ಮಡಿಕೇರಿ, ಮೇ ೨೧ : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಡಾ.ಮಂಥÀರ್ ಗೌಡ ಅವರು ಆಯ್ಕೆಯಾಗಿರುವುದು ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿರುವ ಹಿನ್ನೆಲೆ ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ ನಡೆಯಿತು.
ನಗರದ ಜಿಲ್ಲಾಸ್ಪತ್ರೆಯಲ್ಲಿ ಪಕ್ಷದ ನಗರಾಧ್ಯಕ್ಷ ಬಿ.ವೈ.ರಾಜೇಶ್ ಅವರ ಮಾರ್ಗದರ್ಶನದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಎಂ.ಜಿ ಅವರ ನೇತೃತ್ವದಲ್ಲಿ ರಕ್ತದಾನ ಮಾಡಿದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬಗ್ಗೆ ಹರ್ಷ ವ್ಯಕ್ತಪಡಿಸಿದರು.