ಮಡಿಕೇರಿ, ಮೇ ೨೩ : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೨೪ ರಂದು ಬೆಳಿಗ್ಗೆ ೧೧ ಗಂಟೆಯಿAದ ೧ ಗಂಟೆಯವರೆಗೆ ಕುಶಾಲನಗರದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ.
ಅಲ್ಲದೆ ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.೦೮೨೭೨-೨೯೫೨೯೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.