ಮಡಿಕೇರಿ, ಮೇ ೨೩ : ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಕರ್ನಾಟಕ ರಾಜ್ಯದ ನೂತನ ಸರ್ಕಾರದ ಗಮನ ಸೆಳೆಯಲು ತಾ. ೨೫ ರಂದು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿರುವುದಾಗಿ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗುರುವಾರ ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಿ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ನೂತನ ಸರ್ಕಾರಕ್ಕೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.