ಮಡಿಕೇರಿ: ನೂತನ ಸರ್ಕಾರದ ಮುಖ್ಯಮಂತ್ರಿ ಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ೮ ಸಚಿವರುಗಳ ಪದಗ್ರಹಣ ಹಿನ್ನೆಲೆ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯೋತ್ಸವ ನಡೆಯಿತು.
ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ, ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.
ಈ ಸಂದರ್ಭ ಮಾತನಾಡಿದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಜಿಲ್ಲಾಧ್ಯಕ್ಷ ಹಾಗೂ ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ, ಇದು ಕೇವಲ ಕಾಂಗ್ರೆಸ್ ಪಕ್ಷದ ಗೆಲುವಲ್ಲ. ಇಡೀ ಕನ್ನಡಿಗರು ಸಂಭ್ರಮಿಸುವ ದಿನವಾಗಿದೆ ಎಂದರು.
ಈ ಸಂದರ್ಭ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಡಿಸಿಸಿ ಸದಸ್ಯರಾದ ಪುಷ್ಪ ಪೂಣಚ್ಚ, ಕೆ.ಯು.ಅಬ್ದುಲ್ ರಜಾಕ್, ಪ್ರಕಾಶ್ ಆಚಾರ್ಯ, ಚುಮ್ಮಿ ದೇವಯ್ಯ, ಕಲೀಲ್ ಬಾಷ, ಜುಲೇಕಾಬಿ, ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ಬಿ.ಎಂ. ಪ್ರಥ್ಯು, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್.ಪಿ. ಚಂದ್ರಶೇಖರ್, ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ. ಪೀಟರ್, ಎಸ್.ಸಿ. ಘಟಕದ ನಗರಾಧ್ಯಕ್ಷ ಮುದ್ದುರಾಜ್, ಮಹಿಳಾ ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಪ್ರಮುಖರಾದ ಪ್ರಭುರೈ, ಸದಾ ಮುದ್ದಪ್ಪ, ಯಾಕುಬ್, ಮುತ್ತು ಬೇಗಂ, ಬಿ. ಗಣೇಶ್, ಗೀತಾ ಸೇರಿದಂತೆ ನಗರ ಕಾಂಗ್ರೆಸ್ ಪದಾಧಿಕಾರಿಗಳು ಹಾಜರಿದ್ದರು.ತೊರೆನೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ತೊರೆನೂರು ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ವಿತರಿಸಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ಎಪಿಸಿಎಂಎಸ್ಸಿ ಮಾಜಿ ಉಪಾಧ್ಯಕ್ಷ ಟಿ.ಬಿ. ಜಗದೀಶ್ ನೇತೃತ್ವದಲ್ಲಿ ಕಾರ್ಯಕರ್ತರು ಗ್ರಾಮದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿ ಸಿದ್ದರಾಮಯ್ಯ, ಡಿಕೆಸಿ ಹಾಗೂ ಮುಖಂಡ ಪರವಾಗಿ ಘೋಷಣೆಗಳನ್ನು ಕೂಗಿದರು. ನೆರೆದಿದ್ದವರಿಗೆ ಸಿಹಿ ವಿತರಣೆ ಮಾಡಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಸಂತ, ಗ್ರಾ.ಪಂ. ಸದಸ್ಯರಾದ ನಿಂಗಜಮ್ಮ, ಸಾವಿತ್ರಿ, ಮುಖಂಡರಾದ ಟಿ.ಎಂ. ಶಿವಪ್ಪ, ಟಿ.ವಿ. ಶಂಕರಮೂರ್ತಿ, ಟಿ.ಎಲ್. ಚಂದ್ರಶೇಖರ್, ಕೃಷ್ಣಗೌಡ, ಕಿರಣ್, ವಿನೋದ್, ಟಿ.ಎಂ. ಮೋಹನ್, ಟಿ.ಎಸ್. ತೋಟೇಶ್ ಇದ್ದರು.ಶನಿವಾರಸಂತೆ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ನೂತನ ಸರ್ಕಾರ ರಚನೆಯಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಶನಿವಾರಸಂತೆ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಶನಿವಾರ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ನಗರ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಮುಖಂಡರುಗಳಾದ ಸಿ.ಜೆ. ಗಿರೀಶ್, ಡಿ.ಪಿ. ಬೋಜಪ್ಪ, ಎಸ್.ಸಿ. ಶರತ್ ಶೇಖರ್, ಚಂದ್ರಕಾAತ್, ಎನ್.ಕೆ. ಅಪ್ಪಸ್ವಾಮಿ, ಸಯ್ಯದ್ ಹಾಗೂ ಶಿವಾನಂದ್, ಗ್ರಾಮ ಪಂಚಾಯಿತಿ ಸದಸ್ಯರಾದ ಆದಿತ್ಯಗೌಡ, ಗೀತಾ ಹರೀಶ್, ಸರೋಜಾ ಶೇಖರ್ ಪ್ರಮುಖರಾದ ಆದಿಲ್ ಪಾಶ, ಅಬ್ಬಾಸ್, ಸೌಭಾಗ್ಯಲಕ್ಷ್ಮೀ, ಗುಣವತಿ, ಬಿ.ಕೆ. ಚಂದ್ರು, ಟಿಬೆಟ್ ಸಾಹೇಬ್, ರಾಜಪ್ಪ ಇತರರು ಹಾಜರಿದ್ದರು.ಕೊಡ್ಲಿಪೇಟೆ: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಕೊಡ್ಲಿಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಮತ್ತು ಕಾರ್ಯಕರ್ತರುಗಳು ಪಟ್ಟಣದ ಬಸ್ ನಿಲ್ದಾಣದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭ ಮಾತನಾಡಿದ ವಲಯ ಕಾಂಗ್ರೆಸ್ ಅಧ್ಯಕ್ಷ ಔರಂಗಜೇಬ್, ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಸನ್ನ, ಶೋಭಿತ್ ಗೌಡ, ವಹಾಬ್, ಹನೀಫ್, ಬ್ಯಾಡಗೊಟ್ಟ ವಲಯ ಕಾಂಗ್ರೆಸ್ ಅದ್ಯಕ್ಷ ಸುಲೈಮಾನ್, ವಿ.ಎಸ್.ಎಸ್.ಎನ್. ನಿರ್ದೇಶಕ ತೇಜ್ ಕುಮಾರ್, ಪಕ್ಷದ ಮುಖಂಡರುಗಳಾಗ ಸಾಬ್ಜಾನ್ ನೀರುಗುಂದ , ಕೆ.ಸಿ.ಪಿ. ಮಂಜು, ರಪೀಕ್, ಪ್ರದೀಪ್ ಅರೆಹಳ್ಳಿ, ನಿಸಾರ್, ಸಿದ್ದೀಕ್ ಕಿರಿಕೊಡ್ಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.ಸುಂಟಿಕೊಪ್ಪ: ಕರ್ನಾಟಕ ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ೨ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಸಂದರ್ಭ ಸುಂಟಿಕೊಪ್ಪ ಕನ್ನಡ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಎಂ. ಲತೀಫ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ, ಮಾಜಿ ಅಧ್ಯಕ್ಷ ಪಿ.ಎಫ್. ಸಭಾಸ್ಟಿನ್, ಕಾರ್ಯಕರ್ತರಾದ ಹಮೀದ್, ರವಿ ಇತರರು ಹಾಜರಿದ್ದರು.