ಮಡಿಕೇರಿ, ಮೇ. ೧೬: ಮಡಿಕೇರಿ ತಾಲೂಕಿನ ಬೋಯಿಕೇರಿ ಬಳಿ ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮದೆನಾಡಿನ ಮನೋಜ್ (೨೭) ಗಾಯಗೊಂಡ ಸವಾರ. ಮೈಸೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಮದೆನಾಡುವಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಬಸ್‌ನ ಚಕ್ರಕ್ಕೆ ಸಿಲುಕಿಕೊಂಡಿದೆ. ಗಾಯಳು ಮೈಸೂರಿನಲ್ಲಿ ಸೆಕ್ಯೂರಿಟಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮನೆಯಿಂದ ಕೆಲಸಕ್ಕೆ ಮೈಸೂರಿಗೆ ಬೈಕ್‌ನಲ್ಲಿ ತೆರಳುವ ವೇಳೆ ಕಾರ್ ಒಂದನ್ನು ‘ಓವರ್ ಟೇಕ್’ ಮಾಡುವ ಸಂದರ್ಭ ನಿಯಂತ್ರಣ ಕಳೆದುಕೊಂಡು ಅವಘಡ ಸಂಭವಿಸಿದೆ. ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಯಿತು.