ಗೋಣಿಕೊಪ್ಪ ವರದಿ, ಮೇ ೧೬ : ಅಪಘಾತದಲ್ಲಿ ಗಾಯಗೊಂಡಿದ್ದ ಕೈಕೇರಿ ಗ್ರಾಮದ ಕಾರ್ಮಿಕ ಸಿದ್ದ (೬೦) ಮಂಗಳವಾರ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ವಾರಸುದಾರರು ಯಾರಾದರೂ ಇದ್ದಲ್ಲಿ ಮಡಿಕೇರಿಯಲ್ಲಿರುವ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸುವAತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
ಕೂಲಿ ಕಾರ್ಮಿಕನಾಗಿ ಇವರು ಕೈಕೇರಿ ಮುಖ್ಯರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು. ನಂತರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಮೃತಪಟ್ಟಿದ್ದು, ಆಸ್ಪತ್ರೆ ಶವಗಾರದಲ್ಲಿ ಇಡಲಾಗಿದೆ. ವಾರಸುದಾರರು ೦೮೨೭೪೨೪೭೩೩೩, ೯೪೮೦೮೦೪೯೫೭ ಸಂಖ್ಯೆಯಲ್ಲಿ ಸಂಪರ್ಕಿಸುವAತೆ ಗೋಣಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ ಕೋರಿದೆ.