ಅಂಡರ್ ಪಾಸ್‌ನಲ್ಲಿ ಯುವತಿ ಸಾವು, ಕ್ಯಾಬ್ ಚಾಲಕನ ಬಂಧನ
ಬೆAಗಳೂರು, ಮೇ ೨೨: ಬೆಂಗಳೂರು ನಗರದ ಕೆ.ಆರ್. ಸರ್ಕಲ್ ಅಂಡರ್‌ಪಾಸ್‌ನಲ್ಲಿ ಕಾರು ಮುಳುಗಡೆಯಾಗಿ ಟೆಕ್ಕಿ ಸಾವನ್ನಪ್ಪಿದ ಪ್ರಕರಣ ಸಂಬAಧ ಕಾರು ಚಾಲಕನನ್ನು ಹಲಸೂರು ಗೇಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾರು ಚಾಲಕ ಹರೀಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಮೃತ ಯುವತಿ ಸಹೋದರ ನೀಡಿದ ದೂರಿನ ಅನ್ವಯ ಕ್ಯಾಬ್ ಚಾಲಕ ಹರೀಶ್ ಮತ್ತು ಬಿಬಿಎಂಪಿ ಅಧಿಕಾರಿಗಳ ವಿರುದ್ಧವೂ ಎಫ್‌ಐಆರ್ ಹಾಕಲಾಗಿದೆ ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಬೇಡ ಎಂದು ಹೇಳಿದರೂ ಕೇಳದ ಚಾಲಕ ಹರೀಶ್, ನೀರು ತುಂಬಿದ್ದ ಅಂಡರ್ ಪಾಸ್‌ನಲ್ಲಿ ಕಾರು ಚಲಾಯಿಸಿದ್ದಾನೆ. ಈ ವೇಳೆ ಕಾರಿನ ಬಾಗಿಲು ಬಂದ್ ಆದ ಹಿನ್ನೆಲೆ ಪ್ರಯಾಣಿಕರು ಕಾರಿನಿಂದ ಇಳಿಯಲು ಯತ್ನಿಸಿದಾಗ ಹರೀಶ್, ಬೇಡ ತಾನೇ ಕಾರ್ ಆನ್ ಮಾಡಿ ಕರೆದೊಯ್ಯುವುದಾಗಿ ಹೇಳಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅಂತೆಯೇ ಬಿಬಿಎಂಪಿ ಬೇಜವಾಬ್ದಾರಿಗೆ ಅಂಡರ್‌ಪಾಸ್‌ನಲ್ಲಿ ಮಳೆ ನೀರು ತುಂಬಿದೆ ಎಂದು ಹೇಳಲಾಗಿದ್ದು ಈ ಬಗ್ಗೆಯೂ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಭಾನುರೇಖಾ ಸಾವಿಗೆ ಚಾಲಕ ಹರೀಶ್, ಬಿಬಿಎಂಪಿ ಕಾರಣ ಎಂದು ಮೃತಳ ಸಹೋದರ ದೂರು ನೀಡಿದ್ದರು. ಅದರಂತೆ ಕಾರು ಚಾಲಕನ್ನು ಬಂಧಿಸಲಾಗಿದೆ. ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಕೆಆರ್ ಸರ್ಕಲ್‌ನ ಅಂಡರ್‌ಪಾಸ್‌ನಲ್ಲಿ ಸುಮಾರು ೫ ಅಡಿಯಷ್ಟು ಎತ್ತರಕ್ಕೆ ನೀರು ತುಂಬಿತ್ತು. ಆರು ಮಂದಿ ಪ್ರಯಾಣಿಸುತ್ತಿದ್ದ ಕಾರು ಈ ಅಂಡರ್‌ಪಾಸ್‌ನಲ್ಲಿ ಹೋಗಿ ಮುಳುಗಿತ್ತು. ಕೂಡಲೇ ಎಚ್ಚೆತ್ತ ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸಿ ಆರು ಮಂದಿಯನ್ನು ರಕ್ಷಿಸಿದ್ದರು. ಈ ಪೈಕಿ ತೀವ್ರ ಅಸ್ವಸ್ಥಗೊಂಡಿದ್ದ ಬಾನುರೇಖಾ ಸಾವನ್ನಪ್ಪಿದ್ದಳು.
ಅನುಮಾನಾಸ್ಪದ ಓಡಾಟ; ಹಿಡಿಯಲು ಬಂದ ಪೊಲೀಸರ ಮೇಲೆ ಕಾರು ಹತ್ತಿಸಿದ ದುಷ್ಕರ್ಮಿಗಳು
ಬೆಂಗಳೂರು, ಮೇ ೨೨: ಬೆಂಗಳೂರಿನ ಹೊರವಲಯದಲ್ಲಿ ನಂಬರ್ ಬೋರ್ಡ್ ಇಲ್ಲದ ಕಾರನ್ನು ಅನುಮಾನಾಸ್ಪದವಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ದುಷ್ಕರ್ಮಿಗಳ ತಂಡವನ್ನು ಹಿಡಿಯಲು ಪೊಲೀಸರ ಹರಸಾಹಸ ಪಟ್ಟ ಘಟನೆ ನಡೆದಿದೆ. ತಮ್ಮನ್ನು ಹಿಡಿಯಲು ಬಂದ ಪೊಲೀಸರ ಬೈಕ್‌ಗಳ ಮೇಲೆಯೇ ದುಷ್ಕರ್ಮಿಗಳು ಕಾರು ಚಲಾಯಿಸಿ ಪೊಲೀಸರಿಂದ ತಪ್ಪಿಸಿಕೊಂಡಿದ್ದಾರೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ಸಿನಿಮಾ ಶೈಲಿಯಲ್ಲಿ ನಡೆದ ಭೀಕರ ಅಪಘಾತಕ್ಕೆ ಇಡೀ ಗ್ರಾಮವೇ ಬೆಚ್ಚಿಬಿದ್ದಿದ್ದು, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಜ್ಯ ಗಡಿ ತಮಿಳುನಾಡಿನ ಜೂಜುವಾಡಿ ಬಳಿ ನಂಬರ್ ಪ್ಲೇಟ್ ಇಲ್ಲದ ಕಾರು ಅನುಮಾನಸ್ಪದವಾಗಿ ಸಂಚರಿಸುತ್ತಿತ್ತು. ಇದನ್ನು ನೋಡಿದ ತಮಿಳುನಾಡು ಪೊಲೀಸರು ಹಿಂಭಾಲಿಸಿದ್ದಾರೆ. ಈ ವೇಳೆ ಆನೇಕಲ್ ತಾಲೂಕಿನ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಳೂರು ಗ್ರಾಮದಲ್ಲಿ ಮಿನಿ ಬಸ್ ಮತ್ತು ಮಿನಿ ಟೆಂಪೊ ಅಡ್ಡ ಬಂದು ತಪ್ಪಿಸಿಕೊಳ್ಳಲಾಗದೆ ಕಾರು ಸಿಕ್ಕಿಹಾಕಿಕೊಂಡಿತ್ತು. ಈ ವೇಳೆ ಅಡ್ಡಗಟ್ಟಿದ ಪೊಲೀಸರು ವಿಚಾರಣೆಗೆ ಮುಂದಾಗಿದ್ದಾರೆ. ಪೊಲೀಸರು ಸಮೀಪ ಬರುತ್ತಿದ್ದಂತೆ ಅಡ್ಡಲಾಗಿ ಬರುತ್ತಿದ್ದ ಎರಡು ಮೂರು ದ್ವಿಚಕ್ರ ವಾಹನಗಳ ಮೇಲೆ ಕಿರಾತಕರು ಕಾರು ಚಲಾಯಿಸಿಕೊಂಡು ಎಸ್ಕೇಪ್ ಆಗಿದ್ದಾರೆ. ಒಂದು ದ್ವಿಚಕ್ರ ವಾಹನವನ್ನು ಒಂದಷ್ಟು ದೂರಕ್ಕೆ ಎಳೆದುಕೊಂಡು ಹೋಗಲಾಗಿದೆ. ಈ ಭೀಕರ ದೃಶ್ಯ ಕಂಡ ಗ್ರಾಮಸ್ಥರು ಬಿಚ್ಚಿಬಿದ್ದಿದ್ದಾರೆ. ಆರೋಪಿಗಳ ಬಂಧನಕ್ಕೆ ತಮಿಳುನಾಡು ಹಾಗೂ ಕರ್ನಾಟಕ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಿಧಾನಸೌಧ ಮುಂಭಾಗ ಗೋಮೂತ್ರ ಸಿಂಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು
ಬೆಂಗಳೂರು, ಮೇ ೨೨: ಮೂರು ದಿನಗಳ ಕಾಲ ವಿಧಾನಸಭೆ ವಿಶೇಷ ಅಧಿವೇಶನ ಸೋಮವಾರ ಆರಂಭವಾಗಿದ್ದು, ಅಧಿವೇಶನ ಆರಂಭವಾಗುವುದಕ್ಕೂ ಮುನ್ನ ವಿಧಾನಸೌಧದ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಗೋಮೂತ್ರ ಸಿಂಪಡಿಸಿ ಪೂಜೆ ಸಲ್ಲಿಸಿದರು. ಪ್ರವೇಶ ದ್ವಾರ ಹಾಗೂ ಹೊರ ಆವರಣದಲ್ಲಿ ಗೋಮೂತ್ರ ಸಿಂಪಡಿಸುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಶುದ್ಧೀಕರಣ ನಡೆಸಿದರು. ಬಳಿಕ ವೈದಿಕರ ಮೂಲಕ ಪೂಜೆ ನೆರವೇರಿಸಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು, ಹಿಂದಿನ ಭ್ರಷ್ಟ ಬಿಜೆಪಿ ಸರ್ಕಾರ ರಾಜ್ಯದಿಂದ ತೊಲಗಿ ಶುದ್ಧ ಆಡಳಿತ ನಡೆಸಲು ಕಾಂಗ್ರೆಸ್ ಪಕ್ಷಕ್ಕೆ ಜನ ಸ್ಪಷ್ಟ ಬಹುಮತ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆಯ ಒಳಿತಿಗಾಗಿ ಶಕ್ತಿ ಕೇಂದ್ರ ವಿಧಾನಸೌಧದ ಮುಂಭಾಗದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು ಎಂದು ಹೇಳಿದರು.
ಸಂಸತ್ ಭವನ ಉದ್ಘಾಟನೆಗೆ ರಾಷ್ಟçಪತಿಗಳಿಗೇ ಆಮಂತ್ರಣವಿಲ್ಲ: ಖರ್ಗೆ ಕಿಡಿ
ನವದೆಹಲಿ, ಮೇ ೨೨: ನೂತನ ಸಂಸತ್ತ್ ಭವನ ಕಟ್ಟಡ ಉದ್ಘಾಟನೆಗೆ ರಾಷ್ಟçಪತಿಗಳಿಗೆ ಆಹ್ವಾನ ನೀಡದೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಗೌರವ ತೋರಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರದ ಆಡಳಿತದಲ್ಲಿ ಔಚಿತ್ಯವನ್ನು ಟೋಕನಿಸಂಗೆ ಇಳಿಸಲಾಗಿದೆ ಎಂದು ಕಿಡಿಕಾರಿದ ಅವರು, ಮೋದಿ ಸರ್ಕಾರವು ಕೇವಲ ಚುನಾವಣಾ ಕಾರಣಗಳಿಗಾಗಿ ದಲಿತ ಮತ್ತು ಬುಡಕಟ್ಟು ಸಮುದಾಯಗಳಿಂದ ಭಾರತದ ರಾಷ್ಟ್ರಪತಿಗಳ ಆಯ್ಕೆಯನ್ನು ಮಾಡಿದಂತೆ ತೋರುತ್ತಿದೆ. ಬಿಜೆಪಿ-ಆರ್‌ಎಸ್‌ಎಸ್ ಸರ್ಕಾರದ ಅಡಿಯಲ್ಲಿ ಭಾರತದ ರಾಷ್ಟçಪತಿಗಳ ಔಚಿತ್ಯವನ್ನು ಪದೇ ಪದೇ ಟೋಕನಿಸಂಗೆ ಇಳಿಸುವ ಮೂಲಕ ಅಗೌರವ ನೀಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ ಅವರು, 'ದೇಶದ ಪ್ರಥಮ ಪ್ರಜೆಯೂ ಆಗಿರುವ ರಾಷ್ಟçಪತಿಗಳು ಭಾರತದ ಅತ್ಯುನ್ನತ ಶಾಸಕಾಂಗದ ಅತ್ಯುನ್ನತ ಸಾಂವಿಧಾನಿಕ ಪ್ರಾಧಿಕಾರವಾಗಿರುವುದರಿಂದ, ಪ್ರಜಾಸತ್ತಾತ್ಮಕ ಮೌಲ್ಯಗಳು ಮತ್ತು ಸಾಂವಿಧಾನಿಕ ಔಚಿತ್ಯಕ್ಕೆ ಸರ್ಕಾರದ ಬದ್ಧತೆಯನ್ನು ಸಂಕೇತಿಸುವ ಹೊಸ ಕಟ್ಟಡವನ್ನು ಅವರು ಉದ್ಘಾಟಿಸಬೇಕು. ಮಾಜಿ ರಾಷ್ಟçಪತಿಯಾಗಿದ್ದ ರಾಮನಾಥ್ ಕೋವಿಂಡ್ ಅವರಿಗೂ ಹೊಸ ಸಂಸತ್ ಭವನದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಹ್ವಾನ ನೀಡಿರಲಿಲ್ಲ. ಈಗ ಭಾರತದ ರಾಷ್ಟçಪತಿಯಾಗಿರುವ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಹೊಸ ಸಂಸತ್ ಭವನದ ಉದ್ಘಾಟನೆಗೆ ಆಹ್ವಾನ ನೀಡಲಾಗಿಲ್ಲ ಎಂದು ಖರ್ಗೆ ಬರೆದಿದ್ದಾರೆ.
ವಧುವಿನ ಮೇಲೆ ಗುಂಡು ಹಾರಿಸಿದ ಪೊಲೀಸ್ ಪೇದೆ
ಪಾಟ್ನಾ, ಮೇ ೨೨: ಮದುವೆಗೂ ಕೆಲವೇ ಗಂಟೆಗಳ ಮುನ್ನ ೨೬ ವರ್ಷದ ಮಹಿಳೆಯೊಬ್ಬಳ ಮೇಲೆ ಮುಂಗೇರ್‌ನಲ್ಲಿ ಬಿಹಾರ ಪೊಲೀಸ್ ಪೇದೆಯೊಬ್ಬ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ರಾತ್ರಿ ಸಂತ್ರಸ್ತೆ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ನಯಾ ಬಜಾರ್‌ನಲ್ಲಿ ಮೇಕಪ್ ಮಾಡಿಸಿಕೊಳ್ಳಲು ಬ್ಯೂಟಿ ಪಾರ್ಲರ್‌ಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಆರೋಪಿ ಕಾನ್‌ಸ್ಟೆಬಲ್ ಅಮನ್ ಕುಮಾರ್ ಕೂಡ ಅಲ್ಲಿಗೆ ಬಂದು ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡು ಹಿಂದಿನಿAದ ಎಡ ಭುಜಕ್ಕೆ ತಗುಲಿ ಎದೆಯ ಬಲಭಾಗದಿಂದ ಹೊರಬಂದಿದೆ. ಆರೋಪಿ ಕೂಡ ತನಗೆ ತಾನೇ ಗುಂಡು ಹಾರಿಸಿಕೊಳ್ಳಲು ಯತ್ನಿಸಿ ವಿಫಲನಾಗಿದ್ದಾನೆ. ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದ ಮತ್ತೊಬ್ಬ ಮಹಿಳೆ ಆತನನ್ನು ಹಿಡಿಯಲು ಯತ್ನಿಸಿದರೂ ವಿಫಲರಾದರು. ಆರೋಪಿ ಆಕೆಯ ಮೇಲೆ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ಅಮನ್ ಕುಮಾರ್ ವಿರುದ್ಧ ನಾವು ಎಫ್‌ಐಆರ್ ದಾಖಲಿಸಿದ್ದೇವೆ. ಪ್ರಾಥಮಿಕ ತನಿಖೆಯಿಂದ ಅವರು ಸಂತ್ರಸ್ತೆಯ ಮಾಜಿ ಪ್ರೇಮಿಯಾಗಿದ್ದರು, ಆಕೆಯ ಮದುವೆಯಿಂದ ಕೋಪಗೊಂಡಿದ್ದರು ಎಂದು ಕೊತ್ವಾಲಿ ಪೊಲೀಸ್ ಠಾಣೆ ಮುಂಗೇರ್ ಎಸ್‌ಎಚ್‌ಒ ಧೀರೇಂದ್ರ ಕುಮಾರ್ ಪರ್ಡೆ ಹೇಳಿದ್ದಾರೆ.