ಶನಿವಾರಸAತೆ, ಮೇ ೧೭: ಸಮೀಪದ ಕೊಡ್ಲಿಪೇಟೆ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. ೯೪ ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ೩೦ ವಿದ್ಯಾರ್ಥಿಗಳಲ್ಲಿ ೨೮ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
೪ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, ೨೦ ಮಂದಿ ಪ್ರಥಮ ದರ್ಜೆ, ೨ ಮಂದಿ ದ್ವಿತೀಯ ದರ್ಜೆ ಹಾಗೂ ೨ ಮಂದಿ ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿ ಪೂಜಾಶ್ರೀ ೫೬೨ ಅಂಕಗಳನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಗಳಿಸಿರುತ್ತಾಳೆ ಎಂದು ಮುಖ್ಯ ಶಿಕ್ಷಕ ಅಬ್ದುಲ್ ರಬ್ ತಿಳಿಸಿದ್ದಾರೆ.