ಮಡಿಕೇರಿ, ಮೇ ೨೦: ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರ ಮತ್ತು ತೆಲಂಗಾಣ ದಕ್ಷಿಣ ರಾಜ್ಯಗಳ ವಿದ್ಯುತ್ ನಿಯಂತ್ರಣ ಆಯೋಗದ ಸದಸ್ಯರ ತಂಡವು ಶನಿವಾರ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿತ್ತು.

ಕರ್ನಾಟಕ ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗದ ಅಧ್ಯಕ್ಷರಾದ ರವಿಕುಮಾರ್ ಅವರ ನೇತೃತ್ವದಲ್ಲಿ ದಕ್ಷಿಣ ರಾಜ್ಯಗಳ ವಿದ್ಯುತ್ ನಿಯಂತ್ರಣ ಆಯೋಗದ ಸದಸ್ಯರ ತಂಡವು ಭೇಟಿ ನೀಡಿ, ಮಾಹಿತಿ ಪಡೆಯಿತು.

ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಅನಿತಾ ಬಾಯಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್, ಸಂಪತ್ ಇತರರು ಇದ್ದರು.