ಪೊನ್ನಂಪೇಟೆ, ಮೇ ೧೮: ಯಾವುದೇ ಕ್ರೀಡೆಯಾಗಲಿ ಅದನ್ನು ನಿಗದಿತ ವಯಸ್ಸಿನ ಪರಿಮಿತಿಯೊಳಗೆ ರೂಢಿಸಿಕೊಳ್ಳಬೇಕು. ವಯಸ್ಸು ಮೀರಿದರೆ ಕ್ರೀಡೆಯಲ್ಲಿ ಎಷ್ಟೇ ಅವಕಾಶವಿದ್ದರೂ ಅದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಮಾಜಿ ಅಂರ‍್ರಾಷ್ಟಿçÃಯ ರಗ್ಬಿ ಆಟಗಾರ ವೀರಾಜಪೇಟೆಯ ಮಾದಂಡ ಪಿ. ತಿಮ್ಮಯ್ಯ ಹೇಳಿದರು.

ರೂರಲ್ ಎಜುಕೇಶನ್ ಅಂಡ್ ಸ್ಪೋರ್ಟ್ಸ್ ಡೆವಲಪ್ಮೆಂಟ್ ಆರ್ಗನೈಸೇಷನ್ ವತಿಯಿಂದ ಬಿಟ್ಟಂಗಾಲ ಸಮೀಪದ ಕಂಡAಗಾಲದ ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ೬ ರಿಂದ ೧೫ ವರ್ಷದೊಳಗಿನ ವಿದ್ಯಾರ್ಥಿಗಳಿಗಾಗಿ ನಡೆದ ಪ್ರಥಮ ವರ್ಷದ ಹಾಕಿ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕ್ರೀಡೆ ವ್ಯಕ್ತಿಯ ಪ್ರಾಯಧಾರಿತವಾದ ವಿಷಯವಾಗಿದೆ. ಚಿಕ್ಕ ವಯಸ್ಸಿನಲ್ಲಿ ಸಾಧನೆ ಅಸಾಧ್ಯ ಎಂಬ ತಾತ್ಸಾರದಿಂದ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದಕ್ಕೆ ಹಿಂದೇಟು ಹಾಕಿದರೆ ಭವಿಷ್ಯದಲ್ಲಿ ಅದು ಪರಿಣಾಮ ಬೀರುತ್ತದೆ ಎಂದು ಅಭಿಪ್ರಾಯಪಟ್ಟರು.

ಮುಖ್ಯವಾಗಿ ಕ್ರೀಡೆಯಲ್ಲಿ ಯಶಸ್ಸು ಸಾಧಿಸಲು ಶಿಕ್ಷಣ ಮತ್ತು ಶಿಸ್ತು ಅತಿ ಮುಖ್ಯ. ಮುಖ್ಯವಾಗಿ ಶಿಕ್ಷಣವೇ ಕ್ರೀಡೆಯ ತಳಹದಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರಲ್ಲದೆ ಬಹಳಷ್ಟು ಮುಂದುವರೆದ ರಾಷ್ಟçಗಳಲ್ಲಿ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದವರಿಗೆ ಮಾತ್ರ ಕ್ರೀಡೆಯಲ್ಲಿ ಮುಂದುವರಿಯಲು ಅವಕಾಶ ನೀಡಲಾಗುತ್ತದೆ ಎಂದು ತಿಮ್ಮಯ್ಯ ವಿವರಿಸಿದರು. ಮತ್ತೋರ್ವ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ವಿ. ಬಾಡಗದ ಹೈಪ್ಲೇಯರ್ಸ್ ಸಂಸ್ಥೆಯ ಅಧ್ಯಕ್ಷ ಅಮ್ಮಣಿಚಂಡ ರಂಜಿ ಪೂಣಚ್ಚ ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ನಡೆಯುವ ಕ್ರೀಡಾ ತರಬೇತಿ ಶಿಬಿರಗಳಿಂದ ಬಹಳಷ್ಟು ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ದೊರೆತಿದೆ.

ಈ ಕಾರಣದಿಂದ ಗ್ರಾಮೀಣ ಪ್ರದೇಶದ ಹಲವಾರು ಯುವಕರು ಕ್ರೀಡೆಯ ಮೂಲಕ ತಮ್ಮ ಭವಿಷ್ಯ ರೂಪಿಸಿಕೊಂಡಿದ್ದಾರೆ. ಇದರಿಂದ ಗ್ರಾಮೀಣ ಮಟ್ಟದಲ್ಲಿ ನಡೆಯುವ ಕ್ರೀಡಾ ತರಬೇತಿ ಶಿಬಿರಗಳು ಮುಂದೆ ಯುವಕರ ಬದುಕಿನಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೂರಲ್ ಎಜುಕೇಶನ್ ಅಂಡ್ ಸ್ಪೋರ್ಟ್ಸ್ ಡೆವಲಪ್ಮೆಂಟ್ ಆರ್ಗನೈಸಿಯನ್ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕಂಬಿರAಡ ದಿವ್ಯ ಮುತ್ತಪ್ಪ ಅವರು ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ಅರ್ಹ ವಿದ್ಯಾರ್ಥಿಗಳನ್ನು ಶಿಕ್ಷಣ ಮತ್ತು ಕ್ರೀಡೆಯಲ್ಲಿ ನಿರಂತರವಾಗಿ ಉತ್ತೇಜಿಸುವುದೇ ನಮ್ಮ ಸಂಸ್ಥೆಯ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಮೊದಲ ವರ್ಷದ ಕಾರ್ಯಕ್ರಮವಾಗಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಹಾಕಿ ತರಬೇತಿ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ಮುಂದೆಯೂ ಜಿಲ್ಲೆಯ ವಿವಿಧ ಗ್ರಾಮಾಂತರ ಪ್ರದೇಶದಲ್ಲಿ ಶಿಕ್ಷಣ ಮತ್ತು ಕ್ರೀಡೆಗೆ ಸಂಬAಧಿಸಿದ ವಿವಿಧ ಯೋಜನೆಗಳಡಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆಯ ಅಪ್ಪಂಡೇರAಡ ದಿನು ದೇವಯ್ಯ ಮೊದಲಾದವರು ಭಾಗವಹಿಸಿದ್ದರು. ಕಳೆದ ಏ. ೨೮ ರಿಂದ ಆರಂಭಗೊAಡು ಮೇ ೧೪ ರವರೆಗೆ ಒಟ್ಟು ೧೭ ದಿನಗಳ ಕಾಲ ನಡೆದ ಹಾಕಿ ತರಬೇತಿ ಶಿಬಿರದಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಸAಸ್ಥೆಯ ಉಪಾಧ್ಯಕ್ಷ ಮೂಕಚಂಡ ನಿರನ್ ನಾಚಪ್ಪ ಸ್ವಾಗತಿಸಿದರು. ಜಂಟಿ ಕಾರ್ಯದರ್ಶಿ ಕಾರ್ಯಪ್ಪ ಕಾರ್ಯಕ್ರಮ ನಿರ್ವಹಿಸಿದರೆ, ಸಂಸ್ಥೆಯ ಕೋಶಾಧಿಕಾರಿಗಳಾದ ಕುಪ್ಪಂಡ ದಿಲನ್ ಬೋಪಣ್ಣ ವಂದಿಸಿದರು.

ಶಿಬಿರದಲ್ಲಿ ಈ ಮಧ್ಯೆ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲಿಬೆಟ್ಟ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಬಸವರಾಜು ಅವರು ವಿದ್ಯಾರ್ಥಿಗಳು ತಮ್ಮ ಆರೋಗ್ಯವನ್ನು ಕಾಪಾಡಿ ಕೊಳ್ಳುವ ಬಗ್ಗೆ ಉಪನ್ಯಾಸ ನೀಡಿದರು.

ವೀರಾಜಪೇಟೆಯ ಟ್ರಾವೆಲ್ ಅಡ್ವೆಂಚರ್ ಸಂಸ್ಥೆ ವತಿಯಿಂದ ಶಿಬಿರದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳಿಗಾಗಿ ಕುಂದ ಬೆಟ್ಟಕ್ಕೆ ಚಾರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.