ಮಡಿಕೇರಿ, ಮೇ ೨೧: ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಗೌಡ ಟಿ೧೦ ಲೆದರ್ ಬಾಲ್ ಕ್ರಿಕೆಟ್ ಟೂರ್ನಿಯ ೨ನೆ ದಿನದ ಪಂದ್ಯಾಟದಲ್ಲಿ ಕೆ.ಜಿ.ಎಸ್ ಸ್ಟೆçöÊಕರ್ಸ್ ಹಾಗೂ ಎಲೀಟ್ ಕ್ರಿಕೆಟ್ ಕ್ಲಬ್ ಜಯ ಸಾಧಿಸಿವೆ.

ಮೊದಲ ಪಂದ್ಯದಲ್ಲಿ ಎಂಸಿಬಿ ತಂಡ ೧೦ ಓವರ್‌ಗೆ ೬ ವಿಕೆಟ್ ನಷ್ಟಕ್ಕೆ ೯೨ ರನ್ ಗಳಿಸಿತು. ಇದನ್ನು ಬೆನ್ನಟ್ಟಿದ ಎಲೀಟ್ ತಂಡ ೯.೧ ಓವರ್‌ನಲ್ಲಿ ೪ ವಿಕೆಟ್ ನಷ್ಟಕ್ಕೆ ೯೩ ರನ್ ಗಳಿಸಿ ಜಯ ಸಾಧಿಸಿತು. ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆ.ಜಿ.ಎಸ್ ತಂಡ ೧೦ ಓವರ್‌ಗಳಲ್ಲಿ ೬ ವಿಕೆಟ್ ನಷ್ಟಕ್ಕೆ ೯೩ ರನ್ ಗಳಿಸಿತು. ಇದನ್ನು ಬೆನ್ನಟ್ಟಿದ ಪ್ಲಾಂಟರ್ಸ್ ಕ್ಲಬ್ ಬಿಳಿಗೇರಿ ತಂಡ ೧೦ ಓವರ್‌ಗಳಲ್ಲಿ ೭ ವಿಕೆಟ್ ನಷ್ಟಕ್ಕೆ ೭೨ ರನ್ ಗಳಿಸಲಷ್ಟೇ ಶಕ್ತವಾಗಿ ಸೋಲನುಭವಿಸಿತು.

೩ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪ್ಲಾಂಟರ್ಸ್ ಕ್ಲಬ್ ಬಿಳಿಗೇರಿ ತಂಡ ೧೦ ಓವರ್‌ಗಳಲ್ಲಿ ೪ ವಿಕೆಟ್ ನಷ್ಟಕ್ಕೆ ೫೮ ರನ್ ಗಳಿಸಿತು. ಇದನ್ನು ಬೆನ್ನಟ್ಟಿದ ಎಲೀಟ್ ಕ್ರಿಕೆಟ್ ಕ್ಲಬ್ ತಂಡ ೫.೩ ಓವರ್‌ಗಳಲ್ಲಿ ೪ ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.