ಮಳೆಯಿಂದ ಹಾನಿ: ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸಿ - ಡಿಸಿ, ಸಿಇಒಗಳಿಗೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು, ಮೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದ ನಡೆಸಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು. ರಾಜ್ಯದಲ್ಲಿ ಜೂನ್‌ನಲ್ಲಿ ಮುಂಗಾರು ಮಳೆ ಆರಂಭವಾಗಲಿದ್ದು, ಏಪ್ರಿಲ್ ತಿಂಗಳಿನಲ್ಲಿಯೇ ಮುಂಗಾರು ಪೂರ್ವ ಗಾಳಿ ಮಳೆಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಜಿಲ್ಲಾಧಿಕಾರಿಗಳ ಬಳಿಯೇ ಅನುದಾನ ಲಭ್ಯವಿದೆ. ಅಗತ್ಯವಿದ್ದರೆ, ಕೇಳಬೇಕು. ಪರಿಹಾರ ಕ್ರಮ ಕೈಗೊಳ್ಳಲು ತೊಂದರೆ ಇಲ್ಲ. ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸಬೇಕು. ಹಾವೇರಿ ಗೋಲಿಬಾರಿನಂತಹ ಘಟನೆ ಮರುಕಳಿಸಬಾರದು. ಮಳೆಯಿಂದ ಮರಗಳು, ವಿದ್ಯುತ್ ಕಂಬಗಳು ಧರೆಗುರಳಿ ಬಿದ್ದರೆ ಕೂಡಲೇ ಅವುಗಳನ್ನು ತೆರವುಗೊಳಿಸಬೇಕು. ಟ್ರಾನ್‌ಫಾರ್ಮರ್, ಸೇತುವೆ ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತ ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ತಿಳಿಸಿದರು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ. ಯಾವುದೇ ಕಾರಣಕ್ಕೂ ಕರ್ತವ್ಯ ಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೆ ಲೋಪ ಆಗಬಾರದು. ಒಂದು ವೇಳೆ ಲೋಪ ಎಸಗಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜನ ಸರ್ಕಾರದಿಂದ ಬದಲಾವಣೆ ಬಯಸಿದ್ದಾರೆ. ಸರ್ಕಾರಕ್ಕೆ ಹೊಸ ಇಮೇಜ್ ಕೊಡಲೇಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರ ಬಂದಿದೆ ಎಂಬ ಸಂದೇಶ ಹೋಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಭಾರತದಲ್ಲಿ ಯಾವುದಕ್ಕೂ ಕೊರತೆಯಿಲ್ಲ : ಸಿಡ್ನಿಯಲ್ಲಿ ಪ್ರಧಾನಿ ಮೋದಿ

ಸಿಡ್ನಿ, ಮೇ ೨೩: ಆರ್ಥಿಕತೆಯಲ್ಲಿ ಭಾರತ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಆಟೋಮೊಬೈಲ್ ಕ್ಷೇತ್ರದಲ್ಲಿ ಭಾರತ ಇಡೀ ಜಗತ್ತಿನಲ್ಲಿಯೇ ಮೂರನೇ ಸ್ಥಾನದಲ್ಲಿದ್ದು, ಇಡೀ ಜಗತ್ತು ಈಗ ಭಾರತದತ್ತ ತಿರುಗಿ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಿಡ್ನಿಯ ಖುಡೋಸ್ ಬ್ಯಾಂಕ್ ಅರೆನಾ ಸ್ಟೇಡಿಯಂನಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ಪ್ರದಾನಿ ಮೋದಿ, ಭಾರತದಲ್ಲಿ ಸಾಮರ್ಥ್ಯ, ಸಂಪನ್ಮೂಲಕ್ಕೆ ಕೊರತೆ ಇಲ್ಲ, ಭಾರತ ಟ್ಯಾಲೆಂಟ್ ಪ್ಯಾಕ್ಟರಿ ಆಗಿದೆ ಎಂದರು. ಜಾಗತಿಕ ಆರ್ಥಿಕತೆಯಲ್ಲಿ ಮುಂಚೂಣಿ ರಾಷ್ಟ್ರವೆಂದು ಐಎಂಎಫ್ ಪರಿಗಣಿಸಿದೆ. ಇಂದು ಹಲವಾರು ದೇಶಗಳಲ್ಲಿ ಬ್ಯಾಂಕಿAಗ್ ವ್ಯವಸ್ಥೆ ತೊಂದರೆಯಲ್ಲಿದೆ ಆದರೆ ಭಾರತದ ಬ್ಯಾಂಕ್‌ಗಳ ಬಲವನ್ನು ಎಲ್ಲೆಡೆ ಪ್ರಶಂಸಿಸಲಾಗುತ್ತಿದೆ: ೧೦೦ ವರ್ಷಗಳಿಗೊಮ್ಮೆ ಎದುರಾಗುವ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಭಾರತ ಕಳೆದ ವರ್ಷ ದಾಖಲೆಯ ರಫ್ತು ಮಾಡಿದೆ. ನಮ್ಮ ವಿದೇಶೀ ವಿನಿಮಯ ಹೊಸ ಎತ್ತರಕ್ಕೆ ಏರುತ್ತಿದೆ. ಜಾಗತಿಕ ಒಳಿತಿಗಾಗಿ ಭಾರತ ಹೇಗೆ ಕೆಲಸ ಮಾಡುತ್ತಿದೆ ಎಂಬುದಕ್ಕೆ ನಮ್ಮ ಡಿಜಿಟಲ್ ತಂತ್ರಜ್ಞಾನದ ಪಾಲಿದೆ. ಭಾರತದ ಫಿನ್‌ಟೆಕ್ ಕ್ರಾಂತಿಯ ಬಗ್ಗೆ ನಿಮಗೆ ಚೆನ್ನಾಗಿ ತಿಳಿದಿದೆ ಎಂದರು. ೨೦೧೪ ರಲ್ಲಿ ಇಲ್ಲಿಗೆ ಬಂದಾಗ ಮತ್ತೆ ಬರುವುದಾಗಿ ಭರವಸೆ ನೀಡಿದ್ದೆ. ಅದರಂತೆ ಈಗ ಮತ್ತೊಮ್ಮೆ ಸಿಡ್ನಿಯಲ್ಲಿದ್ದೇನೆ. ಈ ಹಿಂದೆ, ಭಾರತ ಮತ್ತು ಆಸ್ಟ್ರೇಲಿಯಾ ಸಂಬAಧವನ್ನು ಕಾಮನ್‌ವೆಲ್ತ್, ಕ್ರಿಕೆಟ್‌ಗಳಿಂದ ವ್ಯಾಖ್ಯಾನಿಸಲಾಗುತಿತ್ತು. ನಂತರ ‘ಪ್ರಜಾಪ್ರಭುತ್ವ, ಅನಿವಾಸಿ ಭಾರತೀಯರು ಮತ್ತು ದೋಸ್ತಿಯಿಂದ ವ್ಯಾಖ್ಯಾನಿಸಲಾಗಿದೆ ಎಂದರು. ಸಂಬAಧವು ಇಂಧನ, ಆರ್ಥಿಕತೆ ಮತ್ತು ಶಿಕ್ಷಣದ ಮೇಲೆ ಅವಲಂಭಿತವಾಗಿದ್ದರೂ ಉಭಯ ದೇಶಗಳ ಸಂಬAಧವು ಇದನ್ನು ಮೀರಿದೆ ಅದು ಪರಸ್ಪರ ನಂಬಿಕೆ ಮತ್ತು ಪರಸ್ಪರ ಗೌರವವಾಗಿದೆ ಎಂದು ತಿಳಿಸಿದರು.

ಸಾಮಾಜಿಕ ಸಾಮರಸ್ಯ ಕದಡದಂತೆ ಕಟ್ಟೆಚ್ಚರ ವಹಿಸಿ: ಸಿಎಂ ಖಡಕ್ ಸೂಚನೆ

ಬೆಂಗಳೂರು, ಮೇ ೨೩: ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದರು. ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದ ಮುಖ್ಯಮಂತ್ರಿ, ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯ ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ಸೂಚಿಸಿದರು. ಪೊಲೀಸ್ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೊಲೀಸ್ ಠಾಣೆಗೆ ಸಮಸ್ಯೆ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು, ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‌ಗಳ ಚಟುವಟಿಕೆಗಳು, ಡ್ರಗ್ ಮಾಫಿಯಾವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಸಿಎಂ ಕೇಜ್ರಿವಾಲ್, ಸಂಸದ ಸಂಜಯ್ ಸಿಂಗ್‌ಗೆ ಸಮನ್ಸ್ ಜಾರಿ!

ನವದೆಹಲಿ, ಮೇ ೨೩: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗೆ ಸಂಬAಧಿಸಿದAತೆ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್‌ನ ಅಹಮದಾಬಾದ್‌ನ ನ್ಯಾಯಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರಿಗೆ ಹೊಸದಾಗಿ ಸಮನ್ಸ್ ಜಾರಿ ಮಾಡಿದೆ. ಇದರಲ್ಲಿ ಇಬ್ಬರಿಗೂ ಜೂನ್ ೭ರಂದು ಹಾಜರಾಗುವಂತೆ ಸೂಚಿಸಲಾಗಿದೆ. ತಾ.೨೩ರಂದು ತಮ್ಮ ಮುಂದೆ ಹಾಜರಾಗುವಂತೆ ಇಬ್ಬರಿಗೂ ನೋಟಿಸ್ ನೀಡಲಾಗಿತ್ತು. ಆದರೆ ಅವರು ನ್ಯಾಯಾಲಯಕ್ಕೆ ಹಾಜರಾಗಿಲ್ಲದ ಕಾರಣ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್.ಜೆ.ಪಾಂಚಾಲ್ ಅವರು ಕೇಜ್ರಿವಾಲ್ ಮತ್ತು ಸಿಂಗ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ. ಎಎಪಿಯ ಗುಜರಾತ್ ಘಟಕದ ಕಾನೂನು ವಿಭಾಗದ ಮುಖ್ಯಸ್ಥ ಪ್ರಣಬ್ ಠಕ್ಕರ್ ಅವರು ಸೋಮವಾರ ಕೇಜ್ರಿವಾಲ್ ಮತ್ತು ಸಿಂಗ್ ಅವರಿಗೆ ನ್ಯಾಯಾಲಯ ನೀಡಿದ ಸಮನ್ಸ್ಗಳನ್ನು ಸ್ವೀಕರಿಸಿಲ್ಲ ಎಂದು ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾನಿಲಯದ ವಕೀಲರು ಮಂಗಳವಾರ ಈ ವಿಷಯದ ಬಗ್ಗೆ ಹೊಸ ನ್ಯಾಯಾಧೀಶ ಎಸ್‌ಜೆ ಪಾಂಚಾಲ್ ಅವರಿಗೆ ಮಾಹಿತಿ ನೀಡಿದರು ಮತ್ತು ಅವರ ಹಿಂದಿನವರು ಆರೋಪಿಗಳಿಗೆ ಮೇ ೨೩ರಂದು ನ್ಯಾಯಾಲಯಕ್ಕೆ ಹಾಜರಾಗಲು ಏಪ್ರಿಲ್ ೧೫ರಂದು ನೋಟಿಸ್ ನೀಡಿದ್ದರು ಎಂದು ಹೇಳಿದರು. ನ್ಯಾಯಾಲಯಕ್ಕೆ ಯಾರೂ ಹಾಜರಾಗದ ಕಾರಣ, ಅವರು ಸಮನ್ಸ್ ಸ್ವೀಕರಿಸಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಿಲ್ಲ. ಇದನ್ನು ನೋಡುವಂತೆ ನ್ಯಾಯಾಧೀಶರು ಸಿಬ್ಬಂದಿಗೆ ಸೂಚಿಸಿದರು. ನಂತರ ಕೇಜ್ರಿವಾಲ್ ಮತ್ತು ಸಿಂಗ್ ಅವರಿಗೆ ಸಮನ್ಸ್ ನೀಡುವಂತೆ ಸೂಚಿಸಿದರು.