ನಾಪೋಕ್ಲು, ಮೇ ೨೧: ಪಟ್ಟಣದ ಸುತ್ತಮುತ್ತ ಭಾನುವಾರ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಿದೆ. ಅಲ್ಲಲ್ಲಿ ಮರದ ರೆಂಬೆಗಳು ಮುರಿದು ಬಿದ್ದಿದ್ದು ವಿದ್ಯುತ್ ಕಂಬಗಳು ತುಂಡಾಗಿವೆ. ಸ್ಥಳೀಯ ಸರಕಾರಿ ಪದವಿ ಕಾಲೇಜಿನ ರಸ್ತೆಗೆ ಮರ ಬಿದ್ದುದಲ್ಲದೆ ವಿದ್ಯುತ್ ಕಂಬಗಳು ತುಂಡಾಗಿವೆ. ಗ್ರಾಮೀಣ ಭಾಗದ ಹಲವೆಡೆ ವಿದ್ಯುತ್ ಕಂಬಗಳ ಮೇಲೆ ಮರ ಮುರಿದು ಬಿದ್ದ ಪರಿಣಾಮ ಕಂಬಗಳು ತುಂಡಾಗಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.