ಮಡಿಕೇರಿ, ಮೇ ೧೬: ಹೊದ್ದೂರು ವಾಟೆಕಾಡು ಸಾಮಾಜಿಕ ಅರಣ್ಯ ಇಲಾಖೆಯ ಸಸ್ಯಕ್ಷೇತ್ರದಲ್ಲಿ ೨೦೨೩-೨೪ನೇ ಸಾಲಿನ ಮಳೆಗಾಲದಲ್ಲಿ ನೆಡಲು ವಿವಿಧ ಹಣ್ಣಿನ, ಔಷಧೀಯ ಹಾಗೂ ಕಾಡು ಜಾತಿಯ ಸಸಿಗಳನ್ನು ಬೆಳೆಸಲಾಗಿದೆ. ಮಹಾಗನಿ, ಶಿವನೆ, ಸಿಲ್ವರ್, ತೇಗ, ಬೀಟೆ, ಮಳೆಮರ, ನೇರಳೆ, ಸುಬಾಬುಲ್, ಹಲಸು, ಧೂಪ, ನೆಲ್ಲಿ, ನಿಂಬೆ, ಪುನರ್‌ಪುಳಿ, ಅಗಸೆ, ಬೆಟ್ಟದನೆಲ್ಲಿ, ಸೀಬೆ ಮತ್ತಿತರ ಸಸಿಗಳು ಲಭ್ಯವಿದ್ದು, ರೈತ ಫಲಾನುಭವಿಗಳಿಗೆ ರೂ. ೭ ಹಾಗೂ ರೂ. ೨೩.೬೦ ಪ್ರತಿ ಸಸಿಗೆ ರಿಯಾಯಿತಿ ದರದಲ್ಲಿ ಪಡೆದುಕೊಳ್ಳಬಹುದು. ರೈತರು ತಮ್ಮ ಆಧಾರ್ ಪ್ರತಿ, ರಾಷ್ಟಿçÃಕೃತ ಬ್ಯಾಂಕ್ ಪಾಸ್‌ಬುಕ್ ಪ್ರತಿ, ತಮ್ಮ ಜಮೀನಿನ ಆರ್‌ಟಿಸಿ ಪ್ರತಿಯನ್ನು ನೀಡಿ ಸಸಿಗಳನ್ನು ಪಡೆಯಬಹುದು. ಬಿಪಿಎಲ್ ಕಾರ್ಡ್ ಮತ್ತು ನರೇಗಾ ಉದ್ಯೋಗ ಚೀಟಿ ಹೊಂದಿರುವ ರೈತರಿಗೆ ನೆಟ್ಟ ೧೦೦ ಸಸಿಗಳಿಗೆ ಸರಿಸುಮಾರು ೧೦ ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಉಪ ವಲಯ ಅರಣ್ಯಾಧಿಕಾರಿಗಳು-೯೭೪೩೭೨೨೬೪೬, ಗಸ್ತು ಅರಣ್ಯ ಪಾಲಕರು-೭೯೭೫೯೫೨೩೮೮ ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಸಾಮಾಜಿಕ ಅರಣ್ಯ ವಲಯದ ವಲಯ ಅರಣ್ಯಾಧಿಕಾರಿ ಅವರು ತಿಳಿಸಿದ್ದಾರೆ.