ಸುಂಟಿಕೊಪ್ಪ, ಮೇ ೨೪: ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿದ್ದು ಜನರು ಆತಂಕಕ್ಕೀಡಾಗಿದ್ದಾರೆ.
ಡೆಂಗ್ಯೂ ಜ್ವರ ಭಾದಿಸಿದ ಮಂದಿಯಲ್ಲಿ ಬಿಳಿ ರಕ್ತ ಕಣಗಳ ಕೊರತೆ ಕಂಡು ಬರುತ್ತಿದೆ. ಇಂತÀವರು ಕುಶಾಲನಗರದ ತಾಲೂಕು ಸಾರ್ವಜನಿಕ ಸಮುದಾಯ ಆರೋಗ್ಯ ಕೇಂದ್ರ, ಖಾಸಗಿ ಆಸ್ಪತ್ರೆಗಳು ಮತ್ತು ಮಡಿಕೇರಿಯ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗುತ್ತಿರುವುದು ಕಂಡು ಬರುತ್ತಿದೆ.
ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಸೊಳ್ಳೆಗಳನ್ನು ನಿಯಂತ್ರಿಸಲು ಜೌಷಧಿ ಸಿಂಪಡಿಸುವ ಕಾರ್ಯಕ್ಕೂ ಮುಂದಾಗಿದೆ. ಆದರೂ ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಬಾರದೆ ಸಾರ್ವಜನಿಕರಲ್ಲಿ ಭೀತಿಯ ವಾತಾವರಣ ಮೂಡಿಸಿದೆ. ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ೭ ಮಂದಿ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾಹಿತಿ ನೀಡಿದ್ದಾರೆ.