ಮಡಿಕೇರಿ, ಮೇ ೧೭: ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಕಳೆದ ೧೪ ವರ್ಷಗಳ ಹಿಂದೆ ಸ್ಥಾಪಿಸಿದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗ ಶಿಕ್ಷಣವನ್ನು ನೀಡುವ ಸಂಸ್ಥೆಯಾಗಿದೆ. ಈ ಸಂಸ್ಥೆ ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ಚವಿದ್ಯಾಲಯದ ಮಾನ್ಯತೆ ಪಡೆದಿದೆ. ಪ್ರತಿವರ್ಷ ರಂಗ ಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮೊ ಕೋರ್ಸ್ನ್ನು ನಡೆಸುವ ಈ ಸಂಸ್ಥೆಗೆ ಪ್ರಸ್ತುತ ೨೦೨೩-೨೪ನೇ ಸಾಲಿಗೆ ಅರ್ಹ ಅಭ್ಯರ್ಥಿ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

೨೦೨೩-೨೪ನೇ ಸಾಲಿನ ಈ ರಂಗ ತರಬೇತಿ ಕೋರ್ಸ್ಗೆ ಸೇರಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಟ ದ್ವಿತೀಯ ಪಿಯುಸಿ (೧೦+೨) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಗೊಳಿಸಿದ ಕಡೆಯ ದಿನಾಂಕಕ್ಕೆ ೧೮ ವರ್ಷಗಳು ತುಂಬಿದ ಮತ್ತು ೨೮ ವರ್ಷಗಳು ತುಂಬಿರದ ಅಭ್ಯರ್ಥಿಗಳಾಗಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ರಂಗಾಯಣದಿAದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಮತ್ತು ಮಾಹೆಯಾನ ರೂ. ೫ ಸಾವಿರ ವಿದ್ಯಾರ್ಥಿ ವೇತನ ಪಾವತಿಸಲಾಗುವುದು.

ಭಾರತೀಯ ರಂಗಶಿಕ್ಷಣ ಕೇಂದ್ರಕ್ಕೆ ಸೇರಬಯಸುವ ವಿದ್ಯಾರ್ಥಿಗಳು ತಾ. ೧೫ ರಿಂದ ರಂಗಾಯಣದ ವೆಬ್‌ಸೈಟ್ hಣಣಠಿ://ಡಿಚಿಟಿgಚಿಥಿಚಿಟಿಚಿmಥಿsoಡಿe. ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಕೊಂಡು ಅಥವಾ ರಂಗಾಯಣದ ಕಚೇರಿಯಲ್ಲಿ ಕೆಲಸದ ದಿನಗಳ ಕಚೇರಿ ಅವಧಿಯಲ್ಲಿ ಖುದ್ದಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅರ್ಜಿ ಶುಲ್ಕ ಸಾಮಾನ್ಯ ವರ್ಗ ರೂ. ೨೩೦, ಪ.ಜಾ, ಪ.ವರ್ಗ ಮತ್ತು ಪ್ರವರ್ಗ-೧ ಅಭ್ಯರ್ಥಿಗಳಿಗೆ ರೂ. ೧೮೦ ಗಳು (ರಂಗಕೈಪಿಡಿ ಶುಲ್ಕ ರೂ. ೩೦ ಒಳಗೊಂಡAತೆ) ಡಿ.ಡಿ.ಯನ್ನು ಉಪ ನಿರ್ದೇಶಕರು, ರಂಗಾಯಣ, ಮೈಸೂರು ಇವರ ಹೆಸರಿನಲ್ಲಿ ಪಡೆದು ರಂಗಾಯಣದ ವಿಳಾಸಕ್ಕೆ ಜೂನ್ ೫ ರ ಸಂಜೆ ೫.೩೦ ಗಂಟೆಯೊಳಗೆ ತಲುಪುವಂತೆ ಅಂಚೆಯ ಮೂಲಕ ಕಳುಹಿಸಬಹುದು.

ಸಂದರ್ಶನದ ದಿನಾಂಕವನ್ನು ಅಭ್ಯರ್ಥಿಗಳಿಗೆ ಪತ್ರ ಮುಖೇನ ತಿಳಿಸಲಾಗುವುದು. ರಂಗಾಯಣದ ಆವರಣದಲ್ಲಿ ನಡೆಯುವ ಈ ಸಂದರ್ಶನಕ್ಕೆ ವಿದ್ಯಾರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲೇ ಹಾಜರಾಗಬೇಕು. ಗರಿಷ್ಠ ೧೫ ರಿಂದ ೨೦ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶವಿದೆ.

ಹೆಚ್ಚಿನ ವಿವರಕ್ಕೆ ದೂ. ೦೮೨೧-೨೫೧೨೬೩೯, ೯೪೪೮೯೩೮೬೬೧ / ೯೧೪೮೮೨೭೭೨೦ / ೮೮೬೭೫೧೪೩೧೧ ನ್ನು ಸಂಪರ್ಕಿಸ ಬಹುದು ಎಂದು ಮೈಸೂರು ರಂಗಾಯಣದ ಉಪ ನಿರ್ದೇಶಕರು ತಿಳಿಸಿದ್ದಾರೆ.