ಮಡಿಕೇರಿ, ಮೇ ೧೬: ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ ೧೦ ತಿಂಗಳ ತೋಟಗಾರಿಕೆ ತರಬೇತಿಯು ೨೦೨೩ ಜೂನ್ ೧ ರಿಂದ ೨೦೨೪ ರ ಮಾರ್ಚ್ ೩೦ ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಈ ಸಂಬAಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಯನ್ನು ತಾ. ೨೨ ರ ಸಂಜೆ ೫.೩೦ ಗಂಟೆಯೊಳಗೆ ಸಲ್ಲಿಸಬೇಕು. ಅರ್ಜಿಯನ್ನು ಈ ಕಚೇರಿಯಿಂದ ಪಡೆಯಬಹುದು. ಹೆಚ್ಚಿನ ವಿವರವನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ (ರಾ.ವ), ಮಡಿಕೇರಿ ಕೊಡಗು ಜಿಲ್ಲೆ ಕಚೇರಿಯನ್ನು ಬೆಳಿಗ್ಗೆ ೧೦ ರಿಂದ ಸಂಜೆ ೫.೩೦ ರೊಳಗೆ ಅಥವಾ ದೂ. ೮೩೧೦೬೮೭೭೦೭/ ಅಂತರ್ಜಾಲ ತಿತಿತಿ.hoಡಿಣiಛಿuಟಣuಡಿe.ಞಚಿಡಿ.ಟಿiಛಿ.iಟಿ ನಲ್ಲಿ ಪಡೆಯಬಹುದು.

ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಛಾಪಾಕಾಗದ, ತಂದೆ/ತಾಯಿ/ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‌ಟಿಸಿ, ಜಾತಿ ಪ್ರಮಾಣ ಪತ್ರ, ಫೋಟೋ, ತಂದೆ/ ತಾಯಿಯವರ ಒಪ್ಪಿಗೆ ಪತ್ರ ಮತ್ತಿತರ) ಅರ್ಹ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ಅರ್ಜಿಯನ್ನು ಮಡಿಕೇರಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(ರಾಜ್ಯವಲಯ)ಗೆ ಖುದ್ದಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ರಾಜ್ಯವಲಯ) ತಿಳಿಸಿದ್ದಾರೆ.