದುಕೊಳ್ಳುತ್ತಾರೆ. ಗ್ಯಾರಂಟಿಗಳಿಗೆ ಮಾನದಂಡ ನಿಗದಿ ಮಾಡಲಾಗುವುದು ಎಂದು ವಿವರಿಸಿದರು.

ಟ್ಯಾಂಕ್ ಸ್ವಚ್ಛಗೊಳಿಸುವಾಗ ಇಬ್ಬರು ಕಾರ್ಮಿಕರ ಸಾವು

ಕೋಟಾ, ಮೇ ೧೬: ಖಾದ್ಯ ತೈಲ ಕಾರ್ಖಾನೆಯೊಂದರಲ್ಲಿ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಪ್ರಜ್ಞೆ ತಪ್ಪಿ ಬಿದ್ದಿರುವ ಘಟನೆ ಕೋಟಾದ ರಾಂಪುರದಲ್ಲಿ ನಡೆದಿದೆ. ಸೋಮವಾರ ಸಂಜೆ ಐದು ಮಂದಿ ಆಯಿಲ್ ಫ್ಯಾಕ್ಟರಿಯ ವಾಟರ್ ಫಿಲ್ಟರ್ ಪ್ಲಾಂಟ್‌ನಿAದ ಕೊಳಕು ನೀರನ್ನು ಸಾಗಿಸುವ ಟ್ಯಾಂಕ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ರಾನ್‌ಪುರ ವೃತ್ತದ ಅಧಿಕಾರಿ (ಸಿಒ) ಬಲ್ವೀರ್ ಸಿಂಗ್ ಹೇಳಿದ್ದಾರೆ. ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಉಸಿರು ಚೆಲ್ಲಿದರೆ, ಮೂವರು ಪ್ರಜ್ಞಾಹೀನರಾಗಿದ್ದರು ಎಂದು ಅವರು ಹೇಳಿದರು. ನಿಗದಿತ ಸಮಯಕ್ಕೆ ಐವರು ಟ್ಯಾಂಕ್‌ನಿAದ ಹೊರಬಾರದಿದ್ದಾಗ ಇತರ ಸಿಬ್ಬಂದಿ ಅಪಾಯವನ್ನು ಅರಿತು ಅವರನ್ನು ರಕ್ಷಿಸಿದ್ದಾರೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಲೋಕೇಶ್ (೨೮) ಮತ್ತು ರಾಮರತನ್ (೩೦) ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಇತರ ಮೂವರು ಕಾರ್ಮಿಕರು ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಸ್ತುತ ಅಪಾಯದಿಂದ ಪಾರಾಗಿದ್ದಾರೆ ಎಂದು ಸಿಒ ಹೇಳಿದರು.

ಅಮೆರಿಕದ ಮ್ಯಾಡಿಸನ್ ಸ್ಕೆ÷್ವÃರ್‌ನಲ್ಲಿ ರಾಹುಲ್ ರ‍್ಯಾಲಿ

ನವದೆಹಲಿ, ಮೇ ೧೬: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೇ ತಿಂಗಳ ೩೦ ರಂದು ೧೦ ದಿನಗಳ ಅಮೆರಿಕ ಭೇಟಿ ಕೈಗೊಳ್ಳಲಿದ್ದಾರೆ. ಜೂನ್ ೪ ರಂದು ರಾಹುಲ್ ಗಾಂಧಿ ನ್ಯೂಯಾರ್ಕ್ನ ಮ್ಯಾಡಿಸನ್ ಸ್ಕೆ÷್ವÃರ್ ಗಾರ್ಡನ್‌ನಲ್ಲಿ ರ‍್ಯಾಲಿ ನಡೆಸಲಿದ್ದಾರೆ. ಇದರಲ್ಲಿ ಸುಮಾರು ೫,೦೦೦ ಅನಿವಾಸಿ ಭಾರತೀಯರು ಭಾಗವಹಿಸಲಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ. ಇದಲ್ಲದೆ, ಅವರು ‘ಪ್ಯಾನೆಲ್ ಡಿಸ್ಕಶನ್’ಗಾಗಿ ವಾಷಿಂಗ್ಟನ್ ಹಾಗೂ ಕ್ಯಾಲಿಫೋರ್ನಿಯಾಗೆ ಭೇಟಿ ನೀಡಲಿದ್ದಾರೆ. ಅಲ್ಲದೇ ಸ್ಟಾನ್ ಫೋರ್ಡ್ ವಿವಿಯಲ್ಲಿ ಭಾಷಣ ಮಾಡಲಿದ್ದಾರೆ. ರಾಜಕಾರಣಿಗಳು ಮತ್ತು ಉದ್ಯಮಿಗಳನ್ನು ಕೂಡಾ ರಾಹುಲ್ ಭೇಟಿಯಾಗಲಿದ್ದಾರೆ.

ಶೈಸ್ತಾ ಪರ್ವೀನ್ ವಿರುದ್ಧ ಲುಕ್‌ಔಟ್ ನೋಟೀಸ್ ಜಾರಿ

ಲಖನೌ, ಮೇ ೧೬: ಹತ್ಯೆಗೀಡಾದ ದರೋಡೆಕೋರ ಅತೀಕ್ ಅಹ್ಮದ್ ಅವರ ಪತ್ನಿ ಶೈಸ್ತಾ ಪರ್ವೀನ್ ಮತ್ತು ಅವರ ಆಪ್ತ ಸಹಾಯಕರಾದ ಗುಡ್ಡು ಮತ್ತು ಸಬೀರ್ ವಿರುದ್ಧ ಪ್ರಯಾಗರಾಜ್ ಪೊಲೀಸರು ಲುಕ್‌ಔಟ್ ನೋಟೀಸ್ ಜಾರಿಗೊಳಿಸಿದ್ದಾರೆ. ಶೈಸ್ತಾ ಪರ್ವೀನ್ ಪತ್ತೆಗಾಗಿ ೫೦,೦೦೦ ರೂಪಾಯಿ ಬಹುಮಾನವನ್ನು ಉತ್ತರ ಪ್ರದೇಶ ಪೊಲೀಸರು ಈಗಾಗಲೇ ಘೋಷಿಸಿದ್ದಾರೆ. ಪ್ರಯತ್ನಪಟ್ಟರೂ ಪರ್ವೀನ್ ಮತ್ತು ಇತರ ಇಬ್ಬರನ್ನು ಪತ್ತೆಹಚ್ಚಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ಅವರು ದೇಶದಿಂದ ಓಡಿಹೋಗಬಹುದು ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಇದರಿಂದಾಗಿ ಮೂವರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಈ ಸಂಬAಧ ಪ್ರಯಾಗ್‌ರಾಜ್ ಪೊಲೀಸರು ಈ ಹಿಂದೆ ಉತ್ತರ ಪ್ರದೇಶ ಸರ್ಕಾರಕ್ಕೆ ವರದಿಯನ್ನು ಕಳುಹಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಇದರ ಆಧಾರದ ಮೇಲೆ ದೇಶ ತೊರೆಯದಂತೆ ಅವರ ವಿರುದ್ಧ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ನೋಟೀಸ್ ಅವಧಿಯು ೧ ವರ್ಷ ಇರುತ್ತದೆ.

ಜಮೀರ್‌ಗೆ ಡಿಸಿಎಂ ಸ್ಥಾನ ನೀಡುವಂತೆ ಪ್ರತಿಭಟನೆ

ಕೊಪ್ಪಳ, ಮೇ ೧೬: ಸಿಎಂ ಪಟ್ಟಕ್ಕೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಎದುರಾಗಿರುವ ನಡುವಲ್ಲೇ ಡಿಸಿಎಂ ಸ್ಥಾನವನ್ನು ಜಮೀರ್ ಅಹ್ಮದ್ ಖಾನ್ ಅವರಿಗೆ ನೀಡಬೇಕೆಂದು ಒತ್ತಾಯಿಸಿ ಕೊಪ್ಪಳದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಕೊಪ್ಪಳದ ಗಂಗಾವತಿ ತಾಲೂಕಿನ ಜಂಗಮರ ಕಲ್ಗುಡಿಯಲ್ಲಿ ಮುಸ್ಲಿಮರು ಜಮೀರ್ ಅಹ್ಮದ್ ಖಾನ್ ಅವರಿಗೆ ಡಿಸಿಎಂ ಸ್ಥಾನ ನೀಡುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ-ರಾಹುಲ್ ಗಾಂಧಿ ಭೇಟಿ

ನವದೆಹಲಿ, ಮೇ ೧೬: ಕರ್ನಾಟಕ ಮುಖ್ಯಮಂತ್ರಿ ಸ್ಥಾನದ ತೀವ್ರ ಪೈಪೋಟಿಯ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದರು ಮತ್ತು ದಕ್ಷಿಣದ ರಾಜ್ಯದಲ್ಲಿ ಸರ್ಕಾರ ರಚನೆಯ ಕುರಿತು ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಖರ್ಗೆ ಅವರ ನಿವಾಸಕ್ಕೆ ತೆರಳಿದ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಮುಖ್ಯಸ್ಥರೊಂದಿಗೆ ಗುಪ್ತವಾಗಿ ಸಭೆ ನಡೆಸಿದರು. ಕರ್ನಾಟಕದಲ್ಲಿ ಪಕ್ಷದ ವ್ಯವಹಾರಗಳ ಉಸ್ತುವಾರಿ ಹೊತ್ತಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು. ಕರ್ನಾಟಕದ ಪಕ್ಷದ ನಾಯಕರು ಮತ್ತು ಭಾನುವಾರ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಮೇಲ್ವಿಚಾರಣೆಗಾಗಿ ಅವರು ನೇಮಿಸಿದ ಮೂವರು ವೀಕ್ಷಕರೊಂದಿಗೂ ಮಲ್ಲಿಕಾರ್ಜುನ ಖರ್ಗೆ ಅವರು ಚರ್ಚೆ ನಡೆಸಿದ್ದಾರೆ.