ಪೊನ್ನಂಪೇm, ಮೇ ೧೭: ಪೊನ್ನಂಪೇಟೆ ಗ್ರಾಮ ಪಂಚಾಯಿತಿ ವತಿಯಿಂದ ತಾ. ೨೦ ರಂದು ಬೆಳಿಗ್ಗೆ ೧೦ ಗಂಟೆಯಿAದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಜೂನಿಯರ್ ಕಾಲೇಜು) ಆವರಣದಲ್ಲಿ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ. ಇದೇ ಸಂದರ್ಭ ಸಂಜೀವಿನಿ ಒಕ್ಕೂಟದ ಮಹಿಳಾ ಹಬ್ಬ, ಸಂತೆ ಮೇಳ, ವಿವಿಧ ಮಹಿಳಾ ಸಂಘಗಳ ಕರಕುಶಲ ಉತ್ಪಾದನ ಪ್ರದರ್ಶನ ಮೇಳ, ಮಹಿಳಾ ಶುಚಿತ್ವ ಅರಿವು ಹಾಗೂ ಮಹಿಳಾ ಸಂಬAಧಿತ ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.