ಮಡಿಕೇರಿ, ಮೇ ೨೪: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡುವಂತೆ ವೀರಾಜಪೇಟೆ ಕಾಂಗ್ರೆಸ್ ಪ್ರಮುಖರುಗಳು ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಮಾತನಾಡಿದ ವೀರಾಜಪೇಟೆ ಪಟ್ಟಣ ಪಂಚಾಯಿತಿ ಸದಸ್ಯ ರಾಜೇಶ್ ಪದ್ಮನಾಭ ಹಾಗೂ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಪಿ.ಎ. ಅನೀಫ್ ಈ ಕುರಿತು ಆಗ್ರಹಿಸಿದರು. ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಂ.ಎA. ಇಸ್ಮಾಯಿಲ್, ಮುಖಂಡರುಗಳಾದ ಶಬರೀಶ್, ಅಬ್ದುಲ್ ರೆಹಮಾನ್ ಇದ್ದರು.