(ವಿಶೇಷ ವರದಿ, ಹೆಚ್.ಕೆ. ಜಗದೀಶ್)

ಗೋಣಿಕೊಪ್ಪಲು, ಮೇ ೨೬: ಕೊಡಗು ಜಿಲ್ಲೆ ಕ್ರೀಡೆಯಲ್ಲಿ ರಾಷ್ಟç ಹಾಗೂ ಅಂರ‍್ರಾಷ್ಟಿçÃಯ ಮಟ್ಟದಲ್ಲಿ ವಿಶೇಷವಾಗಿ ಕ್ರೀಡೆಯಲ್ಲಿ ತನ್ನದೆ ಆದ ಛಾಪನ್ನು ಮೂಡಿಸಿದೆ. ರಾಜ್ಯದಲ್ಲಿಯೇ ಕೊಡಗು ಜಿಲ್ಲೆ ಅತಿ ಹೆಚ್ಚಿನ ಕ್ರೀಡಾಪಟುಗಳನ್ನು ಹೊಂದಿರುವ ಕ್ರೀಡಾ ಜಿಲ್ಲೆಯಾಗಿದೆ. ರಾಜ್ಯ ಹಾಗೂ ರಾಷ್ಟçಮಟ್ಟಕ್ಕೆ ಮತ್ತು ಒಲಂಪಿಕ್‌ವರೆಗೂ ಆಟಗಾರರನ್ನು ಕೊಡಗು ಜಿಲ್ಲೆ ನೀಡಿದೆ. ಕೊಡಗು ಜಿಲ್ಲೆ ಕ್ರೀಡಾಪಟುಗಳನ್ನು ತಯಾರಿಸುವ ಕಾರ್ಖಾನೆ ಎಂದೇ ಹೇಳಬಹುದು.

ಪ್ರತಿಷ್ಠಿತ ಅರ್ಜುನ ಪ್ರಶಸ್ತಿಯು ಕೊಡಗಿನ ಹೆಚ್ಚಿನ ಕ್ರೀಡಾ ಪಟುಗಳಿಗೆ ಲಭಿಸಿದೆ. ಆ ಮಟ್ಟದಲ್ಲಿ ಕ್ರೀಡೆಗೆ ಪ್ರೋತ್ಸಾಹ ದೊರೆಯುತ್ತಿದೆ. ಜಿಲ್ಲಾ ಪಂಚಾಯತ್ ಅಧೀನದಲ್ಲಿ ಪೊನ್ನಂಪೇಟೆ ಕ್ರೀಡಾ ಶಾಲೆಯು ನಡೆಯುತ್ತಿದೆ. ಇದಕ್ಕೆ ಜಿಲ್ಲೆಯಲ್ಲಿರುವ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ತರಬೇತಿಗಳನ್ನು ನೀಡುವ ಮೂಲಕ ಉತ್ತಮ ಕ್ರೀಡಾಪಟುಗಳಾಗಿ ಹೊರ ಹೊಮ್ಮಿಸುತ್ತಿದೆ.

ರಾಜ್ಯ ಮಟ್ಟದ ಕ್ರೀಡಾ ಶಾಲೆಯು ಕೂಡಿಗೆಯಲ್ಲಿ ನಡೆಯುತ್ತಿದೆ. ಇಲ್ಲಿಯ ಕ್ರೀಡಾಪಟುಗಳನ್ನು ರಾಜ್ಯ ಮಟ್ಟದಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಮಡಿಕೇರಿಯ ಸಾಯಿ ಕ್ರೀಡಾ ವಸತಿ ಶಾಲೆಗೆ ರಾಷ್ಟç ಮಟ್ಟದಲ್ಲಿ ಕ್ರೀಡಾ ಪಟುಗಳನ್ನು ಆಯ್ಕೆ ಮಾಡಲಾಗುತ್ತಿದೆ.

ರಾಷ್ಟç ಹಾಗೂ ರಾಜ್ಯಮಟ್ಟದಲ್ಲಿ ಆಯ್ಕೆ ಪ್ರಕ್ರಿಯೆಗಳು ನಡೆದಾಗ ಕೊಡಗಿನ ಕ್ರೀಡಾಪಟುಗಳಿಗೆ ಅವಕಾಶಗಳು ಕಡಿಮೆ ಆದ ಹಿನ್ನೆಲೆಯಲ್ಲಿ ಈ ಹಿಂದಿನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಬಲದೇವಕೃಷ್ಣ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದ ಕೆ.ಪಿ. ಚಂದ್ರಕಲಾ, ಸದಸ್ಯ ಹಾಗೂ ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿದ್ದ ಸಿ.ಎಸ್. ಅರುಣ್ ಮಾಚಯ್ಯ ಅವಧಿಯಲ್ಲಿ ಸರ್ವ ಸದಸ್ಯರು ಒಕ್ಕೊರಲಿನ ನಿರ್ಣಯವನ್ನು ಕೈಗೊಂಡು ಕೊಡಗಿಗೆ ಪ್ರತ್ಯೇಕ ಕ್ರೀಡಾ ವಸತಿ ಶಾಲೆಯ ಅವಶ್ಯಕತೆಯಿದೆ ಎಂದು ಕರ್ನಾಟಕ ಸರ್ಕಾರಕ್ಕೆ ೨೦೦೧ರಲ್ಲಿ ಕಳುಹಿಸಿಕೊಡಲಾಗಿತ್ತು.

ಅರುಣ್ ಮಾಚಯ್ಯ ಅವರ ವಿಶೇಷ ಆಸಕ್ತಿಯಲ್ಲಿ ಲಿಂಕ್ ಡಾಂಕ್ಯೂಮೆAಟ್‌ನಲ್ಲಿ ಕೊಡಗಿನ ಪೊನ್ನಂಪೇಟೆಗೆ ಕ್ರೀಡಾ ವಸತಿ ಶಾಲೆಯನ್ನು ಸೇರಿಸುವ ಮೂಲಕ ರಾಜ್ಯ ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಬಿಡುಗಡೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದರು. ಇದರಿಂದ ಕೊಡಗಿನ ವಿವಿಧ ಭಾಗದಿಂದ ಕ್ರೀಡಾ ಪಟುಗಳು ತಮ್ಮ ಪ್ರತಿಭೆಯನ್ನು ಹೊರ ಸೂಸುವದರೊಂದಿಗೆ ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ನೂರಾರು ಕ್ರೀಡಾಪಟುಗಳು ಹೆಸರು ಮಾಡಿದ್ದಾರೆ. ಪೊನ್ನಂಪೇಟೆ ಕ್ರೀಡಾ ಶಾಲೆಯು ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಅಲ್ಲದೆ ಉತ್ತಮ ರೀತಿಯಲ್ಲಿ ಇಲ್ಲಿಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಇಲ್ಲಿಯ ಕ್ರೀಡಾಪಟುಗಳು ಸಾಧನೆ ಮಾಡಿದ್ದಾರೆ.

(ಮೊದಲ ಪುಟದಿಂದ) ಇದೀಗ ಸರ್ಕಾರದ ಕೆಲವು ಅಧಿಕಾರಿಗಳ ಕುಮ್ಮಕ್ಕಿನಿಂದ ಪೊನ್ನಂಪೇಟೆ ಕ್ರೀಡಾ ವಸತಿ ಶಾಲೆಯನ್ನು ಏಕಾಎಕಿ ರದ್ದು ಮಾಡುವ ವಾಮಮಾರ್ಗಕ್ಕೆ ಮುಂದಾಗಿರುವುದು ಕಂಡು ಬರುತ್ತಿದೆ. ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿದ್ದ ಕ್ರೀಡಾಪಟುಗಳ ಆಯ್ಕೆಯನ್ನು ಯಾರ ಗಮನಕ್ಕೂ ಬಾರದ ರೀತಿಯಲ್ಲಿ ಏಕಾಏಕಿ ನಿಯಮ ಬದಲಿಸಿ ರಾಜ್ಯಮಟ್ಟದ ಆಯ್ಕೆ ಪ್ರಕ್ರಿಯೆಗೆ ಒಳಪಡಿಸಲಾಗಿದೆ. ಇದರಲ್ಲಿ ಯಾರ ಕೈವಾಡ ಅಡಗಿದೆ ಎಂದು ಬಯಲಾಗಬೇಕಾಗಿದೆ. ಪ್ರಸ್ತುತ ಸಾಲಿನಲ್ಲಿ ಪೊನ್ನಂಪೇಟೆಯ ಕ್ರೀಡಾ ವಸತಿ ಶಾಲೆಗೆ ಜಿಲ್ಲಾ ಮಟ್ಟದಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದ್ದು, ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು. ಈ ಪೈಕಿ ೧೫ ಬಾಲಕರು ಹಾಗೂ ಮೂವರು ವಿದ್ಯಾರ್ಥಿನಿಯರ ಈ ಆಯ್ಕೆಯನ್ನು ಏಕಾಏಕಿ ರದ್ದುಗೊಳಿಸಿ, ೧೮ ಕ್ರೀಡಾಪಟುಗಳನ್ನು ಅತಂತ್ರಗೊಳಿಸಿದ್ದಾರೆ. ಬದಲಿಗೆ ರಾಜ್ಯಮಟ್ಟದಲ್ಲಿ ಆಯ್ಕೆಯಾಗಿರುವ ಮಕ್ಕಳನ್ನು ಸೇರಿಸುವ ಹುನ್ನಾರ ನಡೆದಿದೆ. ಜಿಲ್ಲಾಮಟ್ಟದಲ್ಲಿ ಪೊನ್ನಂಪೇಟೆಗೆ ಆಯ್ಕೆಯಾಗಿರುವ ಮಕ್ಕಳಿಗೆ ಅನ್ಯಯವಾದಂತಾಗಿದೆ. ಒಟ್ಟಾಗಿ ಕೊಡಗಿನ ಪೊನ್ನಂಪೇಟೆಯ ಕ್ರೀಡಾ ವಸತಿ ಶಾಲೆಯು ತನ್ನ ಅಸ್ತಿತ್ವ ಕಳೆದುಕೊಳ್ಳುವ ಅಪಾಯದಲ್ಲಿದೆ.