ಸುಂಟಿಕೊಪ್ಪ, ಮೇ ೧೭: ಕುಶಾಲನಗರದಿಂದ ನಾಪೋಕ್ಲುವಿಗೆ ಎಂ ಸ್ಯಾಂಡ್ ಸಾಗಿಸುತ್ತಿದ್ದ ಲಾರಿ ನಿಯಂತ್ರಣ ಕಳೆದುಕೊಂಡು ಇಲ್ಲಿನ ರಾಷ್ಟಿçÃಯ ಹೆದ್ದಾರಿಯ ಶಾಂತಗೇರಿ ಬಳಿ ಪಲ್ಟಿಯಾಗಿದೆ. ಲಾರಿ ಚಾಲಕ ಘಟನೆ ಬಳಿಕ ಪರಾರಿಯಾಗಿದ್ದು, ಸುಂಟಿಕೊಪ್ಪ ಪೊಲೀಸರೆ ವಾಹನವನ್ನು ಕ್ರೇನ್ ಸಹಾಯದಿಂದ ಮೇಲೆತ್ತಿ ಸಂಚಾರಕ್ಕೆ ಸಮಸ್ಯೆಯಾಗದಂತೆ ಕ್ರಮ ವಹಿಸಿದರು. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.