ಬೆAಗಳೂರು, ಮೇ ೧೮: ರಾಜ್ಯದ ಮುಖ್ಯಮಂತ್ರಿ ಆಯ್ಕೆ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದ್ದು, ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಘೋಷಿಸಲಾಗಿದೆ. ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ.

ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಿರುವುದಾಗಿ ಪ್ರಕಟಿಸಿದರು.

ಕರ್ನಾಟಕದ ಗೆಲುವಿನ ಶ್ರೇಯಸ್ಸು ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಸೇರಿ ಎಲ್ಲ ಹಿರಿಯ ನಾಯಕರಿಗೂ ಸಲ್ಲುತ್ತದೆ. ಭಾರತ್ ಜೋಡೋ ಪಾದಯಾತ್ರೆ ಬಳಿಕ ಕಾಂಗ್ರೆಸ್ ಗೆದ್ದಿದೆ. ಕರ್ನಾಟಕದಲ್ಲಿ ಅನುಭವಿ, ಸಮರ್ಥ ಕಾಂಗ್ರೆಸ್ ನಾಯಕರಿದ್ದಾರೆ. ಕೆಪಿಸಿಸಿ ಅಧ್ಯಕ್ಷ

ಡಿ.ಕೆ. ಶಿವಕುಮಾರ್ ಪಕ್ಷವನ್ನು ಸಂಘಟಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರೂ ಸಮರ್ಥ ನಾಯಕರು ಎಂದು ಹೇಳಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರದಲ್ಲಿ ಡಿ.ಕೆ. ಶಿವಕುಮಾರ್ ಒಬ್ಬರು ಮಾತ್ರ ಡಿಸಿಎಂ ಆಗಿರುತ್ತಾರೆ. ಲೋಕಸಭಾ ಚುನಾವಣೆ ಪೂರ್ಣಗೊಳ್ಳುವವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಮುಂದುವರಿಯಲಿದ್ದಾರೆ ಎಂದು ತಿಳಿಸಿದರು.

ನಾಳೆ ಪ್ರಮಾಣವಚನ

ತಾ. ೨೦ರಂದು (ನಾಳೆ) ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಧ್ಯಾಹ್ನ ೧೨.೩೦ಕ್ಕೆ ಪ್ರಮಾಣವಚನ ಸಮಾರಂಭ ನಡೆಯಲಿದ್ದು, ಕೆಲ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಕೆ.ಸಿ. ವೇಣು ಗೋಪಾಲ್ ಮಾಹಿತಿ ನೀಡಿದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಮೂರು ವೀಕ್ಷಕರನ್ನ ನೇಮಿಸಲಾಗಿತ್ತು. ಶಾಸಕರ ಅಭಿಪ್ರಾಯ ಸಂಗ್ರಹ ಮಾಡಲಾಗಿತ್ತು. ವೀಕ್ಷಕರು ವರದಿಯನ್ನು ಅಧ್ಯಕ್ಷರಿಗೆ ನೀಡಿದ್ದರು. ನಮ್ಮದು ಪ್ರಜಾಸತ್ತಾತ್ಮಕ ಪಕ್ಷ, ನಾವು ಸರ್ವಾಧಿಕಾರದಲ್ಲಿ ನಂಬಿಕೆ ಇಟ್ಟವರಲ್ಲ. ಕರ್ನಾಟಕದಲ್ಲಿ ಡೈನಾಮಿಕ್ ನಾಯಕರಿದ್ದಾರೆ. ಸಿದ್ದರಾಮಯ್ಯ ಅನುಭವಿ, ಹಿರಿಯ ರಾಜಕಾರಣಿ, ಉತ್ತಮ ಆಡಳಿತಗಾರರು ಹೌದು. ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರದ್ದು ದೊಡ್ಡ ಪಾತ್ರವಿದೆ.

ಡಿ.ಕೆ. ಶಿವಕುಮಾರ್ ಪಕ್ಷ ಸಂಘಟಕರು, ಪಕ್ಷದಲ್ಲಿ ಕೆಡಾರ್ ತಯಾರು ಮಾಡುವಲ್ಲಿ ಅವರ ಪಾತ್ರ ದೊಡ್ದದಿದೆ ಎಂದರು.

ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಇಬ್ಬರೂ ಪಕ್ಷದ ದೊಡ್ಡ ಆಸ್ತಿ, ಇಬ್ಬರಿಗೂ ಸಿಎಂ ಆಗಬೇಕೆಂಬ ಆಕಾಂಕ್ಷೆಯಿತ್ತು. ಸಿದ್ದರಾಮಯ್ಯ,

ಡಿ.ಕೆ. ಶಿವಕುಮಾರ್ ಜೊತೆ ಪ್ರತ್ಯೇಕ ಮಾತುಕತೆ ನಡೆಸಲಾಗಿತ್ತು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅಭಿಪ್ರಾಯವನ್ನೂ ಪಡೆದಿದ್ದೆವು. ಅಂತಿಮವಾಗಿ ಎಐಸಿಸಿ ಅಧ್ಯಕ್ಷರು ನಿರ್ಣಯ ತೆಗೆದುಕೊಂಡಿದ್ದಾರೆ ಎಂದು ಕೆ.ಸಿ. ವೇಣುಗೋಪಾಲ್ ತಿಳಿಸಿದರು.

ಸಿದ್ದರಾಮಯ್ಯ ಕುರಿತು...

ಸಿದ್ದರಾಮಯ್ಯ ಅವರ ಹುಟ್ಟೂರು ಮೈಸೂರು ಜಿಲ್ಲೆ ವರುಣಾ ಹೋಬಳಿಯ ಸಿದ್ದರಾಮನ ಹುಂಡಿ ಗ್ರಾಮ, ಜನನ ೧೯೪೭ರ ಆಗಸ್ಟ್ ೩. ಇವರದ್ದು ಕೃಷಿ ಪ್ರಧಾನ ಕುಟುಂಬ.

ಸಿದ್ದರಾಮಯ್ಯ ಅವರು ಬಾಲ್ಯದ ದಿನಗಳನ್ನು ಕಳೆದದ್ದು ಸ್ವಗ್ರಾಮ ಸಿದ್ದರಾಮನ ಹುಂಡಿಯಲ್ಲೇ, ಆರಂಭದ ದಿನಗಳಲ್ಲಿ ವಿದ್ಯಾಭ್ಯಾಸವನ್ನು ಅರ್ಧದಲ್ಲಿಯೇ ನಿಲ್ಲಿಸಬೇಕಾದ ಪರಿಸ್ಥಿತಿ ಬಂದಿತ್ತು. ಶಾಲೆ ಬಿಟ್ಟು ದನ ಮೇಯಿಸುವ ಕಾಯಕಕ್ಕೆ ಮುಂದಾಗಬೇಕಾಯಿತು. ಆದರೆ ಬಾಲಕ ಸಿದ್ದರಾಮಯ್ಯ ಅವರಲ್ಲಿನ ಪ್ರತಿಭೆಯನ್ನು ಗಮನಿಸಿದ ಗ್ರಾಮದ ಶಾಲೆಯ ಶಿಕ್ಷಕರು ಶಾಲೆಗೆ ಕರೆತಂದು ನೇರವಾಗಿ ೪ ನೇ ತರಗತಿಗೆ ಪ್ರವೇಶ ಕೊಟ್ಟರು.

ಪ್ರಾಥಮಿಕ ಶಿಕ್ಷಣದ ಬಳಿಕ ಸಿದ್ದರಾಮಯ್ಯ ಅವರು ಮುಖ ಮಾಡಿದ್ದು, ಮೈಸೂರು ಕಡೆಗೆ. ಕಾಲೇಜು ಶಿಕ್ಷಣಕ್ಕಾಗಿ ಯುವರಾಜ ಕಾಲೇಜಿಗೆ ಪ್ರವೇಶ ಪಡೆದ ಸಿದ್ದರಾಮಯ್ಯ ಅವರು ಅಲ್ಲಿಯೇ ಬಿ.ಎಸ್ಸಿ ಪದವಿ ಪಡೆದರು. ಅವರನ್ನು ಡಾಕ್ಟರ್ ಮಾಡಬೇಕೆಂಬುದು ಅವರ ತಂದೆಯ ಯೋಚನೆಯಾಗಿತ್ತು. ಅಪ್ಪನ ಬಯಕೆಯ ಹೊರತಾಗಿಯೂ ಸಿದ್ದರಾಮಯ್ಯ ಕಾನೂನು ವ್ಯಾಸಂಗಕ್ಕೆ ಮುಂದಾದರು. ಕಾನೂನು ಪದವಿಗಾಗಿ ಶಾರದಾ ವಿಲಾಸ ಕಾಲೇಜಿಗೆ ಸೇರ್ಪಡೆ ಯಾದರು.ಅದರ ನಂತರ ಕೆಲಕಾಲ ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿದರು. ಇದಾದ ನಂತರ ವಕೀಲ ವೃತ್ತಿಯನ್ನು ಆರಂಭಿಸಿದರು.

ಪ್ರೊ.ಪಿ.ಎA ಚಿಕ್ಕಬೋರಯ್ಯ ಎಂಬುವರ ಬಳಿ ವಕೀಲ ವೃತ್ತಿಯನ್ನು ಅಭ್ಯಾಸ ಮಾಡುತ್ತಿದ್ದ ಸಿದ್ದರಾಮಯ್ಯನವರಲ್ಲಿ ಸಾಮಾಜಿಕ ನ್ಯಾಯದ ಆಶಯ ಸೈದ್ಧಾಂತಿಕವಾಗಿ ಸ್ಪಷ್ಟಗೊಳ್ಳಲು ಕಾರಣವಾದುದು ಡಾ. ರಾಮಮನೋಹರ ಲೋಹಿಯಾ ಚಿಂತನೆ. ಇದಕ್ಕಾಗಿ ಅವರು ವಕೀಲ ವೃತ್ತಿಯನ್ನು ಬಿಟ್ಟು ರಾಜಕಾರಣಕ್ಕೆ ಧುಮುಕಿದರು. ೧೯೭೮ ರಲ್ಲಿ ರಾಜಕಾರಣದಲ್ಲಿ ಅಧಿಕೃತವಾಗಿ ಪ್ರವೇಶ ಮಾಡಿದ ಸಿದ್ದರಾಮಯ್ಯ ಅವರು ತಾಲೂಕು ಅಭಿವೃದ್ಧಿ ಮಂಡಳಿಯ ಸದಸ್ಯರಾದರು.

೧೯೮೦ರಲ್ಲಿ ಸಿದ್ದರಾಮಯ್ಯ ಅವರು ಮೊದಲ ಬಾರಿ ಮೈಸೂರು ಲೋಕಸಭೆ ಕ್ಷೇತ್ರದಿಂದ ಚುನಾವಣಾ ಅಖಾಡಕ್ಕೆ ಇಳಿದರು. ಆದರೆ ಗೆಲುವು ಸಾಧ್ಯವಾಗಲಿಲ್ಲ. ಬಳಿಕ ೧೯೮೩ರ ವಿಧಾನಸಭೆ ಚುನಾವಣೆಯಲ್ಲಿ ಲೋಕದಳದ ಅಭ್ಯರ್ಥಿ ಯಾಗಿ ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದರು. ತಕ್ಕಡಿ ಗುರುತಿನೊಂದಿಗೆ ಕಣಕ್ಕಿಳಿದಿದ್ದ ಅವರು, ಇಂದಿರಾ ಕಾಂಗ್ರೆಸ್‌ನ ಡಿ. ಜಯದೇವರಾಜ ಅರಸು ಅವರನ್ನು ಸೋಲಿಸಿ ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದರು.

ಸಿದ್ದರಾಮಯ್ಯ ಅವರು ವಿಧಾನಸಭೆಗೆ ಪ್ರವೇಶ ಪಡೆದಾಗ ರಾಮಕೃಷ್ಣ ಹೆಗಡೆ ಅವರ ನೇತೃತ್ವದ ಸರ್ಕಾರ ಇತ್ತು. ಸರ್ಕಾರ ರಚನೆಗೆ ಹೆಗಡೆ ಅವರು ಪಕ್ಷೇತರರು ಹಾಗೂ ಬಿಜೆಪಿ ಸದಸ್ಯ ಬೆಂಬಲ ಪಡೆದಿದ್ದರು. ಸಿದ್ದರಾಮಯ್ಯ ಅವರೂ ಸಹ ಸರ್ಕಾರಕ್ಕೆ ಬೆಂಬಲ ನೀಡಿದ್ದರು. ಹೀಗಾಗಿ ಅವರಿಗೆ ಕನ್ನಡ ಕಾವಲು ಸಮಿತಿಯ ಅಧ್ಯಕ್ಷ ಸ್ಥಾನ ನೀಡಲಾಯಿತು. ಬಳಿಕ ರೇಷ್ಮೆ ಸಚಿವರಾದರು.

೧೯೮೫ರಲ್ಲಿ ವಿಧಾನಸಭೆಗೆ ಮಧ್ಯಂತರ ಚುನಾವಣೆ ನಡೆದಾಗ ಸಿದ್ದರಾಮಯ್ಯ ಅವರು ಜನತಾ ಪಕ್ಷದಿಂದ ಸ್ಪರ್ಧಿಸಿ ಎರಡನೇ ಬಾರಿ (ಮೊದಲ ಪುಟದಿಂದ) ಚುನಾಯಿತರಾದರು. ಬಳಿಕ ಪಶು ಸಂಗೋಪನೆ, ರೇಷ್ಮೆ ಸಚಿವರಾದರು. ಎಸ್.ಆರ್ ಬೊಮ್ಮಾಯಿ ಅವರ ಮಂತ್ರಿ ಮಂಡಲದಲ್ಲಿ ಸಾರಿಗೆ ಸಚಿವರಾಗಿಯೂ ಕಾರ್ಯನಿರ್ವಹಿಸಿದರು. ೧೯೮೯ ರಲ್ಲಿ ಜನತಾಪಕ್ಷ ಇಬ್ಭಾಗವಾಗಿ ಜನತಾದಳ ಮತ್ತು ಸಮಾಜವಾದಿ ಜನತಾಪಕ್ಷ ಅಸ್ತಿತ್ವಕ್ಕೆ ಬಂತು. ಸಿದ್ದರಾಮಯ್ಯ ಅವರು ಆಗ ಜನತಾ ದಳದೊಂದಿಗೆ ಗುರುತಿಸಿಕೊಂಡರು. ಆದರೆ ಆ ಪಕ್ಷದ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣೆಯಲ್ಲಿ ಪರಾಭವ ಹೊಂದಿದ್ದರು. ೧೯೯೧ರಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡರು.

ರಾಜಕೀಯ ತಿರುವು

ಜೆ.ಡಿ.ಎಸ್ ನಿಂದ ಹೊರಬಂದ ಸಿದ್ದರಾಮಯ್ಯ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ೨೦೦೬ರ ಜುಲೈ ೨೨ ರಂದು ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು. ಈ ಬೆಳವಣಿಗೆ ಸಿದ್ದರಾಮಯ್ಯ ಅವರ ರಾಜಕೀಯ ಜೀವನಕ್ಕೆ ಮತ್ತೊಂದು ತಿರುವು ನೀಡಿತು. ಬಳಿಕ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಮರು ಚುನಾವಣೆಯಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ರೋಚಕ ಗೆಲುವು ಸಾಧಿಸಿದರು.

೨೦೦೮ರಲ್ಲಿ ವಿಧಾನಸಭೆ ಕ್ಷೇತ್ರಗಳ ಮರುವಿಂಗಡಣೆ ಆಯಿತು. ಆಗ ವರುಣಾ ಕ್ಷೇತ್ರ ಹೊಸದಾಗಿ ರಚನೆ ಆಯಿತು. ಆ ಕ್ಷೇತ್ರದಿಂದ ಸಿದ್ದರಾಮಯ್ಯ ವಿಧಾನಸಭೆ ಪ್ರವೇಶಿಸಿದರು. ಬಳಿಕ ಅವರು ವಿಧಾನಸಭೆ ಪ್ರತಿಪಕ್ಷ ನಾಯಕರಾದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಬಳ್ಳಾರಿಯ ಗಣಿಧಣಿಗಳ ವಿರುದ್ಧ ರಣಕಹಳೆ ಮೊಳಗಿಸಿ ಬೆಂಗಳೂರಿನಿAದ ಬಳ್ಳಾರಿಯವರೆಗೆ ಪಾದಯಾತ್ರೆ ನಡೆಸಿ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲವನ್ನೇ ಉಂಟುಮಾಡಿದ್ದರು.

ಮುಖ್ಯಮAತ್ರಿ ಗಾದಿಯತ್ತ

೨೦೧೩ ರ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಗೆಲುವಿಗೆ ಮಾತ್ರ ಶ್ರಮಿಸದೆ ಇಡೀ ರಾಜ್ಯ ಸುತ್ತಿ ಕಾಂಗ್ರೆಸ್ ಪರ ಪ್ರಚಾರ ಮಾಡಿ ಪಕ್ಷದ ಭಾರೀ ಗೆಲುವಿಗೆ ಕಾರಣರಾದರು. ೨೦೧೩ ಮೇ ೧೩ ರಂದು ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ಸ್ವೀಕರಿಸಿದರು. ೫ ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದ ಸಿದ್ದರಾಮಯ್ಯ ಇದೀಗ ೨ನೇ ಬಾರಿಗೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸುತ್ತಿದ್ದಾರೆ.

ಡಿ.ಕೆ. ಶಿವಕುಮಾರ್ ಕುರಿತು...

ರಾಮನಗರ ಜಿಲ್ಲೆಯ ಕನಕಪುರ ತಾಲೂಕು, ದೊಡ್ಡ ಆಲಹಳ್ಳಿ ಗ್ರಾಮದದಲ್ಲಿ ಡಿ.ಕೆ. ಶಿವಕುಮಾರ್ ೧೫ನೇ ಮೇ ೧೯೬೨ರಂದು ಜನಿಸಿದರು. ತಮ್ಮ ೧೮ನೇ ವಯಸ್ಸಿನಲ್ಲಿಯೇ ಭಾರತೀಯ ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗವಾದ ಎನ್‌ಎಸ್‌ಯುಐಗೆ ಸೇರ್ಪಡೆಯಾದರು.

ಬೆಂಗಳೂರಿನಲ್ಲಿ ಆರ್.ಸಿ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಯುವ ಕಾಂಗ್ರೆಸ್‌ಗೆ ಸೇರಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು. ಮುಕ್ತ ವಿಶ್ವವಿದ್ಯಾಲಯದಲ್ಲಿ ರಾಜಕೀಯ ಶಾಸ್ತç ಸ್ನಾತಕೋತ್ತರ ಪದವಿ ಪಡೆದಿರುವ ಇವರು, ೧೯೮೫ರ ಸಾತನೂರು ವಿಧಾನಸಭಾ ಕ್ಷೇತ್ರದಲ್ಲಿ ದೇವೇಗೌಡರ ವಿರುದ್ಧ ಸ್ಪರ್ಧಿಸಿ ಸೋತರು. ೧೯೮೭ರಲ್ಲಿ ಅವರು ಸಾತನೂರು ಕ್ಷೇತ್ರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಗೆ ಸದಸ್ಯರಾಗಿ ಆಯ್ಕೆಗೊಂಡರು. ೧೯೮೯ರಲ್ಲಿ ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷದ ಮೂಲಕ ಸಾತನೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದರು.

೧೯೯೧ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರು ಅನಾರೋಗ್ಯದ ಕಾರಣ ಮುಖ್ಯಮಂತ್ರಿ ಪದವಿ ತ್ಯಜಿಸಬೇಕಾಗಿ ಬಂದಾಗ ಅವರ ಉತ್ತರಾಧಿಕಾರಿಯನ್ನಾಗಿ ಬಂಗಾರಪ್ಪ ಅವರು ಸರ್ವಾನುಮತದಿಂದ ಆಯ್ಕೆಯಾದರು. ಇದರಲ್ಲಿ ಶಿವಕುಮಾರ್ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದರು. ಈ ಹಿನ್ನೆಲೆಯಲ್ಲಿ ಬಂಗಾರಪ್ಪ ಶಿವಕುಮಾರ್‌ಗೆ ಬಂಧಿಖಾನೆ ಸಚಿವ ಸ್ಥಾನ ನೀಡಿದ್ದರು.

೧೯೯೪ರಲ್ಲಿ ಪಕ್ಷ ಟಿಕೆಟ್ ನೀಡಲಿಲ್ಲ. ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಜಯಗಳಿಸಿದರು. ಎಸ್.ಎಂ. ಕೃಷ್ಣ ಅವರ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಕೆಲಸ ಮಾಡಿದರು. ಸಹಕಾರ ಸಚಿವರಾಗಿ, ನಗರಾಭಿವೃದ್ಧಿ ಖಾತೆ ಮತ್ತು ರಾಜ್ಯ ನಗರಯೋಜನಾ ಮಂಡಳಿಯ ಅಧ್ಯಕ್ಷರಾಗಿಯೂ ಕೆಲಸ ಮಾಡಿದರು.

೨೦೦೪ರಲ್ಲಿ ಶಿವಕುಮಾರ್ ಸಾತನೂರು ವಿಧಾನಸಭಾ ಕ್ಷೇತ್ರದಿಂದ ೪ನೇ ಬಾರಿ ಆರಿಸಿ ಬಂದರು. ಈ ವೇಳೆ ಪಕ್ಷ ಕಾಂಗ್ರೆಸ್ ಪಕ್ಷ ಬಹುಮತಗಳಿಸುವಲ್ಲಿ ವಿಫಲವಾಯಿತು. ೨೦೦೮ರಲ್ಲಿ ಮತ್ತೆ ಶಿವಕುಮಾರ್ ಶಾಸಕರಾದರು. ಈ ವೇಳೆ ಬಿಜೆಪಿ ಅಧಿಕಾರ ಪಡೆಯಿತು.

೨೦೧೩ರಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರ ಪಡೆಯಿತು. ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಡಿಕೆಶಿ ಇಂಧನ ಸಚಿವರಾಗಿ ಕೆಲಸ ಮಾಡಿದ್ದರು. ೨೦೧೮ರಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರಕಾರದಲ್ಲಿ ಶಿವಕುಮಾರ್ ಜಲಸಂಪನ್ಮೂಲ ಸಚಿವರಾಗಿದ್ದರು.