ಮಡಿಕೇರಿ, ಮೇ. ೧೬: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ವೀರಾಜಪೇಟೆ ಕ್ಷೇತ್ರದಿಂದ ಗೆಲುವು ಸಾಧಿಸಿ ಶಾಸಕರಾಗಿ ಚುನಾಯಿತರಾದ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಅವರಿಗೆ ರಾಜ್ಯ ಸರಕಾರದ ಸಚಿವ ಸಂಪುಟದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ನೀಡುವಂತೆ ಒತ್ತಾಯಿಸಿ ಕೆಪಿಸಿಸಿ ಕಾನೂನು, ಮಾನವ ಹಕ್ಕು ಮತ್ತು ಆರ್.ಟಿ.ಐ. ಘಟಕ ತುರ್ತು ಸಭೆ ನಡೆಸಿ ನಿರ್ಣಯವನ್ನು ರಾಜ್ಯ ಹಾಗೂ ರಾಷ್ಟçದ ವರಿಷ್ಠರಿಗೆ ಕಳುಹಿಸಿದೆ.

ಬೆಂಗಳೂರಿನಲ್ಲಿ ನಡೆದ ತುರ್ತು ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಿ ನಮ್ಮ ಮನವಿಯನ್ನು ಪರಿಗಣಿಸಿ ಖಾತೆ ನೀಡುವಂತೆ ಕೋರಿದೆ. ಸಭೆಯಲ್ಲಿ ಘಟಕದ ಅಧ್ಯಕ್ಷ ಎಸ್.ಎ. ಅಮೀದ್ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.