ಸಿದ್ದಾಪುರ, ಮೇ ೨೫: ಸಿದ್ದಾಪುರ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಾಗೂ ಮುಂದಿನ ವಾರದಿಂದ ಮುಂಗಾರು ಮಳೆ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಕಂದಾಯ ಇಲಾಖೆಯ ಮುಖಾಂತರ ಅಮ್ಮತ್ತಿ ಹೋಬಳಿ ವ್ಯಾಪ್ತಿಗೆ ಒಳಪಡುವ ಕೊಂಡAಗೇರಿ ಕರಡಿಗೋಡು ಗುಹ್ಯ ಗ್ರಾಮದ ನದಿ ತೀರದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಮುಂಜಾಗ್ರತಾ ಕ್ರಮವಾಗಿ ನೋಟೀಸ್ ಜಾರಿ ಮಾಡಲು ವೀರಾಜಪೇಟೆ ತಾಲೂಕು ಕಂದಾಯ ಇಲಾಖೆ ಅಧಿಕಾರಿಗಳು ಸಿದ್ಧತೆಯನ್ನು ಕೈಗೊಂಡಿದ್ದಾರೆ ಎನ್ನಲಾಗಿದೆ ತಾ. ೨೬ ರಿಂದ (ಇಂದಿನಿAದ) ನದಿ ತೀರದ ನಿವಾಸಿಗಳ ಮನೆ ಮನೆಗಳಿಗೆ ತೆರಳಿ ನೋಟಿಸ್ ಜಾರಿ ಮಾಡುವ ಸಿದ್ಧತೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.