ಮಡಿಕೇರಿ, ಮೇ ೨೩: ಮೈಸೂರು ಜೆಎಸ್‌ಎಸ್ ಮಹಾ ವಿದ್ಯಾಪೀಠ, ಜೆಎಸ್‌ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ವತಿಯಿಂದ ೨೦೨೩-೨೪ನೇ ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅನು ದಾನಿತ ಕೋರ್ಸುಗಳಾದ ಆರ್ಕಿ ಟೆಕ್ಟರ್ ಅಸಿಸ್ಟೆಂಟ್‌ಷಿಪ್, ಕಮರ್ಷಿ ಯಲ್ ಪ್ರಾಕ್ಟೀಸ್, ಕಂಪ್ಯೂರ್ ಸೈನ್ಸ್ ಮತ್ತು ಇಂಜಿನಿಯರಿAಗ್.

ಅನುದಾನ ರಹಿತ ಕೋರ್ಸು ಗಳಾದ ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿAಗ್, ಕಂಪ್ಯೂಟರ್ ಅಪ್ಲಿಕೇಷನ್ಸ್, ಅಪಾರೇಲ್ ಡಿಸೈನ್ ಮತ್ತು ಪ್ಯಾಬ್ರಿಕೇಷನ್ ಟೆಕ್ನಾಲಜಿ.

ಕರ್ನಾಟಕ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಟ ಶೇ. ೩೫ ಅಂಕಗಳೊAದಿಗೆ ತೇರ್ಗಡೆ ಹಾಗೂ ಮೂಳೆ ಮತ್ತು ಕೀಲು ಅಂಗವಿಕಲತೆ ಶೇ. ೪೦ ಮತ್ತು ಮೇಲ್ಪಟ್ಟು, ಕಿವುಡು ಮತ್ತು ಮೂಗು ಅಂಗವಿಕಲತೆ ೬೦ ಡಿಬಿ ಮತ್ತು ಮೇಲ್ಪಟ್ಟು, ಭಾಗಶಃ ಮತ್ತು ಪೂರ್ಣ ಅಂಧತ್ವ ೬/೬೦ ಅಥವಾ ೨೦/೨೦೦ ಸ್ನೆಲೆನ್.

ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟç ಮಟ್ಟದ ವಿದ್ಯಾರ್ಥಿ ವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್‌ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವ ಕಾಶವನ್ನು ಕಲ್ಪಿಸಿಕೊಡಲಾಗುತ್ತದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಯರಿಗೆ ಪ್ರತ್ಯೇಕ ವಿದ್ಯಾರ್ಥಿ ನಿಲಯದ ಸೌಲಭ್ಯವಿದೆ.

ಪ್ರವೇಶಕ್ಕೆ ಅರ್ಜಿಯನ್ನು ಜೆಎಸ್‌ಎಸ್ ಮಹಾವಿದ್ಯಾಪೀಠ, ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್, ಜೆಎಸ್‌ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಚಯ, ಮೈಸೂರು-೫೭೦೦೦೬, ಕರ್ನಾಟಕ ಇಲ್ಲಿಂದ ಪಡೆದು (ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. ೧೦೦ ಹಾಗೂ ಎಸ್‌ಸಿ, ಎಸ್‌ಟಿ, ಸಿ-೧ ವರ್ಗದವರಿಗೆ ರೂ. ೫೦) ನಗದು ಅಥವಾ ಡಿಡಿ ಮೂಲಕ ಮೈಸೂರಿ ನಲ್ಲಿ ಸಂದಾಯವಾಗುವAತೆ ಕಳುಹಿಸಿ ಪಡೆಯಬಹುದು. ಅಥವಾ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿ ಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ತಿತಿತಿ. ರಿssಠಿಜಚಿ.oಡಿg ದೂ. ೯೮೪೪೬ ೪೪೯೩೭ ನ್ನು ಸಂಪರ್ಕಿಸಬಹುದು. ಭರ್ತಿ ಮಾಡಿದ ಅರ್ಜಿಯನ್ನು ಜೂನ್ ೧೭ ರೊಳಗೆ ಕಚೇರಿಗೆ ಸಲ್ಲಿಸಬೇಕು ಎಂದು ಜೆಎಸ್‌ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರು ತಿಳಿಸಿದ್ದಾರೆ.