ಸಿದ್ದಾಪುರ, ಮೇ ೧೭: ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ವಾರ್ಷಿಕೋತ್ಸವ ಎರಡು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಜರುಗಿತು. ಶ್ರೀ ಬಸವೇಶ್ವರ ದೇವರ ಪಲ್ಲಕ್ಕಿ ಉತ್ಸವವು ಸಿದ್ದಾಪುರ, ಮೇ ೧೭: ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ವಾರ್ಷಿಕೋತ್ಸವ ಎರಡು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಜರುಗಿತು. ಶ್ರೀ ಬಸವೇಶ್ವರ ದೇವರ ಪಲ್ಲಕ್ಕಿ ಉತ್ಸವವು ಅದ್ಧೂರಿಯಿಂದ ನೆರವೇರಿತು.
ಬಿಳಿಗೇರಿ ಉದಯಕುಮಾರ್ ತಂತ್ರಿರವರ ನೇತೃತ್ವದಲ್ಲಿ ಬಸವೇಶ್ವರ ದೇವರ ಉತ್ಸವ ಮೂರ್ತಿಯನ್ನು ಕಾವೇರಿ ನದಿಯಲ್ಲಿ ಗಂಗಾ ಸ್ನಾನದೊಂದಿಗೆ ಪಲ್ಲಕ್ಕಿ ಉತ್ಸವವನ್ನು ನಡೆಸಲಾಯಿತು. ದೇವರ ಮೆರವಣಿಗೆ ನಡೆಸಲಾಯಿತು. ಕೊಂಡ ಸೇವೆ, ಮಹಾಪೂಜೆ ಹರಕೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಭಕ್ತಾದಿಗಳಿಗೆ ೨ ದಿನಗಳ ಕಾಲ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಜಿಲ್ಲೆಯ ವಿವಿಧೆಡೆಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಾರ್ಷಿಕೋತ್ಸವಕ್ಕೆ ಆಗಮಿಸಿದ್ದರು. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಕುಕ್ಕುನೂರು ಮೋಹನ್ ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರುಗಳು ಹಾಜರಿದ್ದರು.