ಕುಶಾಲನಗರ, ಮೇ ೨೪: ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನಪರ ಕಾಮಗಾರಿಗಳು ನಡೆಯಲಿದೆ ಎಂದು ನೂತನ ಶಾಸಕರಾದ ಡಾ. ಮಂಥÀರ್ ಗೌಡ ತಿಳಿಸಿದ್ದಾರೆ.
ಅವರು ಕುಶಾಲನಗರ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರದ ಮಟ್ಟದಲ್ಲಿ ಕೆಲವು ಪ್ರಮುಖ ಕಾಮಗಾರಿಗಳಿಗೆ ತಡೆ ನೀಡಿರುವ ಬಗ್ಗೆ ಮಾಹಿತಿ ಲಭಿಸಿದ್ದು ರಸ್ತೆ, ಮೂಲಭೂತ ಸೌಕರ್ಯ ಮತ್ತಿತರ ಜನರಿಗೆ ಅನುಕೂಲ ವಾಗಲಿರುವ ಕಾರ್ಯಕ್ರಮಗಳು ಮುಂದುವರಿಯುತ್ತವೆ ಎಂದು ಅವರು ಸ್ಪಷ್ಟಪಡಿಸಿದರು.
ಕುಶಾಲನಗರದಲ್ಲಿ ತಾಲೂಕು ಮಟ್ಟದ ಕಚೇರಿಗಳು ಒಂದೇ ಸೂರಿನಡಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ತಾಲೂಕು ಭವನ ನಿರ್ಮಾಣಕ್ಕೆ ಸರ್ಕಾರದಿಂದ ಅಗತ್ಯ ಅನುದಾನ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಂಥರ್ ಗೌಡ ತಿಳಿಸಿದರು. ಕುಶಾಲನಗರ ಗುಂಡೂರಾವ್ ಬಡಾವಣೆಯಲ್ಲಿ ಭವನಕ್ಕೆ ಜಾಗ ಮೀಸಲಿರಿಸಲಾಗಿದ್ದು ಈ ಬಗ್ಗೆ ಸಂಬAಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.
ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಮಟ್ಟದ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು, ಪುರಸಭೆ ವ್ಯಾಪ್ತಿಗೆ ವಿಲೀನಗೊಂಡ ಮುಳ್ಳುಸೋಗೆ ಗ್ರಾಮದ ಮೂಲಸೌಕರ್ಯದ ಬಗ್ಗೆ ಗಮನಹರಿಸಲಾಗುವುದು ಎಂದು ಅವರು ತಿಳಿಸಿದರು.
ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಕೆರೆಗಳ ಒತ್ತುವರಿ ಬಗ್ಗೆ ಪ್ರತಿಕ್ರಿಯಿಸಿದ ಅವರು ಈ ಬಗ್ಗೆ ಸರ್ವೆ ಕಾರ್ಯಕ್ಕೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಕುಶಾಲನಗರ ಪಟ್ಟಣದ ತಗ್ಗು ಪ್ರದೇಶಗಳ ಬಡಾವಣೆಗಳು ಮುಳುಗಡೆ ಯಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ಮಂಥರ್ ಗೌಡ ಅವರು ಉನ್ನತ ಮಟ್ಟದ ತಂತ್ರಜ್ಞಾನ ಅಳವಡಿಸಿ ಪ್ರವಾಹ ಮುಕ್ತವನ್ನಾಗಿಸಲು ಯೋಜನೆ ರೂಪಿಸಲಾಗುವುದು.
ಕ್ಷೇತ್ರದ ವ್ಯಾಪ್ತಿಯಲ್ಲಿ ಆಡಳಿತಕ್ಕೆ ಬದಲಾವಣೆ ತರುವ ಬಗ್ಗೆ ಚಿಂತನೆ ಹರಿಸಲಾಗಿದ್ದು ಜನ ಮೆಚ್ಚುವ ರೀತಿಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.
ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ ತಲುಪಿಸುವ ಜವಾಬ್ದಾರಿ ತಮ್ಮದಾಗಿದೆ. ಪ್ರತಿ ಮನೆ ಮನೆಗೆ ಅಧಿಕಾರಿಗಳು ಮತ್ತು ಕಾರ್ಯಕರ್ತರ ಮೂಲಕ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವುದು ತಮ್ಮ ಕೆಲಸ ಎಂದು ಹೇಳಿದರು.
ಈ ಸಂದರ್ಭ ವಿಧಾನಸಭೆಯ ಪ್ರಥಮ ಪ್ರವೇಶ ಸಂದರ್ಭದಲ್ಲಿ ತನ್ನ ಅನುಭವಗಳನ್ನು ಹಂಚಿಕೊAಡ ಮಂಥರ್ ಗೌಡ ಘಟಾನುಘಟಿಗಳ ನಡುವೆ ಕೂರುವ ಅವಕಾಶವನ್ನು ಕ್ಷೇತ್ರದ ಜನತೆ ಕಲ್ಪಿಸಿರುವುದು ನಿಜಕ್ಕೂ ತುಂಬಾ ಸಂತಸ ತಂದಿದೆ ಎಂದು ಹೇಳಿದರು. ಕುಶಾಲನಗರ ಕಾಂಗ್ರೆಸ್ ನಗರಾಧ್ಯಕ್ಷರಾದ ಪ್ರಮೋದ್ ಮುತ್ತಪ್ಪ, ಜೋಸೆಫ್ ವಿಕ್ಟರ್ ಸೋನ್ಸ್ ಮತ್ತಿತರರು ಇದ್ದರು.