ಇಂದು ಸಿದ್ದರಾಮಯ್ಯ ಪ್ರಮಾಣ ವಚನ
ಬೆಂಗಳೂರು, ಮೇ ೧೯: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾ. ೨೦ ರಂದು (ಇಂದು) ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನಕ್ಕೆ ಭರದ ಸಿದ್ಧತೆ ನಡೆದಿದೆ. ಮತ್ತೊಂದೆಡೆ ಶನಿವಾರ ಮಧ್ಯಾಹ್ನ ೧೨.೩೦ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ಏರ್ಪಡಿಸಿರುವುದರಿಂದ ಪರೀಕ್ಷಾರ್ಥಿಗಳಿಗೆ ಟ್ರಾಫಿಕ್ ಸಮಸ್ಯೆ ಭೀತಿ ಶುರುವಾಗಿದೆ. ಯಾವುದೇ ಸಮಸ್ಯೆಗಳು ನಡೆಯದಂತೆ ಎಲ್ಲಾ ಸಿದ್ದತೆ ಮಾಡಿಕೊಂಡಿದ್ದೇವೆ. ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭ ವೇಳೆ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಮಹಿಳೆ ಮೇಲೆ ಬಾರಿ ಸಾಮೂಹಿಕ ಅತ್ಯಾಚಾರ
ಬಾಗ್ಪತ್, ಮೇ ೧೯: ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ೩೫ ವರ್ಷದ ಮಹಿಳೆಯೊಬ್ಬರ ಮೇಲೆ ಅದೇ ಗ್ರಾಮದ ನಾಲ್ವರು ಯುವಕರು ಹಲವು ಬಾರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಸರ್ಕಾರಿ ನೌಕರಿ ಬಯಸುತ್ತಿದ್ದ ಸಂತ್ರಸ್ತ ಮಹಿಳೆಗೆ ಆರೋಪಿಗಳು ಸಹಾಯ ಮಾಡುವ ಭರವಸೆ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಅವರು ಹೇಳಿದ್ದಾರೆ. ಫೆಬ್ರವರಿ ೧೪ ರಂದು ಸರ್ಕಾರಿ ಉದ್ಯೋಗದ ಭರವಸೆ ನೀಡಿದ ಹತ್ತು ದಿನಗಳ ನಂತರ, ಆರೋಪಿಗಳಾದ ಸೌರಭ್, ಕಮಲ್, ಶುಭಂ ಮತ್ತು ಸಾಗರ್ ಎಂಬ ನಾಲ್ವರು ನನ್ನ ಮನೆಗೆ ಬಂದು ಮಾದಕ ದ್ರವ್ಯ ಬೆರೆಸಿದ ತಂಪು ಪಾನೀಯ ಕುಡಿಸಿ, ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಪ್ರಜ್ಞಾಹೀನಳಾಗಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಇಡೀ ಘಟನೆಯನ್ನು ಯುವಕರು ಚಿತ್ರೀಕರಿಸಿದ್ದಾರೆ. ನಂತರ ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ವೀಡೀಯೊ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ ೯ ಮಂದಿ ಸಾವು: ಪಶ್ಚಿಮ ಬಂಗಾಳ ಸರ್ಕಾರಕ್ಕೆ ನೋಟೀಸ್
ಕೋಲ್ಕತ್ತಾ, ಮೇ ೧೯: ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಜನ ಸಾವನ್ನಪ್ಪಿ ಹಲವರು ಗಾಯಗೊಂಡ ಘಟನೆಯ ಬಗ್ಗೆ ವಿವರವಾದ ವರದಿ ನೀಡುವಂತೆ ರಾಷ್ಟಿçÃಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ) ಪಶ್ಚಿಮ ಬಂಗಾಳ ಸರ್ಕಾರಕ್ಕೆ ಶುಕ್ರವಾರ ನೋಟೀಸ್ ನೀಡಿದೆ. ತಾ. ೧೬ ರಂದು ಪುರ್ಬಾ ಮೇದಿನಿಪುರ ಜಿಲ್ಲೆಯ ಎಗ್ರಾದಲ್ಲಿ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿತ್ತು. ಸರ್ಕಾರದ ನಿರ್ಲಕ್ಷö್ಯದಿಂದಾಗಿ ಈ ಸ್ಫೋಟ ಸಂಭವಿಸಿದ್ದರೆ, ಸಂತ್ರಸ್ತರ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಎನ್ಹೆಚ್ಆರ್ಸಿ ಅಧಿಕಾರಿ ತಿಳಿಸಿದ್ದಾರೆ. ನಾಲ್ಕು ವಾರಗಳಲ್ಲಿ ಈ ವಿಷಯದ ಬಗ್ಗೆ ವಿವರವಾದ ವರದಿಯನ್ನು ಕೋರಿ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಹೆಚ್.ಕೆ. ದ್ವಿವೇದಿ ಮತ್ತು ಪೊಲೀಸ್ ಮಹಾನಿರ್ದೇಶಕ ಮನೋಜ್ ಮಾಳವಿಯಾ ಅವರಿಗೆ ನೋಟೀಸ್ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಮಾಣ ವಚನ ಸಮಾರಂಭ: ಕೇರಳ ಸಿಎಂಗಿಲ್ಲ ಆಹ್ವಾನ
ನವದೆಹಲಿ, ಮೇ ೧೯: ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಈ ಸಮಾರಂಭಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಕಾಂಗ್ರೆಸ್ ಆಹ್ವಾನಿಸಿಲ್ಲ. ಕಾಂಗ್ರೆಸ್ನ ಈ ಕ್ರಮ ಅಪಕ್ವ ರಾಜಕೀಯ ಮತ್ತು ದೌರ್ಬಲ್ಯವನ್ನು ತೋರಿಸುತ್ತದೆ ಎಂದು ಆಡಳಿತಾರೂಢ ಎಲ್ಡಿಎಫ್ ಶುಕ್ರವಾರ ಟೀಕಿಸಿದೆ. ನೆರೆಯ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೇರಿದಂತೆ ಇತರರಿಗೆ ಆಹ್ವಾನ ನೀಡಲಾಗಿದ್ದು, ತಾ. ೨೦ ರಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಕೇರಳ ಸಿಎಂಗೆ ಆಹ್ವಾನ ನೀಡದಿರುವುದು ಬಿಜೆಪಿಯ "ಫ್ಯಾಸಿಸ್ಟ್" ರಾಜಕೀಯದ ವಿರುದ್ಧ ದೇಶದ ಜಾತ್ಯತೀತ ಪ್ರಜಾಸತ್ತಾತ್ಮಕ ಶಕ್ತಿಗಳನ್ನು ಒಗ್ಗೂಡಿಸುವ ಧ್ಯೇಯ ಸಾಧಿಸಲು ಸಾಧ್ಯವಿಲ್ಲ ಎಂದು ಎಲ್ಡಿಎಫ್ ಸಂಚಾಲಕ ಇ.ಪಿ. ಜಯರಾಜನ್ ಹೇಳಿದ್ದಾರೆ.
ವಿಶೇಷಚೇತನ ವಿದ್ಯಾರ್ಥಿ ಕುಶಾಲ್ ನಾಯ್ಕ್ ರಾಜ್ಯಕ್ಕೆ ಪ್ರಥಮ
ಬೆಂಗಳೂರು, ಮೇ ೧೯: ಕಲಾ ವಿಭಾಗದಲ್ಲಿ ವಿದ್ಯಾರ್ಥಿ ಕುಶಾಲ್ ನಾಯ್ಕ್ ಪಿಯುಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚಿನ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಆ ಮೂಲಕ ಬೆಂಗಳೂರಿನ ಜಯನಗರ ಕಾಲೇಜಿನ ವಿದ್ಯಾರ್ಥಿನಿ ತಬಸುಮ್ ಶೇಖ್ನನ್ನು ಹಿಂದಿಕ್ಕಿದ್ದಾನೆ. ತಬಸುಮ್ ಶೇಖ್ ೫೯೩ ಅಂಕ ಪಡೆದು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ಆದರೆ ಮರು ಮೌಲ್ಯಮಾಪನದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನ ವಿಶೇಷಚೇತನ ವಿದ್ಯಾರ್ಥಿ ಕುಶಾಲ್ ನಾಯ್ಕ್ ದ್ವಿತೀಯ ಪಿಯುಸಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಕುಶ್ ನಾಯ್ಕ್ ಮೌಲ್ಯಮಾಪನ ಫಲಿತಾಂಶದಲ್ಲಿ ಕಲಾ ವಿಭಾಗದ ಐಚ್ಚಿಕ ಕನ್ನಡ ವಿಷಯದಲ್ಲಿ ೫೯೨ ಅಂಕಗಳಿAದ ೫೯೪ ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ರ್ಯಾಂಕ್ ಬಂದಿದ್ದಾರೆ. ಪಿಯು ಕಾಲೇಜಿನ ಮತ್ತೋರ್ವ ವಿದ್ಯಾರ್ಥಿ ಕೃಷ್ಣ ಒಟ್ಟು ೫೯೩ ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ದ್ವೀತಿಯ ಸ್ಥಾನ ಪಡೆದುಕೊಂಡಿದ್ದಾನೆ. ಈ ಮೂಲಕ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದು ಕಾಲೇಜು ಸತತ ಎಂಟನೇ ಬಾರಿಗೆ ಪ್ರಥಮ ಸ್ಥಾನ ಪಡೆದಿದೆ.
ಬೈಕ್ ಡಿಕ್ಕಿ; ಅಪ್ರಾಪ್ತ ಬಾಲಕರಿಬ್ಬರು ಸ್ಥಳದಲ್ಲೇ ಸಾವು
ಗದಗ, ಮೇ ೧೯: ಸವಾರನ ನಿಯಂತ್ರಣ ತಪ್ಪಿ ಬೈಕ್ ಒಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಅಪ್ರಾಪ್ತ ಬಾಲಕರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ೧೫ ವರ್ಷದ ಶ್ರೀಧರ ಗಡಗಿ ಹಾಗೂ ೧೬ ವರ್ಷದ ಅನೂಪ್ ಕುಮಾರ ಇಟಗಿ ಎಂದು ಗುರುತಿಸಲಾಗಿದೆ. ಒಂದು ಬೈಕ್ನಲ್ಲಿ ಮೂವರು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು ಶ್ರೀಧರ ಗಡಗಿ ಮತ್ತು ಅನೂಪ್ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮೌನೇಶ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಅಪಘಾತಕ್ಕೆ ಸಂಬAಧಿಸಿದAತೆ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.