ಮಡಿಕೇರಿ, ಮೇ ೧೯: ಕೊಡಗು ಜಿಲ್ಲೆಯಲ್ಲಿ ತಾ. ೨೦ ಹಾಗೂ ೨೧ರಂದು ನಡೆಯುವ ಸಿಇಟಿ-೨೦೨೩ ಪರೀಕ್ಷೆ ಗಳನ್ನು ಯಾವುದೇ ಅವ್ಯವಹಾರ ಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ ೧೯೭೩ರ ಕಲಂ ೧೪೪ ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರ ಸೇರಿದಂತೆ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಬಿ.ಸಿ. ಸತೀಶ ಅವರು ಆದೇಶಿಸಿದ್ದಾರೆ.
ಮಡಿಕೇರಿಯ ಸರಕಾರಿ ಪದವಿಪೂರ್ವ ಕಾಲೇಜು, ಸಂತ ಮೈಕಲರ ಸಂಯುಕ್ತ ಪದವಿಪೂರ್ವ ಕಾಲೇಜು ಹಾಗೂ ಸಂತ ಜೋಸೆಫರ ಬಾಲಕಿಯರ ಪದವಿಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ.ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ಯಾವುದೇ ವಸ್ತುಗಳನ್ನು ಹಂಚುವುದು / ರವಾನಿಸುವುದು ಇತ್ಯಾದಿ ಚಟುವಟಿಕೆ ಗಳನ್ನು ಸಂಪೂರ್ಣ ನಿಷೇಧಿಸಿದೆ.
ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟಾçನಿಕ್ ಉಪಕರಣ ಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವು ಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಯಾವುದೇ ನಿಯಮ ಬಾಹಿರ ಕಾರ್ಯಗಳನ್ನು ನಡೆಸತಕ್ಕದ್ದಲ್ಲ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬAಧಿಸಿದ ಯಾವುದೇ ವಿಷಯಗಳನ್ನು / ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ೨೦೦ ಮೀಟರ್ ವ್ಯಾಪ್ತಿಯಲ್ಲಿರುವ ಕಂಪ್ಯೂಟರ್ ಮತ್ತು ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಮತ್ತು ಸದರಿ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ. ಈ ಆದೇಶವು ಬೆಳಿಗ್ಗೆ ೯.೩೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ಜಾರಿಯಲ್ಲಿರುತ್ತದೆ.