ಸಿದ್ದಾಪುರ, ಮೇ ೨೨: ಬೆಳ್ಳಂಬೆಳಗ್ಗೆ ಕಾಡಾನೆಯೊಂದು ಜನವಸತಿ ಪ್ರದೇಶದಲ್ಲಿ ಸುತ್ತಾಡಿ ಸಾರ್ವಜನಿಕರನ್ನು ಭಯಭೀತರನ್ನಾಗಿಸಿದ ಘಟನೆ ನೆಲ್ಲಿಹುದಿಕೇರಿಯಲ್ಲಿ ನಡೆದಿದೆ. ನೆಲ್ಲಿಹುದಿಕೇರಿಯ ಎಂ.ಜಿ. ಕಾಲೋನಿಯಲ್ಲಿ ಬೆಳಿಗ್ಗೆ ೬ ಗಂಟೆ ಸುಮಾರಿಗೆ ಕಾಡಾನೆ ಮುಖ್ಯ ರಸ್ತೆಯ ಮೂಲಕ ಸಂಚರಿಸಿ ಸಮೀಪದ ಕಾಫಿ ತೋಟಕ್ಕೆ ತೆರಳಿದೆ.