ಮಡಿಕೇರಿ, ಮೇ ೨೧ : ಈ ಬಾರಿ ಮಡಿಕೇರಿ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯ ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದೆ. ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ಸಮುದಾಯ ನಿರ್ಣಾಯಕ ಪಾತ್ರ ವಹಿಸಿದೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಆಡಳಿತ ಅಲ್ಪಸಂಖ್ಯಾತ ನಾಯಕರಿಗೆ ಸೂಕ್ತ ಸ್ಥಾನಮಾನ ನೀಡಲಿದೆ ಎಂಬ ವಿಶ್ವಾಸವಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಕಲೀಲ್ ಬಾಷಾ ಹಾಗೂ ಕುಶಾಲನಗರ ವಿಭಾಗದ ಅಧ್ಯಕ್ಷ ಅಬ್ದುಲ್ ರಜಾಕ್ ಎಂದು ತಿಳಿಸಿದ್ದಾರೆ.

ಕೊಡಗು ಜಿಲ್ಲೆಯ ಕಾಂಗ್ರೆಸ್ ಮತ ಬ್ಯಾಂಕ್ ಆಗಿರುವ ಅಲ್ಪಸಂಖ್ಯಾತ ಸಮುದಾಯಕ್ಕೆ ವಿಧಾನ ಪರಿಷತ್ ಸದಸ್ಯತ್ವ ನೀಡಬೇಕೆನ್ನುವ ಹಲವು ವರ್ಷಗಳ ಬೇಡಿಕೆಯನ್ನು ಈ ಬಾರಿಯಾದರು ಈಡೇರಿಸಬೇಕೆಂದು ಒತ್ತಾಯಿಸಿದ್ದಾರೆ.