ಕೂಡಿಗೆ, ಮೇ ೨೬: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ತಾಲೂಕು ಸಾಮಾಜಿಕ ಅರಣ್ಯ ಇಲಾಖೆಯ ವತಿಯಿಂದ ವಿವಿಧ ಯೋಜನೆ ಅಡಿಯಲ್ಲಿ ಬೆಳೆಸಲಾಗಿರುವ ಗಿಡಗಳನ್ನು ಸರಕಾರ ನಿಗದಿಪಡಿಸಿದ ದರದಲ್ಲಿ ರೈತರಿಗೆ ವಿತರಣೆ ಮಾಡುವ ಕಾರ್ಯಕ್ಕೆ ಹುದುಗೂರು ಸಾಮಾಜಿಕ ಅರಣ್ಯ ಇಲಾಖೆಯ ಉಪವಿಭಾಗ ಅಧಿಕಾರಿ ಫಿರೋಜ್ ಖಾನ್ ಚಾಲನೆ ನೀಡಿದರು.

ಸಸ್ಯ ಕ್ಷೇತ್ರದಲ್ಲಿ ಸುಮಾರು ೫೨ ಬಗೆಯ ವಿವಿಧ ಕಾಡು ಜಾತಿ ಸಸ್ಯಗಳು, ಮತ್ತು ಔಷಧೀಯ ಗುಣಗಳನ್ನು ಹೊಂದಿರುವ ಸಸ್ಯಗಳನ್ನು ಬೆಳೆಸಲಾಗಿದೆ ರೈತರು ಜಮೀನಿನ ದಾಖಲೆ ಮತ್ತು ಆಧಾರ್ ಕಾರ್ಡ್ಗಳ ಜೆರಾಕ್ಸ್ ಗಳನ್ನು ನೀಡಿ ಸರಕಾರ ನಿಗದಿಪಡಿಸಿದ ದರವನ್ನು ಪಾವತಿಸಿ ಪಡೆದುಕೊಳ್ಳಬಹುದು. ಇದರ ಸದುಪಯೋಗವನ್ನು ರೈತರು ಬಳಕೆ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ಅರಣ್ಯ ರಕ್ಷಕ ಗಣೇಶ್ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಗೂ ರೈತರು ಹಾಜರಿದ್ದರು.