ಮಡಿಕೇರಿ, ಮೇ ೨೪ : ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ಆಯ್ಕೆಯಾಗಿರುವ ಇಬ್ಬರು ಶಾಸಕರು ಬಡವರಿಗೆ ನಿವೇಶನÀ ನೀಡಲು ಕ್ರಮ ಕೈಗೊಳ್ಳಬೇಕೆಂದು ಮಡಿಕೇರಿ ನಗರಸಭಾ ಸದಸ್ಯ ಎಂ.ಕೆ.ಮನ್ಸೂರ್ ಆಲಿ ಒತ್ತಾಯಿಸಿದ್ದಾರೆ.

ಕಳೆದ ೩೦ ವರ್ಷಗಳಿಂದ ಜಿಲ್ಲೆಯಾದ್ಯಂತ ನಿವೇಶನ ರಹಿತರಿಗೆ ನಿವೇಶನ ನೀಡುವ ಮತ್ತು ಸ್ವಂತ ಸೂರು ಕಲ್ಪಿಸುವ ಯೋಜನೆಯನ್ನು ಪರಿಣಾಮಕಾರಿ ಯಾಗಿ ಅನುಷ್ಠಾನಗೊಳಿಸಿಲ್ಲ. ಬೃಹತ್ ಪ್ರಮಾಣದ ಸರ್ಕಾರಿ ಭೂಮಿಯನ್ನು ಗುರುತಿಸಿ ನಿವೇಶನ ಹಂಚಿಕೆ ಮಾಡುವ ಕಾರ್ಯಕ್ಕೆ ಇಬ್ಬರು ನೂತನ ಶಾಸಕರು ನಾಂದಿ ಹಾಡಬೇಕೆಂದು ಆಗ್ರಹಿಸಿದ್ದಾರೆ