ಮಡಿಕೇರಿ, ಮೇ ೨೫ : ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು ಮತ್ತು ಕೊಡವರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಧರಣಿ ಸತ್ಯಾಗ್ರಹ ನಡೆಸಿದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ, ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ನೂತನ ಸರ್ಕಾರಕ್ಕೆ ಸಲ್ಲಿಸಿದೆ.

ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದ ಪ್ರಮುಖರು ಕೊಡವ ಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಪರ ಘೋಷಣೆಗಳನ್ನು ಕೂಗಿದರು.

ಕೊಡವರ ನ್ಯಾಯ ಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ ೩೩ ವರ್ಷಗಳಿಂದ ಸಿಎನ್‌ಸಿ ಸಂಘಟನೆ ಶಾಂತಿಯುತ ಹೋರಾಟಗಳನ್ನು ನಡೆಸಿಕೊಂಡು ಬಂದಿದೆ. ಆದರೆ ನಮ್ಮ ನೋವಿಗೆ ಸೂಕ್ತ ಸ್ಪಂದನೆ ನೀಡುವ ಕಾರ್ಯವನ್ನು ಯಾವ ಆಡಳಿತ ವ್ಯವಸ್ಥೆಯೂ ಮಾಡಿಲ್ಲ. ಇದೀಗ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ನೂತನ ಸರ್ಕಾರ ಹಾಗೂ ಜಿಲ್ಲೆಯ ಇಬ್ಬರು ಶಾಸಕರು ಬೇಡಿಕೆಗಳಿಗೆ ಸ್ಪಂದಿಸಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ನಾಚಪ್ಪ ತಿಳಿಸಿದರು. ಒಟ್ಟು ೯ ಬೇಡಿಕೆಗಳ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇ ಗೌಡರ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.

ಜನಸಂಖ್ಯಾ ಬದಲಾವಣೆಯನ್ನು ತಡೆಗಟ್ಟಲು, ನಮ್ಮ ಅನುವಂಶಿಕ ಪೂರ್ವಾರ್ಜಿತ ಸಮುದಾಯಿಕ ಆಸ್ತಿಗಳನ್ನು ಮತ್ತು ನಮ್ಮ ಅಧ್ಯಾತ್ಮಿಕ- ಪರಮಾರ್ಥಿಕ ಸ್ಥಾನಗಳಾದ ಮಂದ್, ದೇವಕಾಡ್, ತೂಟ್‌ಂಗಳ, ಕ್ಯಾಕೋಳ, ದೇವಕಾಡ್ ಇತ್ಯಾದಿ ಭೂಮಿಯಲ್ಲಿ ನಮ್ಮ ಐತಿಹಾಸಿಕ ನಿರಂತರತೆಗೆ ಶಾಸನಬದ್ಧ ಅನುಮೋದನೆಗಾಗಿ ಸಿಎನ್‌ಸಿ/ಕೊಡವ ನ್ಯಾಷನಲ್ ಕೌನ್ಸಿಲ್ ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ ಮತ್ತು ಮಿಜೋರಾಂನ ಸಾಲುಗಳ ಮಾದರಿಯಲ್ಲಿ ಇನ್ನರ್‌ಲೈನ್ ಪರ್‌ಮಿಟ್ (ಐಎಲ್‌ಪಿ) ಮತ್ತು "ಸೆಂಟ್ರಲ್ ವಿಸ್ತಾ" ಹೊಸ ಸಂಸತ್ತಿನಲ್ಲಿ ಕೊಡವ ಪ್ರಾತಿನಿಧ್ಯವನ್ನು ನೀಡಬೇಕು ಎಂದು ನಾಚಪ್ಪ ಒತ್ತಾಯಿಸಿದರು.

ಸಿಎನ್‌ಸಿ ಪ್ರಮುಖರಾದ ಪಟ್ಟಮಾಡ ಲಲಿತ ಗಣಪತಿ, ಕಲಿಯಂಡ ಮೀನಾ ಪ್ರಕಾಶ್, ಡಾ.ನೆರವಂಡ ವೀಣಾ ಪೂಣಚ್ಚ, ಬೊಪ್ಪಂಡ ಬೊಳ್ಳಮ್ಮ, ಕೂಪದಿರ ಪುಷ್ಪ ಮುತ್ತಣ್ಣ, ಅಪ್ಪಚ್ಚಿರ ರೀನ ನಾಣಯ್ಯ, ಕಲಿಯಂಡ ಪ್ರಕಾಶ್, ಅಪ್ಪಚ್ಚಿರ ರಮ್ಮಿ ನಾಣಯ್ಯ, ಪಟ್ಟಮಾಡ ಕುಶ, ಬಾಚರಣಿಯಂಡ ಚಿಪ್ಪಣ್ಣ, ಅಜ್ಜಿಕುಟ್ಟಿರ ಲೋಕೇಶ್, ಚಂಬAಡ ಜನತ್, ಬೊಟ್ಟಂಗಡ ಗಿರೀಶ್, ಬೇಪಡಿಯಂಡ ಬಿದ್ದಪ್ಪ, ಜಮ್ಮಡ ಮೋಹನ್, ಅಪ್ಪೆಂಗಡ ಮಾಲೆ, ಕಾಂಡೆರ ಸುರೇಶ್, ಕಿರಿಯಮಾಡ ಶರೀನ್, ಬೇಪಡಿಯಂಡ ದಿನು, ಅರೆಯಡ ಗಿರೀಶ್, ಅಪ್ಪರಂಡ ಪ್ರಸಾದ್, ಪುಟ್ಟಿಚಂಡ ದೇವಯ್ಯ, ಮಣವಟ್ಟಿರ ಚಿಣ್ಣಪ್ಪ, ಮಣವಟ್ಟಿರ ಜಗದೀಶ್, ಮಣವಟ್ಟಿರ ಶಿವಣಿ, ನಂದಿನೆರವAಡ ವಿಜು, ನಂದಿನೆರವAಡ ಅಪ್ಪಯ್ಯ, ನಂದಿನೆರವAಡ ಅಯ್ಯಣ್ಣ, ಮಣವಟ್ಟಿರ ಜೀವಿತ್ ಬೊಳ್ಯಪ್ಪ, ಮಣವಟ್ಟಿರ ಉತ್ತಮ್ ಅಯ್ಯಪ್ಪ, ಅಜ್ಜಿನಿಕಂಡ ಸನ್ನಿ ಮಾಚಯ್ಯ ಧರಣಿಯಲ್ಲಿ ಪಾಲ್ಗೊಂಡಿದ್ದರು.