ಮಡಿಕೇರಿ, ಮೇ ೧೭: ರಾಜ್ಯದ ಜನ ಕೋಮು ಭಾವನೆಯನ್ನು ತಿರಸ್ಕರಿಸಿ ಅಭಿವೃದ್ಧಿ ಪರ ಮತ ಚಲಾಯಿಸಿದ ಪರಿಣಾಮ ಅಭೂತಪೂರ್ವ ಯಶಸ್ಸಿನ ಮೂಲಕ ಅಧಿಕಾರಕ್ಕೆ ಬರುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಮುಸಲ್ಮಾನರಿಗೆ ಉಪ ಮುಖ್ಯಮಂತ್ರಿ ಹಾಗೂ ಐದು ಸಚಿವ ಸ್ಥಾನವನ್ನು ನೀಡಬೇಕೆಂದು ಕೆಪಿಸಿಸಿ ವಕ್ತಾರ ಟಿ.ಎಂ. ಶಾಹಿದ್ ತೆಕ್ಕಿಲ್ ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಾತಿ, ಧರ್ಮ, ಭೇದ ಮರೆತು ರಾಜ್ಯದ ಸರ್ವ ಧರ್ಮೀಯರು ಕಾಂಗ್ರೆಸ್ ಪಕ್ಷವನ್ನು ಬೆಂಬಲಸಿ ಅಧಿಕಾರಕ್ಕೆ ತಂದಿದ್ದಾರೆ. ಮುಸಲ್ಮಾನರು ಸಂಪೂರ್ಣವಾಗಿ ಕಾಂಗ್ರೆಸ್‌ಗೆ ಮತ ಚಲಾಯಿಸುವ ಮೂಲಕ ಪಕ್ಷವನ್ನು ಬಲಗೊಳಿಸಿದ್ದಾರೆ; ಸರ್ಕಾರ ರಚಿಸುವ ಸಂದರ್ಭ ಓರ್ವ ಮುಸಲ್ಮಾನ ಶಾಸಕರಿಗೆ ಉಪ ಮುಖ್ಯಮಂತ್ರಿ ಹುದ್ದೆ ಹಾಗೂ ಐವರು ಮುಸಲ್ಮಾನರಿಗೆ ಸಚಿವ ಸ್ಥಾನವನ್ನು ನೀಡಬೇಕೆಂದು ಪಕ್ಷದ ವರಿಷ್ಠರ ಬಳಿಯೂ ಕೋರುವುದಾಗಿ ಹೇಳಿದರು.

ವೀರಾಜಪೇಟೆ ಕ್ಷೇತ್ರದ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಡಾ. ಮಂಥರ್ ಗೌಡ ಅವರು ಅಭಿವೃದ್ಧಿ ಪರ ಚಿಂತನೆಯ ಉತ್ಸಾಹಿ ಶಾಸಕರುಗಳಾಗಿದ್ದಾರೆ. ಇವರುಗಳು ಮುಂದಿನ ದಿನಗಳಲ್ಲಿ ಸಚಿವರಾಗಿ ಬಂದು ಕೊಡಗಿನ ಏಳಿಗೆಗಾಗಿ ಶ್ರಮಿಸಲಿದ್ದಾರೆ. ಶಾಂತಿ ಸೌಹಾರ್ದತೆಯೊಂದಿಗೆ ಅಭಿವೃದ್ಧಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನೂತನ ಮುಖ್ಯಮಂತ್ರಿಗಳು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ನ ಎಲ್ಲಾ ಭರವಸೆಗಳನ್ನು ಈಡೇರಿಸಲಿದ್ದಾರೆ. ಈ ಬಗ್ಗೆ ಯಾರಿಗೂ ಸಂಶಯ ಬೇಡ ಎಂದು ಸ್ಪಷ್ಟಪಡಿಸಿದರು.

ಮುಸ್ಲಿಮರು, ಕ್ರೆöÊಸ್ತರು ಜಾಗೃತರಾಗಿರಬೇಕು

ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದೆ ಎನ್ನುವ ಕಾರಣಕ್ಕೆ ಮುಸ್ಲಿಂ ಯುವ ಸಮೂಹ ಯಾವುದೇ ಕಾರಣಕ್ಕೂ ಉದ್ವೇಗ ಮತ್ತು ಪ್ರಚೋದನೆಗೆ ಒಳಗಾಗಬಾರದು. ಈ ನಾಡಿನ ಕಾನೂನನ್ನು ಗೌರವಿಸುವ ಮೂಲಕ ಶಾಂತಿಯನ್ನು ಕಾಪಾಡಬೇಕು, ಅಪಪ್ರಚಾರ ಮಾಡುವವರಿಗೆ ಆಹಾರವಾಗ ಬಾರದು ಎಂದು ಶಾಹಿದ್ ಮನವಿ ಮಾಡಿದರು.

(ಮೊದಲ ಪುಟದಿಂದ) ಮುಸ್ಲಿಂ ಧ್ವಜವನ್ನು ಹಾರಿಸಿದರೆ ಪಾಕಿಸ್ತಾನದ ಧ್ವಜವೆಂದು ಅಪಪ್ರಚಾರ ಮಾಡುತ್ತಿದ್ದಾರೆ. ಜನರ ಹಾದಿ ತಪ್ಪಿಸಲು ಮತ್ತು ಅಶಾಂತಿಯನ್ನು ಮೂಡಿಸಲು ಈ ರೀತಿಯ ಅಪಪ್ರಚಾರಗಳು ಆರಂಭಗೊAಡಿವೆೆ. ರಾಜ್ಯದ ಮುಸಲ್ಮಾನರು ಹಾಗೂ ಕ್ರೆöÊಸ್ತರು ಜಾಗೃತಗೊಳ್ಳಬೇಕು. ಪ್ರಚೋದನೆ ಮತ್ತು ಆಮಿಷಗಳಿಗೆ ಒಳಗಾಗಬಾರದು, ಯಾವುದೇ ಅನ್ಯಾಯ ಅಥವಾ ಗೊಂದಲಗಳಾದಲ್ಲಿ ಶಾಸಕರುಗಳ ಗಮನಕ್ಕೆ ತರುವ ಪ್ರಯತ್ನ ಮಾಡಿ. ಕಾನೂನನ್ನು ಕೈಗೆತ್ತಿಕೊಳ್ಳುವ ಪ್ರಯತ್ನಕ್ಕೆ ಮುಂದಾಗಬೇಡಿ ಎಂದು ಮನವಿ ಮಾಡಿದರು.

ಎಲ್ಲಾ ಸಮುದಾಯದಲ್ಲೂ ಕೆಲವರು ಕೋಮುವಾದಿಗಳಿದ್ದಾರೆ, ಯಾವುದೇ ಸಮುದಾಯ ಅಥವಾ ಸಂಘಟನೆ ಇರಲಿ. ಕಾನೂನು ಮೀರಿ ವರ್ತಿಸಿದರೆ ನೂತನ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಮುಂಬರುವ ಜಿ.ಪಂ., ತಾ.ಪಂ. ಮತ್ತು ಲೋಕಸಭಾ ಚುನಾವಣೆ ಸಂದರ್ಭ ಕೋಮು ಭಾವನೆ ಕೆರಳಿಸಿ ಮತಗಳಿಸುವ ಸಾಧ್ಯತೆಗಳಿವೆ. ಅಲ್ಪಸಂಖ್ಯಾತರು ಮಾತ್ರವಲ್ಲದೆ ಎಲ್ಲಾ ಧರ್ಮೀಯರು ಜಾಗೃತರಾಗಬೇಕೆಂದು ಶಾಹಿದ್ ತಿಳಿಸಿದರು,

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ. ಉಸ್ಮಾನ್, ಮಡಿಕೇರಿ ನಗರ ಉಪಾಧ್ಯಕ್ಷ ಎಂ.ಎA. ಯಾಕುಬ್ ಹಾಗೂ ಜಿಲ್ಲಾ ಸಮಿತಿ ಸದಸ್ಯ ಎಂ.ಹೆಚ್. ಜಫ್ರುಲ್ಲ ಉಪಸ್ಥಿತರಿದ್ದರು.