ಆದಾಯ ಮೀರಿ ಆಸ್ತಿ - ಡಿ.ಕೆ.ಶಿ. ಸದ್ಯಕ್ಕೆ ನಿರಾಳ

ನವದೆಹಲಿ/ಬೆಂಗಳೂರು, ಮೇ ೧೭: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಿದ್ದು, ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ. ಅಲ್ಲದೆ, ತಡೆಯಾಜ್ಞೆ ತೆರವಿಗೆ ಹೈಕೋರ್ಟ್ನಲ್ಲೇ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದು, ಮುಂದಿನ ವಿಚಾರಣೆಯನ್ನು ಜುಲೈ ತಿಂಗಳಿಗೆ ಮುಂದೂಡಿದೆ. ಈ ಮೂಲಕ ಡಿ.ಕೆ. ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಡಿ.ಕೆ. ಶಿವಕುಮಾರ್ ವಿರುದ್ಧ ಪ್ರಕರಣದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ತೆರವು ಮಾಡುವಂತೆ ಸಿಬಿಐ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹೈಕೋರ್ಟ್ ರಜೆ ಅವಧಿ ಮುಗಿಯಲಿರುವುದರಿಂದ ಅಲ್ಲೇ ವಿಚಾರಣೆ ಸೂಕ್ತ ಎಂದು ಅಭಿಪ್ರಾಯಪಟ್ಟಿದೆ.

ಇಮ್ರಾನ್ ಖಾನ್ ಬಂಧಿಸದAತೆ ಆದೇಶ

ಇಸ್ಲಾಮಾಬಾದ್, ಮೇ ೧೭: ಪಾಕಿಸ್ತಾನದ ಉನ್ನತ ನ್ಯಾಯಾಲಯ ಮೇ ೯ ರ ನಂತರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ವಿರುದ್ಧ ದಾಖಲಾಗಿರುವ ಯಾವುದೇ ಪ್ರಕರಣದಲ್ಲಿ ಅವರನ್ನು ಬಂಧಿಸದAತೆ ಹೊರಡಿಸಿದ್ದ ಆದೇಶವನ್ನು ತಾ. ೩೧ ರವರೆಗೆ ವಿಸ್ತರಿಸಿದೆ. ೭೦ ವರ್ಷದ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಮುಖ್ಯಸ್ಥರ ವಿರುದ್ಧ ದಾಖಲಾಗಿರುವ ಪ್ರಕರಣಗಳ ಬಗ್ಗೆ ಮಾಹಿತಿ ನೀಡಲು ಸರ್ಕಾರಿ ವಕೀಲರು ಹೆಚ್ಚಿನ ಸಮಯ ಕೋರಿದ ನಂತರ ಇಸ್ಲಾಮಾಬಾದ್ ಹೈಕೋರ್ಟ್ ಈ ತೀರ್ಪು ನೀಡಿದೆ. ಖಾನ್ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳ ವಿವರಗಳನ್ನು ಕೋರಿ ಪಿಟಿಐ ಸಲ್ಲಿಸಿದ್ದ ಮನವಿಯನ್ನು ಕೋರ್ಟ್ ವಿಚಾರಣೆ ನಡೆಸುತ್ತಿದೆ. ಪಿಟಿಐ ಮುಖ್ಯಸ್ಥರ ವಿರುದ್ಧ ದೇಶಾದ್ಯಂತ ೧೦೦ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಖಾನ್ ಅವರ ಪಕ್ಷ ಹೇಳಿದೆ. ಸರ್ಕಾರಿ ವಕೀಲರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಮೇ ೩೧ಕ್ಕೆ ಮುಂದೂಡಿದೆ. ಇಸ್ಲಾಮಾಬಾದ್ ಹೈಕೋರ್ಟ್, ಕಳೆದ ಶುಕ್ರವಾರ ಅಲ್-ಖಾದಿರ್ ಟ್ರಸ್ಟ್ ಭ್ರಷ್ಟಾಚಾರ ಪ್ರಕರಣದಲ್ಲಿ ಖಾನ್ ಅವರಿಗೆ ಎರಡು ವಾರಗಳ ಕಾಲ ನಿರೀಕ್ಷಣಾ ಜಾಮೀನು ನೀಡಿದೆ ಮತ್ತು ಮೇ ೧೫ ರವರೆಗೆ ದೇಶದಲ್ಲಿ ದಾಖಲಾದ ಯಾವುದೇ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿಯನ್ನು ಬಂಧಿಸದAತೆ ನಿರ್ಬಂಧಿಸಿದೆ. ಮೇ ೯ ರಂದು ಹೈಕೋರ್ಟ್ ಆವರಣದಿಂದ ಖಾನ್‌ರನ್ನು ನಾಟಕೀಯ ರೀತಿಯಲ್ಲಿ ಬಂಧಿಸಿರುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ರಕ್ಷಣಾ ಪಡೆಯ ಮಾಹಿತಿ ಸೋರಿಕೆ - ಬಂಧನ

ನವೆದೆಹಲಿ, ಮೇ ೧೭: ರಕ್ಷಣಾ ವಿಷಯಗಳಿಗೆ ಸಂಬAಧಿಸಿದ ಸೂಕ್ಷö್ಮ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸಿ ವಿದೇಶಿ ಗುಪ್ತಚರ ಸಂಸ್ಥೆಗಳಿಗೆ ರವಾನಿಸಿದ ಆರೋಪದ ಮೇಲೆ ಅರೆಕಾಲಿಕ ಪತ್ರಕರ್ತ ಮತ್ತು ನೌಕಾಪಡೆಯ ಮಾಜಿ ಕಮಾಂಡರ್ ಅನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿವೇಕ್ ರಘುವಂಶಿ ವಿರುದ್ಧ ಎಫ್‌ಐಆರ್ ನಂತರ, ಸಿಬಿಐ ಮಂಗಳವಾರ ರಕ್ಷಣಾ ಮತ್ತು ಕಾರ್ಯತಂತ್ರದ ವ್ಯವಹಾರಗಳ ಕುರಿತಾದ ಯುಎಸ್ ಮೂಲದ ಪೋರ್ಟಲ್‌ನಲ್ಲಿ ಭಾರತದ ವರದಿಗಾರ ಎಂದು ಪಟ್ಟಿಮಾಡಲಾದ ಅರೆಕಾಲಿಕ ಪತ್ರಕರ್ತನಿಗೆ ಸಂಬAಧಿಸಿದ ಸ್ಥಳಗಳಲ್ಲಿ ಮತ್ತು ಜೈಪುರ ಮತ್ತು ದೆಹಲಿಯ ೧೨ ಸ್ಥಳಗಳಲ್ಲಿ ಶೋಧ ನಡೆಸಿತ್ತು ಎಂದಿದ್ದಾರೆ. ಸಂಸ್ಥೆಯು ರಘುವಂಶಿ ಮತ್ತು ಮಾಜಿ ನೌಕಾಪಡೆಯ ಕಮಾಂಡರ್ ಆಶಿಶ್ ಪಾಠಕ್ ವಿರುದ್ಧ ಅಧಿಕೃತ ರಹಸ್ಯ ಕಾಯಿದೆಯ ಸೆಕ್ಷನ್ ೩ (ಗೂಢಚಾರಿಕೆ) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ ೧೨೦-ಬಿ (ಅಪರಾಧದ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ. ಶೋಧ ಕಾರ್ಯಾಚರಣೆಯ ಸಮಯದಲ್ಲಿ ಹಲವಾರು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಕಾನೂನು ಪರಿಶೀಲನೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಯದ ವಾತಾವರಣ ಸೃಷ್ಟಿ ಮಾಡಬೇಡಿ : ಇ.ಡಿ.ಗೆ ಸುಪ್ರೀಂ ಸಲಹೆ

ನವದೆಹಲಿ, ಮೇ ೧೭: ಭಯದ ವಾತಾವರಣ ಸೃಷ್ಟಿ ಮಾಡಬೇಡಿ ಎಂದು ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್ ಹೇಳಿದೆ. ಕೇಂದ್ರ ಸರಕಾರವು ಸಿಬಿಐ, ಇ.ಡಿ ಮುಂತಾದ ತನಿಖಾ ಸಂಸ್ಥೆಗಳು ರಾಜಕೀಯ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್ ಹೇಳಿಕೆ ಮಹತ್ವ ಪಡೆದಿದೆ. ಛತ್ತೀಸ್‌ಗಢ ಅಬಕಾರಿ ಹಗರಣಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಸಿಲುಕಿಸಿ ಹಾಕಲು ಜಾರಿ ನಿರ್ದೇಶನಾಲಯ ಪ್ರಯತ್ನಿಸುತ್ತಿದೆ ಎಂದು ರಾಜ್ಯ ಸರ್ಕಾರ ವಿಚಾರಣೆ ವೇಳೆ ಆರೋಪಿಸಿದೆ. ಈ ವೇಳೆ ಸುಪ್ರೀಂ ಕೋರ್ಟ್ ಹೀಗೆ ಹೇಳಿದೆ. ಸುಮಾರು ರೂ. ೨೦೦೦ ಕೋಟಿ ಅಬಕಾರಿ ಹಗರಣದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಸಿಲುಕಿಸಲು ಜಾರಿ ನಿರ್ದೇಶನಾಲಯ ಪ್ರಯತ್ನಿಸುತ್ತಿದೆ ಎಂದು ರಾಜ್ಯ ಸರಕಾರ ವಿಚಾರಣೆ ವೇಳೆ ಆರೋಪಿಸಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ಜಾರಿ ನಿರ್ದೇಶನಾಲಯಕ್ಕೆ ಈ ಸಲಹೆ ನೀಡಿದೆ.

ಚುನಾವಣಾ ರಾಜಕಾರಣದಿಂದ ಹಿಂದೆ ಸರಿದ ವೈಎಸ್‌ವಿ ದತ್ತ

ಚಿಕ್ಕಮಗಳೂರು, ಮೇ ೧೭: ಕರ್ನಾಟಕ ವಿಧಾನಸಭೆ ಚುನಾವಣೆ ೨೦೨೩ರಲ್ಲಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸಿ ಪರಾಜಿತಗೊಂಡ ಜೆಡಿಎಸ್‌ನ ವೈಎಸ್‌ವಿ ದತ್ತ ಅವರು ಇದೀಗ ಚುನಾವಣಾ ರಾಜಕೀಯದಿಂದ ಹಿಂದೆಸರಿದಿದ್ದಾರೆ. ಚುನಾವಣೆ ಸಮಯದಲ್ಲಿ ನಡೆದ ಬೆಳವಣಿಗೆಯಿಂದ ಪಶ್ಚಾತ್ತಾಪಪಟ್ಟಿರುವ ದತ್ತ ಅವರು, ಇದೀಗ ಕ್ಷೇತ್ರದಲ್ಲಿ ಪಶ್ಚಾತ್ತಾಪ ಪಾದಯಾತ್ರೆ ಕೈಗೊಂಡು ಜನರಲ್ಲಿ ಕ್ಷಮೆ ಕೋರಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸುದೀರ್ಘ ಪತ್ರ ಬರೆದಿದ್ದಾರೆ. ಕಡೂರು ವಿಧಾನಸಭಾ ಕ್ಷೇತ್ರದ ಮತದಾರ ಬಂಧುಗಳಿಗೆ ನಿಮ್ಮ ದತ್ತಣ್ಣ ಮಾಡುವ ನಮಸ್ಕಾರಗಳು ಎಂದು ಹೇಳಿ ಸುದೀರ್ಘವಾದ ಮಾಹಿತಿ ಹಂಚಿಕೊAಡಿದ್ದಾರೆ. ಅಲ್ಲದೆ, ಕ್ಷೇತ್ರದ ನೂತನ ಶಾಸಕರಿಗೆ ಮಂತ್ರಿಯಾಗಲೆAದು ಶುಭ ಹಾರೈಸಿದರು. ಸದ್ಯ ನಾನೀಗ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ನಾನು ಎಲ್ಲಿ ಎಡವಿದೆ, ನನ್ನ ಮತದಾರ ಬಂಧುಗಳಾದ ನಿಮ್ಮ ನಿರೀಕ್ಷೆಯನ್ನು ಮುಟ್ಟಲು ನಾನು ಎಲ್ಲಿ ವಿಫಲನಾಗಿದ್ದೇನೆ ಎಂಬ ಬಗ್ಗೆ ಚಿಂತನ ಮಂಥನ ಮಾಡಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ತಾಪಮಾನ ಏರಿಕೆ - ಮುನ್ನೆಚ್ಚರಿಕೆಗೆ ಸೂಚನೆ

ಬೆಂಗಳೂರು, ಮೇ ೧೭: ತಾಪಮಾನ ಏರಿಕೆ ಕುರಿತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾಘಟಕದ ಎಚ್ಚರಿಕೆಯ ಹಿನ್ನೆಲೆಯಲ್ಲಿ ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳ ಕೈಗೊಳ್ಳುವಂತೆ ಜಿಲ್ಲಾಡಳಿತ ಮಂಡಳಿ ಸೂಚನೆ ನೀಡಿದೆ. ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ೩ ದಿನಗಳಲ್ಲಿ ಗರಿಷ್ಠ ೪೦ ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ಬಿಸಿಲು ಮತ್ತು ಬಿಸಿ ಗಾಳಿ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಿಸಿಗಾಳಿಯ ಮುನ್ಸೂಚನೆ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲಾಡಳಿತ ಜನರಿಗೆ ಕೆಲವು ಸಲಹೆಗಳನ್ನು ನೀಡಿದೆ. ಜನರು ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಲಬುರಗಿ ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ತಿಳಿಸಿದ್ದಾರೆ.

ದೇಶದ ಅತಿದೊಡ್ಡ ಹನುಮ ಮಂದಿರ ನಿರ್ಮಾಣಕ್ಕೆ ಮುಸ್ಲಿಂ ಶಾಸಕ ಮುಂದು

ರಾAಚಿ, ಮೇ ೧೭: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಐತಿಹಾಸಿಕ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಹರ್ಷಗೊಂಡಿರುವ ಜಾರ್ಖಾಂಡ್ ರಾಜ್ಯದ ಕಾಂಗ್ರೆಸ್ ಪಕ್ಷದ ಮುಸ್ಲಿಂ ಶಾಸಕರೊಬ್ಬರು ದೇಶದಲ್ಲಿಯೇ ಅತಿದೊಡ್ಡ ಹನುಮ ಮಂದಿರ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಶಾಸಕ ಇರ್ಫಾನ್ ಅನ್ಸಾರಿಯವರು ತಮ್ಮ ವಿಧಾನಸಭಾ ಕ್ಷೇತ್ರವಾದ ಜಮ್ತಾರಾದಲ್ಲಿ ದೇಶದ ಅತಿದೊಡ್ಡ ಹನುಮಾನ್ ಮಂದಿರವನ್ನು ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಕರ್ನಾಟಕದಲ್ಲಿ ಪಕ್ಷವು ಬಹುಮತದಿಂದ ಗೆಲುವು ಸಾಧಿಸಿರುವುದು ಹನುಮಂತನ ಮೇಲಿನ ನನ್ನ ನಂಬಿಕೆ ಹೆಚ್ಚಾಗುವಂತೆ ಮಾಡಿದೆ. ಹನುಮಂತ ಎಲ್ಲರಿಗೂ ಸೇರಿದವನು. ಪಕ್ಷದ ಗೆಲುವು ಬಳಿಕ ಹನುಮಂತನ ದೇವಸ್ಥಾನಕ್ಕೆ ತೆರಳಿದೆ ಎಂದು ಅನ್ಸಾರಿಯವರು ಹೇಳಿದ್ದಾರೆ.