ಮಡಿಕೇರಿ, ಮೇ ೧೯: ೨೦೨೨-೨೩ನೇ ಸಾಲಿನಲ್ಲಿ ಹಾಜರಾತಿ ಕೊರತೆಯಿಂದ ಪರೀಕ್ಷೆಗೆ ಹಾಜರಾಗದ ಕಲಾ ಮತ್ತು ವಾಣಿಜ್ಯ ವಿಭಾಗದ ಪಿ.ಯು.ಸಿ ವಿದ್ಯಾರ್ಥಿಗಳಿಗೆ ತಾ. ೨೩ ರಿಂದ ಪ್ರಾರಂಭವಾಗುವ ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆಗೆ ಹೆಸರು ನೋಂದಾಯಿಸಲು ಅವಕಾಶ ಕಲ್ಪಿಸಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು ತಿಳಿಸಿದ್ದಾರೆ.