ಮಡಿಕೇರಿ, ಮೇ ೧೬ : ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಜಟಿಲ ಸಮಸ್ಯೆಗಳ ಪರಿಹಾರಕ್ಕಾಗಿ ನೂತನ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸದಸ್ಯ ಹಾಗೂ ಕರಿಕೆ ಗ್ರಾ.ಪಂ. ಉಪಾಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಮನವಿ ಮಾಡಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಕೊಡಗಿಗೆ ಸಚಿವ ಸ್ಥಾನ ದೊರೆತಿದೆ, ಈ ಬಾರಿಯೂ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಜಿಲ್ಲೆಯ ಸಮಸ್ಯೆಗಳನ್ನು ಸರ್ಕಾರದ ಮುಂದೆ ಸಮರ್ಥವಾಗಿ ಮಂಡಿಸಲು ಮತ್ತು ಇಲ್ಲಿನ ಸ್ಥಿತಿಗತಿಗಳನ್ನು ಮನವರಿಕೆ ಮಾಡಿಕೊಡಲು ನಮ್ಮ ಶಾಸಕರು ಸಚಿವರಾಗುವ ಅಗತ್ಯವಿದೆ. ಕೊಡಗಿನ ಜನರ ಅಪೇಕ್ಷೆಯೂ ಇದೇ ಆಗಿದ್ದು, ವರಿಷ್ಠರು ಸ್ಪಂದಿಸಲಿದ್ದಾರೆ ಎಂದು ಬಾಲಚಂದ್ರನ್ ನಾಯರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.