ಮಡಿಕೇರಿ, ಮೇ ೨೬: ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ಮಹಾಸಭೆ ತಾ. ೨೮ ರಂದು (ನಾಳೆ) ಕೈಕೇರಿಯ ವಿಪ್ರ ಸಭಾಭವನದಲ್ಲಿ ನಡೆಯಲಿದೆ. ಬೆಳಿಗ್ಗೆ ೭ ಗಂಟೆಗೆ ಗಣಹೋಮ, ನಂತರ ಸತ್ಯನಾರಾಯಣ ಪೂಜೆ ನಡೆಯಲಿದ್ದು, ೧೦.೩೦ ಕ್ಕೆ ತೀರ್ಥ ಪ್ರಸಾದ ವಿತರಣೆಯ ನಂತರ ಸಭೆ ನಡೆಯಲಿದೆ. ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿದೆ. ಸಂಘದ ಎಲ್ಲಾ ಸದಸ್ಯರು ಹಾಜರಾಗಬೇಕೆಂದು ಆಡಳಿತ ಮಂಡಳಿ ಮತ್ತು ಅಧ್ಯಕ್ಷರು ಕೋರಿದ್ದಾರೆ.