ಮಡಿಕೇರಿ, ಮೇ ೨೧: ನಗರದ ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗ ಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ, ಪಾಷಾಣಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ದೈವ ಕೋಲವು ತಾ. ೨೨ ರಿಂದ ಆರಂಭಗೊಳ್ಳಲಿದೆ.

ಪಯ್ಯನ್ನೂರ್ ಆಚಾರ್ಯ ಈಶ್ವರನ್ ನಂಬೂದರಿ ಅವರ ನೇತೃತ್ವದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ.

ತಾ. ೨೨ ರಂದು ಸಂಜೆ ೬ ಗಂಟೆಗೆ ಆಚಾರ್ಯ ವರಣಂ, ಪುಣ್ಯಹ ಶುದ್ಧಿ, ಸುದರ್ಶನ ಹೋಮ, ದೇವಿ ಪೂಜೆ, ಲಲಿತಾ ಸಹಸ್ರನಾಮಾರ್ಚನೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ.

ತಾ. ೨೩ ರಂದು ಬೆಳಿಗ್ಗೆ ೬ ಗಂಟೆಯಿAದ ಮಹಾಗಣಪತಿ ಹೋಮ, ನವಕ ಪಂಚಗವ್ಯ, ಕಲಶ ಪೂಜೆ, ಕಳಶಾಭಿಷೇಕ, ಸರ್ವಾಲಂಕಾರ, ಮಹಾಪೂಜೆ ಹಾಗೂ ಪಾಷಾಣಮೂರ್ತಿ ದೈವದ ಕಲಶ ಪೂಜೆ, ಅಲಂಕಾರ ಪೂಜೆ ಮತ್ತು ಮಂಗಳಾರತಿ ನಡೆಯಲಿದೆ.

ಬೆಳಿಗ್ಗೆ ೮ ಗಂಟೆಗೆ ಆಶ್ಲೇಷ ಬಲಿ, ನಾಗಪೂಜೆ, ಕ್ಷೀರಾಭೀಷೇಕ ನಡೆಯಲಿದ್ದು, ಪೂರ್ವಾಹ್ನ ೧೧ ಗಂಟೆಗೆ ನಾಗದರ್ಶನ, ಮಹಾ ಪೂಜೆ, ಪ್ರಸಾದ ವಿತರಣೆ ಮತ್ತು ಮಧ್ಯಾಹ್ನ ೧೨.೩೦ಕ್ಕೆ ಭಕ್ತರಿಗೆ ಅನ್ನಸಂತರ್ಪಣೆ ನೆರವೇರಲಿದೆ. ಉಡುಪಿಯ ಪೆರ್ಲಂಪಾಡಿ ರಮಾನಂದ ಭಟ್ ನಾಗಪಾತ್ರಿಗಳಾಗಿ ನಾಗಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ನಾಗದರ್ಶನ ನಡೆಸಿಕೊಡಲಿದ್ದಾರೆ.

ರಾತ್ರಿ ೭.೩೦ರಿಂದ ಪಾಷಾಣಮೂರ್ತಿ ದೈವಕೋಲ ಮತ್ತು ತಾ. ೨೪ ರಂದು ಸಂಜೆ ೫ ಗಂಟೆಯಿAದ ಪಾಷಾಣಮೂರ್ತಿ ದೈವದ ಅಗೆಲು ಸೇವೆ ನಡೆಯಲಿದೆ ಎಂದು ದೇವಾಲಯದ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.