ಕಾನೂನು ಸಚಿವ ಸ್ಥಾನ ಕಳೆದುಕೊಂಡ ಕಿರಣ್ ರಿಜಿಜು!
ನವದೆಹಲಿ, ಮೇ ೧೮: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕಾನೂನು ಸಚಿವರಾಗಿದ್ದ ಕಿರಣ್ ರಿಜಿಜುಗೆ ಭೂ ವಿಜ್ಞಾನ ಸಚಿವ ಸ್ಥಾನವನ್ನು ನೀಡಲಾಗಿದೆ. ಇನ್ನು, ಸಂಸದೀಯ ವ್ಯವಹಾರಗಳು ಮತ್ತು ಸಂಸ್ಕೃತಿ ರಾಜ್ಯ ಸಚಿವರಾಗಿರುವ ಅರ್ಜುನ್ ರಾಮ್ ಮೇಘ್ವಾಲ್ ಅವರಿಗೆ ಹೆಚ್ಚುವರಿಯಾಗಿ ಕಾನೂನು ಮತ್ತು ನ್ಯಾಯಾಂಗ ಸಚಿವ ಸ್ಥಾನ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟçಪತಿ ದ್ರೌಪದಿ ಮುರ್ಮು ಅವರು ಸಂಪುಟ ಪುನಾರಚನೆಗೆ ಅನುಮೋದನೆ ನೀಡಿದ್ದಾರೆ. ಇದೀಗ ಕಿರಣ್ ರಿಜಿಜು ಅವರನ್ನು ಕಾನೂನು ಸಚಿವಾಲಯದಿಂದ ಭೂ ವಿಜ್ಞಾನ ಸಚಿವಾಲಯಕ್ಕೆ ವರ್ಗಾಯಿಸಲಾಗಿದೆ. ಅದೇ ಸಮಯದಲ್ಲಿ ರಿಜಿಜು ಬದಲಿಗೆ ಅರ್ಜುನ್ ರಾಮ್ ಮೇಘವಾಲ್ ಅವರ ಅಸ್ತಿತ್ವದಲ್ಲಿರುವ ಖಾತೆಗೆ ಹೆಚ್ಚುವರಿಯಾಗಿ ಕಾನೂನು ಹಾಗೂ ನ್ಯಾಯ ಸಚಿವಾಲಯ ರಾಜ್ಯ ಸಚಿವರಾಗಿ ಜವಾಬ್ದಾರಿಯನ್ನು ನೀಡಲಾಗಿದೆ. ರಿಜಿಜು ಅರುಣಾಚಲ ಪಶ್ಚಿಮ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿದ್ದಾರೆ.
ಸಿದ್ದರಾಮಯ್ಯ ಪ್ರಮಾಣ ವಚನ ಸಮಾರಂಭಕ್ಕೆ ತಮಿಳುನಾಡು ಸಿಎಂಗೆ ಆಹ್ವಾನ
ಚೆನ್ನೆöÊ, ಮೇ ೧೮: ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಆಹ್ವಾನಿಸಲಾಗಿದೆ ಎಂದು ಸರ್ಕಾರ ಗುರುವಾರ ತಿಳಿಸಿದೆ.ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಅವರು ಇಂದು ಸ್ಟಾಲಿನ್ ಅವರಿಗೆ ಕರೆ ಮಾಡಿ ತಾ. ೨೦ ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಹಾಡಹಗಲೇ ಮೈಸೂರಿನಲ್ಲಿ ಗ್ಯಾಂಗ್ ವಾರ್: ರೌಡಿಶೀಟರ್ ಹತ್ಯೆ
ಮೈಸೂರು, ಮೇ ೧೮: ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹಾಡಹಗಲೇ ಗ್ಯಾಂಗ್ ವಾರ್ ನಡೆದಿದ್ದು, ಮುಖ್ಯರಸ್ತೆಯಲ್ಲೇ ಮಾರಕಾಸ್ತçಗಳಿಂದ ಕೊಚ್ಚಿ ರೌಡಿಶೀಟರ್ ಚಂದ್ರಶೇಖರ್ ಅಲಿಯಾಸ್ ಚಂದು ಎಂಬಾತನನ್ನು ಕೊಲೆಗೈಯ್ಯಲಾಗಿದೆ. ಮೈಸೂರಿನ ರೌಡಿಶೀಟರ್ ಒಂಟಿಕೊಪ್ಪಲಿನ ನಿವಾಸಿ ಚಂದ್ರಶೇಖರ್ ಅಲಿಯಾಸ್ ಚಂದು ಎಂಬಾತನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ರೌಡಿಶೀಟರ್ ಚಂದು, ಮಹಾನಗರ ಪಾಲಿಕೆ ಮಾಜಿ ಸದಸ್ಯ ಮಹದೇಶ್ ಅಲಿಯಾಸ್ ಅವ್ವ ಮಾದೇಶ್ ಅವರ ಆಪ್ತನಾಗಿದ್ದ ಎಂದು ಹೇಳಲಾಗಿದ್ದು, ದ್ವಿಚಕ್ರ ವಾಹನದಲ್ಲಿ ಬಂದ ೬ ಮಂದಿ ದುಷ್ಕರ್ಮಿಗಳು ಮುಖ್ಯರಸ್ತೆಯಲ್ಲೇ ಮಾರಕಾಸ್ತçಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ರೌಡಿಶೀಟರ್ ಚಂದು ಹುಣಸೂರು ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ. ಕಳೆದ ಕೆಲ ದಿನಗಳಿಂದಷ್ಟೇ ಕೇಸ್ ಖುಲಾಸೆಯಾಗಿ ಜೈಲಿನಿಂದ ಹೊರಗೆ ಬಂದಿದ್ದ. ಪಡುವಾರಹಳ್ಳಿಯ ದೇವು ಕೊಲೆಗೆ ಪ್ರತಿಕಾರ ತೀರಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನೋಟರಿ ವಕೀಲರ ನೇಮಕಕ್ಕೆ ಲಂಚ ಆರೋಪ:ಇಬ್ಬರ ಬಂಧನ
ಬೆAಗಳೂರು, ಮೇ ೧೮: ನೋಟರಿ ವಕೀಲರನ್ನು ನೇಮಕ ಮಾಡಲು ಲಂಚ ಪಡೆದ ಆರೋಪಕ್ಕೆ ಸಂಬAಧಿಸಿದAತೆ ಕಾನೂನು ಮತ್ತು ನ್ಯಾಯ ಸಚಿವಾಲಯದ ಕಾನೂನು ವ್ಯವಹಾರದ ವಿಭಾಗದ ಹೆಚ್ಚುವರಿ ಕಾನೂನು ಸಲಹೆಗಾರ ಟಿ.ಕೆ. ಮಲಿಕ್ ಅವರನ್ನು ಬೆಂಗಳೂರಿನಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ನೋಟರಿ ವಕೀಲರನ್ನು ನೇಮಕ ಮಾಡಲು ೫೦ ಸಾವಿರ ರೂ ಲಂಚಕ್ಕೆ ಬೇಡಿಕೆಯಿಟ್ಟು, ಮುಂಗಡವಾಗಿ ೨೫,೦೦೦ ರೂ ಪಡೆಯುತ್ತಿದ್ದ ಆರೋಪದಡಿ ಕಾನೂನು ಮತ್ತು ನ್ಯಾಯ ಸಚಿವಾಲಯದ ಕಾನೂನು ವ್ಯವಹಾರದ ವಿಭಾಗದ ಹೆಚ್ಚುವರಿ ಕಾನೂನು ಸಲಹೆಗಾರ ಟಿ.ಕೆ. ಮಲಿಕ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಮೂಲಗಳ ಪ್ರಕಾರ, ‘ಕೇಂದ್ರ ಸರ್ಕಾರದ ನೋಟರಿ ನೇಮಕ ಮಾಡುವ ಜವಾಬ್ದಾರಿಯನ್ನು ಕಾನೂನು ವ್ಯವಹಾರ ವಿಭಾಗಕ್ಕೆ ನೀಡಲಾಗಿದೆ. ಬೆಂಗಳೂರಿನ ಕಚೇರಿಯಲ್ಲಿ ಕೆಲಸ ಮಾಡುವ ಮಲಿಕ್, ಅಧಿಕಾರ ದುರುಪಯೋಗಪಡಿಸಿಕೊಂಡು ಲಂಚ ಪಡೆದು ನೋಟರಿ ನೀಡುತ್ತಿದ್ದ. ಇದಕ್ಕೆ ಸಹಕರಿಸುತ್ತಿದ್ದ ಬೆಂಗಳೂರಿನ ವಕೀಲರಾದ ಜಿ.ಕೆ. ವಾಣಿ ಎಂಬವರನ್ನೂ ಬಂಧಿಸಲಾಗಿದ್ದು, ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.
ಪೊಲೀಸ್ ದೌರ್ಜನ್ಯ: ಮತ್ತಿಬ್ಬರು ಅಮಾನತು
ಮಂಗಳೂರು, ಮೇ ೧೮: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರ ಭಾವಚಿತ್ರವಿರುವ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳಿಗೆ ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು ಈ ಹಿನ್ನೆಲೆಯಲ್ಲಿ ಡಿವೈಎಸ್‌ಪಿಗೆ ಕಡ್ಡಾಯ ರಜೆ ಹಾಗೂ ಇಬ್ಬರನ್ನು ಅಮಾನತು ಮಾಡಲಾಗಿದೆ. ಪ್ರಕರಣ ಸಂಬAಧ ಪುತ್ತೂರು ಗ್ರಾಮಾಂತರ ಸಬ್ ಇನ್ಸ್ಪೆಕ್ಟರ್ ಶ್ರೀನಾಥ ರೆಡ್ಡಿ ಹಾಗೂ ನಗರ ಠಾಣೆ ಕಾನ್ಸ್ಟೇಬಲ್‌ನನ್ನು ಅಮಾನತು ಮಾಡಲಾಗಿದೆ. ಮೇಲಧಿಕಾರಿಗಳಿಗೆ ಡಿವೈಎಸ್‌ಪಿ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗಿದ್ದ ಹಿನ್ನೆಲೆಯಲ್ಲಿ ಡಿವೈಎಸ್‌ಪಿ ವೀರಯ್ಯ ಹಿರೇಮಠ್ ಅವರನ್ನು ರಜೆಯ ಮೇಲೆ ಕಳುಹಿಸಲಾಗಿದೆ. ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತ ಅವಿನಾಶ್ ದೂರಿನ ಹಿನ್ನೆಲೆ ಎಫ್‌ಐಆರ್ ದಾಖಲಾಗಿದೆ. ಕಟೀಲ್ ಹಾಗೂ ಸದಾನಂದಗೌಡ ಭಾವಚಿತ್ರವಿರುವ ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಒಂಬತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಇವರ ಮೇಲೆ ಪೊಲೀಸರು ದೌರ್ಜನ್ಯವೆಸಗಿದ್ದಾರೆಂದು ಹೇಳಲಾಗುತ್ತಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ಪುತ್ತೂರಿನ ನರಿಮೊಗ್ರು ನಿವಾಸಿಗಳಾದ ಅಭಿ ಅಲಿಯಾಸ್ ಅವಿನಾಶ್, ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್, ವಿಶ್ವನಾಥ್ ಮತ್ತು ಮಾಧವ ಎಂಬ ಒಟ್ಟು ೯ ಮಂದಿಯನ್ನು ಪುತ್ತೂರು ಪೇಟೆ ಪೊಲೀಸರು ಬಂಧನಕ್ಕೊಳಪಡಿಸಿದ್ದರು.