ಸುಂಟಿಕೊಪ್ಪ, ಮೇ ೧೭: ಇಲ್ಲಿನ ಗುಡ್ಡಪ್ಪ ರೈ ಬಡಾವಣೆಯ ಶ್ರೀ ಹುಲಿ ಮಸಣಿಕಮ್ಮ ದೇವಸ್ಥಾನದ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ಮಂಗಳವಾರ ನೆರವೇರಿತು. ವಾರ್ಷಿಕೋತ್ಸವದ ಅಂಗವಾಗಿ ದೇವಾಲಯವನ್ನು ತಳಿರು ತೋರಣ ಹಾಗೂ ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿತ್ತು. ಈ ಸಂದರ್ಭ ದೇವಿಗೆ ವಿಶೇಷ ಪೂಜಾ ಕಾರ್ಯಕ್ರಮ ನಡೆದು ನಂತರ ದೇವಿ ಅರ್ಪಣೆ, ಮಹಾಪೂಜೆ ನೆರವೇರಿಸಲಾಯಿತು. ಮಹಾ ಮಂಗಳಾರತಿಯೊAದಿಗೆ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು. ಸುಂಟಿಕೊಪ್ಪ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ನೂರಾರು ಭಕ್ತಾದಿಗಳು ಆಗಮಿಸಿ ಹರಕೆಗಳನ್ನು ಒಪ್ಪಿಸಿ ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ಮಸಣಿಕಮ್ಮ ದೇವರಲ್ಲಿ ಪ್ರಾರ್ಥಿಸಿದರು. ಗ್ರಾಮದ ಸುತ್ತಮುತ್ತಲಿನ ನೂರಾರು ಭಕ್ತಾದಿಗಳು ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡರು. ಈ ಸಂದರ್ಭ ಶ್ರೀ ಹುಲಿ ಮಸಣಿಕಮ್ಮ ದೇವಸ್ಥಾನದ ಸಮಿತಿ ಅಧ್ಯಕ್ಷ ಅಯ್ಯಪ್ಪ, ಉಪಾಧ್ಯಕ್ಷ ಬಿ.ಬಿ. ಜಿನ್ನಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಕೆ. ಮೋಹನ, ಗೌರವ ಅಧ್ಯಕ್ಷ ರಾಜ, ಸದಸ್ಯರು ಹಾಜರಿದ್ದರು.