ಮಡಿಕೇರಿ, ಮೇ ೨೪ : ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮಹಿಳೆಯರ ಫುಟ್ಬಾಲ್ ಪಂದ್ಯಾಟವು ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ಸಂತ ಅನ್ನಮ್ಮ ಪದವಿ ಕಾಲೇಜಿನ ಮೈದಾನದಲ್ಲಿ ನಡೆಯಿತು.
ಸಂತ ಅನ್ನಮ್ಮ ವಿದ್ಯಾ ಸಂಸ್ಥೆಯ ಮುಖ್ಯಸ್ಥರಾದ ರೆವರೆಂಡ್ ಫಾದರ್ ಐಸಾಕ್ ರತ್ಕಾಕರ್ ಅವರು ಪಂದ್ಯಾಟ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಂತ ಅನ್ನಮ್ಮ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಭಾಗವಹಿಸಿದ್ದರು.
ಮಂಗಳೂರು ವಿಶ್ವವಿದ್ಯಾನಿಲ ಯದ ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ್ ಡಿಸೋಜ ಅವರು ವೀಕ್ಷಕರಾಗಿ ಆಗಮಿಸಿದ್ದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಸಿ. ದಯಾನಂದ ಅವರು ಅಧ್ಯಕ್ಷತೆ ವಹಿಸಿದ್ದರು.
ಪಂದ್ಯಾಟದಲ್ಲಿ ವಿವಿಧ ಕಾಲೇಜುಗಳ ೮ ತಂಡಗಳು ಭಾಗವಹಿಸಿದ್ದು, ಸೇಕ್ರೆಡ್ ಹಾರ್ಟ್ ಪದವಿ ಕಾಲೇಜು, ಮಧ್ಯಂತರ ಪ್ರಥಮ ಬಹುಮಾನವನ್ನು ಪಡೆದರೆ, ಮೂಡಬಿದ್ರೆ ಆಳ್ವಾಸ್ ಪದವಿ ಕಾಲೇಜು ದ್ವಿತೀಯ ಸ್ಥಾನ ಮತ್ತು ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೃತೀಯ ಬಹುಮಾನ ಪಡೆದುಕೊಂಡರು.
ಮAಗಳೂರು ವಿಶ್ವವಿದ್ಯಾನಿಲಯದ ಫುಟ್ಬಾಲ್ ಪಂದ್ಯಾಟದ ಸಂಚಾಲಕರು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಎಂ. ರಾಖಿ ಪೂವಣ್ಣ ಸ್ವಾಗತಿಸಿದರು. ನಿರ್ವಹಣಾಶಾಸ್ತç ವಿಭಾಗದ ಮುಖ್ಯಸ್ಥ ಆರ್. ಮಂಜುನಾಥ ವಂದಿಸಿದರು.
ಪಂದ್ಯಾಟದ ಸಮಾರೋಪ ಸಮಾರಂಭವು ಬುಧವಾರ ನಡೆಯಿತು. ವೀರಾಜಪೇಟೆ ಕಾಫಿ ಬೆಳೆಗಾರ ಬಿ.ಜೆ. ಬೋಪಣ್ಣ ಮತ್ತು ವೀರಾಜಪೇಟೆ ಆಕ್ಸ್ಫರ್ಡ್ ಫುಟ್ಬಾಲ್ ಕ್ಲಬ್ನ ಅಧ್ಯಕ್ಷ ರ್ಯಾನ್ಸನ್ ಚಾಕೋ ಭಾಗವಹಿಸಿದ್ದರು.
ವಾಣಿಜ್ಯಶಾಸ್ತç ವಿಭಾಗದ ಮುಖ್ಯಸ್ಥ ಎಚ್.ಎಸ್. ವೇಣುಗೋಪಾಲ್ ಸ್ವಾಗತಿಸಿದರು. ವಿಜೇತ ತಂಡಗಳಿಗೆ ಮುಖ್ಯ ಅತಿಥಿಗಳು ಟ್ರೋಫಿ ಮತ್ತು ಪ್ರಶಸ್ತಿ ಪತ್ರವನ್ನು ನೀಡಿದರು. ಪಂದ್ಯಾಟದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬೋಧಕ, ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.