ಕರಿಕೆ, ಮೇ ೧೯: ಕೆಲವೇ ದಿನಗಳಲ್ಲಿ ಮಳೆಗಾಲ ಆರಂಭವಾಗಲಿದ್ದು, ಕೇರಳಕ್ಕೆ ಸಂಪರ್ಕ ಕಲ್ಪಿಸುವ ಅಂತರ್ ರಾಜ್ಯ ಹೆದ್ದಾರಿ ಭಾಗಮಂಡಲದಿAದ- ಕರಿಕೆವರೆಗೆ ರಸ್ತೆ ಬದಿ ನೀರು ಹರಿದು ಹೋಗಲು ಚರಂಡಿಗಳಿಲ್ಲದೆ ಮಳೆಗಾಲದಲ್ಲಿ ರಸ್ತೆ ಕೊಚ್ಚಿ ಹೋಗುವ ಸಾಧ್ಯತೆ ಇದೆ.

ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಕೆಲವು ಕಡೆ ಡಾಂಬರೀಕರಣ ಮಾಡಿದ್ದು, ಚರಂಡಿ ವ್ಯವಸ್ಥೆಯನ್ನು ಸಮರ್ಪಕ ರೀತಿಯಲ್ಲಿ ನಿರ್ವಹಿಸದ ಕಾರಣ ರಸ್ತೆಗೆ ಹಾನಿಯಾಗುವ ಸಾಧ್ಯತೆಯಿದೆ. ಕೂಡಲೇ ಲೋಕೋಪಯೋಗಿ ಇಲಾಖೆ ಎಚ್ಚೆತ್ತುಕೊಂಡು ರಸ್ತೆ ಬದಿ ಚರಂಡಿ ನಿರ್ಮಾಣ ಮಾಡಲು ಕ್ರಮ ವಹಿಸದಿದ್ದಲ್ಲಿ ಕೋಟ್ಯಂತರ ರೂಪಾಯಿ ಹಣ ವ್ಯಯಮಾಡಿ ನಿರ್ಮಿಸಿದ ರಸ್ತೆ ನೀರಿನಲ್ಲಿ ಕೊಚ್ಚಿಹೋಗುವುದರಲ್ಲಿ ಯಾವುದೇ ಸಂದೇಹವಿಲ್ಲ.

ಕಳೆದ ಮಳೆಗಾಲದಲ್ಲಿ ಗುಡ್ಡ ಕುಸಿದು ಸಂಪರ್ಕ ಕಡಿತಗೊಂಡು ತೀವ್ರ ಸಂಕಷ್ಟ ಅನುಭವಿಸಿದ್ದು, ಈ ಬಾರಿಯಾದರೂ ಸಂಬAಧಿಸಿದ ಇಲಾಖೆ ಸಮರ್ಪಕವಾದ ಚರಂಡಿ ನಿರ್ಮಾಣ ಮಾಡಲಿ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

- ಸುಧೀರ್ ಹೊದ್ದೆಟ್ಟಿ